ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆಂಟಿ-ಹೈಜಾಕ್‌ ಅಣುಕು ಪ್ರದರ್ಶನ

ಭದ್ರತೆ ಮತ್ತು ತುರ್ತು ಪ್ರತಿಕ್ರಿಯೆಯ ಪ್ರೋಟೋಕಾಲ್‌ನ ಭಾಗವಾಗಿ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ)ಯು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BLR ವಿಮಾನ ನಿಲ್ದಾಣ) ಆಂಟಿ-ಹೈಜಾಕ್ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆಂಟಿ-ಹೈಜಾಕ್‌ ಅಣುಕು ಪ್ರದರ್ಶನ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆಂಟಿ-ಹೈಜಾಕ್‌ ಅಣುಕು ಪ್ರದರ್ಶನ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 26, 2024 | 7:45 PM

ಬೆಂಗಳೂರು, ಜೂನ್.26: ಭದ್ರತೆ ಮತ್ತು ತುರ್ತು ಪ್ರತಿಕ್ರಿಯೆಯ ಪ್ರೋಟೋಕಾಲ್‌ನ ಭಾಗವಾಗಿ ರಾಷ್ಟ್ರೀಯ ಭದ್ರತಾ ಪಡೆ (NSG)ಯು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(Airport)ದಲ್ಲಿ ಆಂಟಿ-ಹೈಜಾಕ್ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು. ಸೋಮವಾರ(ಜೂ.24)ರಾತ್ರಿ 8 ಗಂಟೆಗೆ ಆರಂಭಗೊಂಡು, ಮಧ್ಯರಾತ್ರಿ ಮುಕ್ತಾಯಗೊಂಡ ಈ ಅಣುಕು ಪ್ರದರ್ಶನವು ನೈಜ-ಸಮಯದ ಸಂವಹನ ವ್ಯವಸ್ಥೆ, ಸುಧಾರಿತ ಕಣ್ಗಾವಲು ಉಪಕರಣಗಳು ಮತ್ತು ಅತ್ಯಾಧುನಿಕ ಭಯೋತ್ಪಾದನಾ-ವಿರೋಧಿ ಕ್ರಮಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಕುರಿತು ಎನ್ಎಸ್‌ಜಿಯು ಪ್ರದರ್ಶಿಸಿತು.

ಈ ಅಣುಕು ಪ್ರದರ್ಶನವು ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ತೋರಿಸುವ ನಿಲುವು, ವಿಮಾನ ನಿಲ್ದಾಣದ ಯುದ್ಧತಂತ್ರದ ಸಿದ್ಧತೆಯನ್ನು ನಿರ್ಣಯಿಸಲು ಮತ್ತು ಸುಧಾರಿಸಲು ವಿನ್ಯಾಸಗೊಳಿಸಲಾದ ವಿವಿಧ ಸನ್ನಿವೇಶಗಳನ್ನು ಒಳಗೊಂಡಿರುತ್ತದೆ. ಇನ್ನು ಈ ವೇಳೆ ಅಪಹರಿಸಿದ ವಿಮಾನವು ಬೆಂಗಳೂರು ಏರ್‌ಪೋರ್ಟ್‌ಗೆ ಬಂದು ಇಳಿದ ಕೃತಕ ಸನ್ನಿವೇಶವನ್ನು ತೋರಿಸಲಾಯಿತು.

ಇದನ್ನೂ ಓದಿ:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಕಿರಣ ಸೋರಿಕೆ ಅಣುಕು ಪ್ರದರ್ಶನ

ಇನ್ನು ಈ ಅಣುಕು ಪ್ರದರ್ಶನವನ್ನು ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಭಾರತ ಸರ್ಕಾರ, ಸಿಐಎಸ್‌ಎಫ್, ಗ್ರೌಂಡ್ ಹ್ಯಾಂಡ್ಲಿಂಗ್ ಏಜೆನ್ಸಿಗಳು, ಸಿಟಿ ಆಸ್ಪತ್ರೆಗಳು, ಭಾರತೀಯ ವಾಯುಪಡೆ (ಐಎಎಫ್), ಪೊಲೀಸ್, ಟ್ರಾಫಿಕ್ ಪೊಲೀಸ್, ಏರ್ ಟ್ರಾಫಿಕ್ ಸರ್ವೀಸಸ್ ಕಂಟ್ರೋಲ್ (ಎಟಿಸಿ), ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಸ್ಥಳೀಯ ಸಮುದಾಯಗಳು, ನಾಗರಿಕ ಸಂಘ ಸಂಸ್ಥೆಗಳು, ವಾಯುಯಾನ ಸಂಸ್ಥೆಗಳು ಮತ್ತು ಜಿಲ್ಲಾ ಆಡಳಿತ ಅಧಿಕಾರಿಗಳು ಸೇರಿದಂತೆ ಪ್ರಮುಖ ಪಾಲುದಾರರ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ವಿಮಾನ ಹೈಜಾಕ್​ ಆದಾಗ ತರಬೇತಿ ಪಡೆದ ಸಮಾಲೋಚಕರು, ವಿಮಾನ ಆಗಮನದ ನಂತರ ಹೈಜಾಕರ್ಸ್‌ನೊಂದಿಗೆ ಸಂಧಾನ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಾರೆ. ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಭಾಹಿಸುವ ಗುರಿ ಹೊಂದಿರುತ್ತಾರೆ, ಒಂದು ವೇಳೆ ಮಾತುಕತೆ ವಿಫಲವಾದಲ್ಲಿ ರಾಷ್ಟ್ರೀಯ ಭದ್ರತಾ ಪಡೆಯು (NSG) ಮಧ್ಯಪ್ರವೇಶಿಸಲು ಮುಂದಾಗುತ್ತದೆ. ಬೆದರಿಕೆಯ ಮುಂಜಾಗರುಕತೆ ಮತ್ತು ಪರಿಣಾಮಕಾರಿ ನಿಯಂತ್ರಣದಲ್ಲಿ ಕಡಿಮೆ ಹಾನಿ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಪ್ರಮುಖವಾಗಿ ಇರಿಸಲಾಗುತ್ತದೆ.

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್ ಅವರು ಅಣುಕು ಪ್ರದರ್ಶನದ ಮಹತ್ವವನ್ನು ಹೇಳುತ್ತಾ, “ಈ ಆಂಟಿ-ಹೈಜಾಕ್ ಅಣುಕು ಪ್ರದರ್ಶನ ನಡೆಸುವುದು ಬಿಎಲ್‌ಆರ್ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಲಪಡಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಇದು ನಮ್ಮ ಪ್ರತಿಕ್ರಿಯೆ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪರೀಕ್ಷಿಸಲು, ಅಂತರ್‌-ಇಲಾಖೆಯ ಸಮನ್ವಯವನ್ನು ಹೆಚ್ಚಿಸಲು ಮತ್ತು ನೈಜ-ಜೀವನದ ಸನ್ನಿವೇಶಗಳಿಗೆ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಅಣುಕು ಪ್ರದರ್ಶನವನ್ನು ಸಾಧ್ಯವಾಗಿಸಿದ ಎಲ್ಲಾ ಆಂತರಿಕ ಮತ್ತು ಬಾಹ್ಯ ಮಧ್ಯಸ್ಥಗಾರರಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸುರಕ್ಷತೆ, ಭದ್ರತೆಯನ್ನು ಒದಗಿಸಲು ಇಂತಹ ಪೂರ್ವಭಾವಿ ಉಪಕ್ರಮಗಳು ಅಗತ್ಯವಾಗಿದೆ ಎಂದರು.

ಇದನ್ನೂ ಓದಿ:ಮಂಗಳೂರು ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ದುರಂತ ನಡೆದರೆ ಅಪಾಯ ತಡೆಗಟ್ಟುವ ಬಗ್ಗೆ ಅಣಕು ಪ್ರದರ್ಶನ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಣುಕು ಪ್ರದರ್ಶನದ ನಂತರ ಪ್ರಮುಖ ಶಿಫಾರಸ್ಸುಗಳ ಕುರಿತು ಸಂಪೂರ್ಣವಾದ ವಿವರಣೆ ಮತ್ತು ಮೌಲ್ಯಮಾಪನ ನಡೆಸಲಾಗುತ್ತದೆ. ಈ ಅಣುಕು ಪ್ರದರ್ಶನ ತುರ್ತು ಪ್ರತಿಕ್ರಿಯೆ ಪ್ರೋಟೋಕಾಲ್‌, ಸಂವಹನ ಚೌಕಟ್ಟು ಮತ್ತು ಮಧ್ಯಸ್ಥಗಾರರ ಸಹಯೋಗವನ್ನು ಪರಿಷ್ಕರಿಸಲು ಸಹಕಾರಿಯಾಗುತ್ತದೆ. ಇದು, ಸುರಕ್ಷತೆ ಮತ್ತು ಸನ್ನದ್ಧತೆಗೆ ವಿಮಾನ ನಿಲ್ದಾಣದ ಬದ್ಧತೆಯನ್ನು ಬಲಪಡಿಸುತ್ತದೆ.

ಇಂಟರ್ನ್ಯಾಷನಲ್ ಸಿವಿಲ್ ಏವಿಯೇಷನ್ ಆರ್ಗನೈಸೇಶನ್ ಮತ್ತು ಡಿಜಿಸಿಎ ನಿಯಮಗಳಿಗೆ ಅನುಸಾರವಾಗಿ ಈ ಏರ್‌ಪೋರ್ಟ್‌ನ ಭದ್ರತಾ ಕ್ರಮಗಳು ಮತ್ತು ತುರ್ತು ಪ್ರತಿಕ್ರಿಯೆ ಸಾಮರ್ಥ್ಯವನ್ನು ಹೆಚ್ಚಿಸಲು ಈ ಅಣುಕು ಪ್ರದರ್ಶನ ಹೊಂದಿಕೆಯಾಗುತ್ತಿದೆ. ಯಾವುದೇ ಪರಿಸ್ಥಿತಿ ಅಥವಾ ಸನ್ನಿವೇಶದಲ್ಲಿ ಎಲ್ಲಾ ವಿಮಾನ ನಿಲ್ದಾಣ ಬಳಕೆದಾರರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಸುರಕ್ಷಿತ ವಾತಾವರಣವನ್ನು ಒದಗಿಸುವ ಗುರಿಯನ್ನು ಇದು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ