AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪೆಕ್ಸ್ ಬ್ಯಾಂಕ್ ಹಗರಣ: ಕೆಎನ್ ರಾಜಣ್ಣ ವಿರುದ್ಧ ರಾಜ್ಯಪಾಲರ ಮೊರೆ ಹೋದ ದಿನೇಶ್ ಕಲ್ಲಹಳ್ಳಿ

ಅಪೆಕ್ಸ್ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ 2 ಸಾವಿರ ಕೋಟಿ ರೂ. ಅಧಿಕ ಮೊತ್ತದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಸಚಿವ ಕೆ ಎನ್ ರಾಜಣ್ಣ ವಿರುದ್ದ ಪ್ರಕರಣವನ್ನು ಮೂರು ತಿಂಗಳಲ್ಲಿ ಇತ್ಯರ್ಥ ಮಾಡುವಂತೆ ಸರ್ಕಾದ ಮುಖ್ಯಕಾರ್ಯದರ್ಶಿಗಳಿಗೆ ಹೈಕೋರ್ಟ್​ ಸೂಚಿಸಿತ್ತು. ಅದರೆ, ಸರ್ಕಾರ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಪತ್ರಬರೆದಿದ್ದಾರೆ.

ಅಪೆಕ್ಸ್ ಬ್ಯಾಂಕ್ ಹಗರಣ: ಕೆಎನ್ ರಾಜಣ್ಣ ವಿರುದ್ಧ ರಾಜ್ಯಪಾಲರ ಮೊರೆ ಹೋದ ದಿನೇಶ್ ಕಲ್ಲಹಳ್ಳಿ
ಕೆಎನ್ ರಾಜಣ್ಣ
Sunil MH
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 18, 2024 | 3:02 PM

Share

ಬೆಂಗಳೂರು, ಸೆ.18: ಸಚಿವ ಕೆಎನ್ ರಾಜಣ್ಣ(KN Rajanna) ವಿರುದ್ಧ ಪ್ರಾಸಿಕ್ಯೂಷನ್ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ಅವರು ಇದೀಗ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅಪೆಕ್ಸ್ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ 2 ಸಾವಿರ ಕೋಟಿ ರೂ ಅಧಿಕ ಮೊತ್ತದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಸಚಿವ ಕೆ ಎನ್ ರಾಜಣ್ಣ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಕೋರ್ಟ್ ಮೂರು ತಿಂಗಳಲ್ಲಿ ಪ್ರಕರಣ ಇತ್ಯರ್ಥ ಮಾಡುವಂತೆ ಸರ್ಕಾದ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿತ್ತು. ಅದರೆ, ಸರ್ಕಾರ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಪತ್ರಬರೆದಿದ್ದಾರೆ.

ಅಪೆಕ್ಸ್ ಬ್ಯಾಂಕ್ ಅಕ್ರಮಗಳ ಕುರಿತು ಸಚಿವ ಕೆ ಎನ್ ರಾಜಣ್ಣ ಅವರನ್ನು ಕರ್ನಾಟಕ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಭ್ರಷ್ಟಾಚಾರ ತಡೆ ಅಧಿನಿಯಮ 1988ರ ಪ್ರಕರಣ 19 ಮತ್ತು ದಂಡ ಪ್ರಕ್ರಿಯೆ ಸಂಹಿತೆ 1973 ಖಾಸಗಿ ತನಿಖೆಗೊಳಪಡಿಸಲು ದೂರು ದಾಖಲಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲರಿಗೆ 2023ರ ಆಗಸ್ಟ್ 29ರಂದು ದೂರು ಸಲ್ಲಿಸಿದ್ದರು. ಆದರೆ, ಈ ಕುರಿತು ರಾಜ್ಯ ಸರ್ಕಾರವು ಇದುವರೆಗೂ ಯಾವುದೇ ಕ್ರಮವಹಿಸಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ರಾಜಣ್ಣ ಬಳಿ ಎಲ್ಲ ಮಾಹಿತಿ ಇರುವಂತಿದೆ, ಎಸ್ಐಟಿ ಅವರನ್ನೇ ಮೊದಲು ತನಿಖೆಗೊಳಪಡಿಸಬೇಕು: ಸಿಟಿ ರವಿ

ದೂರಿನಲ್ಲೆನಿದೆ?

ರಾಜ್ಯ ಅಪೆಕ್ಸ್​ ಬ್ಯಾಂಕ್​ ವ್ಯವಸ್ಥಾಪಕ ನಿರ್ದೇಶಕ ಸಿಎನ್​ ದೇವರಾಜ್​ ಅವರು ಖಾಸಗಿ ವ್ಯಕ್ತಿಗಳು, ವಾಣಿಜ್ಯ ಸಂಸ್ಥೆಗಳು, ಟ್ರಸ್ಟ್​ಗಳಿಗೆ ಯಾವುದೇ ಜಾಮೀನು ಮತ್ತು ಭದ್ರತೆ ಪಡೆಯದೇ ಕಟ್ಟಡ ನಿರ್ಮಾಣ ಕಂಪನಿ, ಚಿನ್ನದ ಅಂಗಡಿ, ಸಕ್ಕರೆ ಕಾರ್ಖಾನೆಗಳಿಗೆ  ನೂರಾರು ಕೋಟಿ ರೂಪಾಯಿ ನೀಡಲಾಗಿದೆ. ಈ ಸಾಲದ ವ್ಯವಹಾರದಲ್ಲಿ ಅವ್ಯವಹಾರ ನಡೆದಿದ್ದು, ಇದು ತನಿಖೆಯಿಂದಲೂ ಸಾಬೀತಾಗಿದೆ. ಈ ಎಲ್ಲಾ ಪ್ರಕರಣಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ