ಬೆಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣಕ್ಕೆ ಕೇಂದ್ರ ಕ್ರೀಡಾ ಸಚಿವ ಅನುರಾಗ್​​ ಠಾಕೂರ್ ಭೇಟಿ

Anurag Thakur: ಭಾರತ್ ಫಸ್ಟ್ ಕ್ರೀಡಾ ಕಾರ್ಯಕ್ರಮದಲ್ಲಿ ಕೇಂದ್ರ ಕ್ರೀಡಾ ಇಲಾಖೆ ಸಚಿವ ಅನುರಾಗ್ ಠಾಕೂರ್, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ, ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ಭಾಗವಹಿಸಿದ್ದಾರೆ.

ಬೆಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣಕ್ಕೆ ಕೇಂದ್ರ ಕ್ರೀಡಾ ಸಚಿವ ಅನುರಾಗ್​​ ಠಾಕೂರ್ ಭೇಟಿ
ಅನುರಾಗ್ ಠಾಕೂರ್ (ಸಂಗ್ರಹ ಚಿತ್ರ)

ಬೆಂಗಳೂರು: ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣಕ್ಕೆ ಕೇಂದ್ರ ಕ್ರೀಡಾ ಸಚಿವ ಅನುರಾಗ್​​ ಠಾಕೂರ್ ಭೇಟಿ ನೀಡಿ ಕ್ರೀಡಾಂಗಣ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಟೋಕಿಯೋ ಪ್ಯಾರಾ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಸಚಿವ ಅಭಿನಂದನೆ ಸಲ್ಲಿಸಿದ್ದಾರೆ. ಭಾರತಕ್ಕೆ ಇಂದು ದೊಡ್ಡ ದಿನ ಎಂದು ಅನುರಾಗ್ ಠಾಕೂರ್ ಸಂತಸ ಹಂಚಿಕೊಂಡಿದ್ದಾರೆ.

ಭಾರತ್ ಫಸ್ಟ್ ಕ್ರೀಡಾ ಕಾರ್ಯಕ್ರಮದಲ್ಲಿ ಕೇಂದ್ರ ಕ್ರೀಡಾ ಇಲಾಖೆ ಸಚಿವ ಅನುರಾಗ್ ಠಾಕೂರ್, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ, ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ಭಾಗವಹಿಸಿದ್ದಾರೆ. ಯುವ ಕ್ರೀಡಾಪಟುಗಳ ಜೊತೆ ಠಾಕೂರ್ ಸಂವಾದ ನಡೆಸಿದ್ದಾರೆ. ಜಯನಗರದ ಚೆನ್ನಮ್ಮ ಮೈದಾನದಲ್ಲಿ ಕಾರ್ಯಕ್ರಮ ನಡೆದಿದೆ.

ಬೆಂಗಳೂರಿನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣಕ್ಕೆ ಕೇಂದ್ರ ಕ್ರೀಡಾ ಸಚಿವ ಅನುರಾಗ್​​ ಠಾಕೂರ್ ಭೇಟಿ ನೀಡಿದ್ದಾರೆ. ಕ್ರೀಡಾಂಗಣ ಪರಿಶೀಲಿಸಿದ್ದಾರೆ. ಟೋಕಿಯೋ ಪ್ಯಾರಾ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಸಚಿವ ಅಭಿನಂದನೆ ಸಲ್ಲಿಸಿದ್ದಾರೆ. ಭಾರತಕ್ಕೆ ಇಂದು ದೊಡ್ಡ ದಿನ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ. ಇಂದು ಟೋಕಿಯೋ ಪ್ಯಾರಾಲಿಂಪಿಕ್ಸ್​​​ನಲ್ಲಿ 19 ಪದಕಗಳು ಲಭಿಸಿವೆ. ಪ್ಯಾರಾಲಿಂಪಿಕ್ಸ್​​​ನಲ್ಲಿಂದು ಭಾರತ 19 ಪದಕಗಳನ್ನ ಗೆದ್ದಿದೆ. ಪದಕಗಳ ಪಟ್ಟಿಯಲ್ಲಿ ಭಾರತ ದೇಶ 24ನೇ ಸ್ಥಾನದಲ್ಲಿದೆ ಎಂದು ಬೆಂಗಳೂರಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಂತಸ ಹಂಚಿಕೊಂಡಿದ್ದಾರೆ.

ಕೊರೊನಾ ನಿಯಮಗಳ ಉಲ್ಲಂಘನೆ
ಕೇಂದ್ರ ಸಚಿವರ ಕಾರ್ಯಕ್ರಮದಲ್ಲೇ ಕೊವಿಡ್ ರೂಲ್ಸ್​ ಬ್ರೇಕ್ ಮಾಡಿರುವ ಬಗ್ಗೆ ತಿಳಿದುಬಂದಿದೆ. ಸಚಿವ ಅನುರಾಗ್ ಠಾಕೂರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಕ್ರೀಡಾ ಸಚಿವ ಅನುರಾಗ್ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು, ಪಕ್ಷದ ಕಾರ್ಯಕರ್ತರು ಸೆಲ್ಫಿಗೆ ಮುಗಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಮಾಸ್ಕ್ ಧರಿಸದೇ, ಅಂತರ ಮರೆತು ಸೆಲ್ಫಿಗೆ ನೂಕುನುಗ್ಗಲು ಉಂಟಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಗೆದ್ದ ಕನ್ನಡಿಗ: ಬ್ಯಾಡ್ಮಿಂಟನ್​ನಲ್ಲಿ ಐಎಎಸ್ ಅಧಿಕಾರಿ ಸುಹಾಸ್​ಗೆ ಪದಕ

ಇದನ್ನೂ ಓದಿ: Tokyo Paralympics: ಪ್ಯಾರಾಲಿಂಪಿಕ್ಸ್ ಸಮಾರೋಪ ಸಮಾರಂಭದಲ್ಲಿ ಧ್ವಜಧಾರಿಯಾಗಲಿದ್ದಾರೆ 2 ಪದಕ ಗೆದ್ದ ಅವನಿ ಲೇಖರಾ

Click on your DTH Provider to Add TV9 Kannada