ಅಂತರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ ಹಿನ್ನೆಲೆ ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಯುವತಿಯರಿಗೆ ಅರ್ಜಿ ಆಹ್ವಾನ

ದೇಶದ 18 ರಿಂದ 23ರ ವಯಸ್ಸಿನ ಯುವತಿಯರಿಗೆ ಯುಕೆಯ ಉನ್ನತ ರಾಜತಾಂತ್ರಿಕ ಅಧಿಕಾರಿಯ ಒಂದು ದಿನದ ಆಡಳಿತ ಅನುಭವ ಪಡೆಯಲು ಅವಕಾಶವನ್ನು ಕಲ್ಪಿಸಲು 'ಹೈಕಮಿಷನರ್ ಫಾರ್ ಎ ಡೇ' ಸ್ಪರ್ಧೆ ಏರ್ಪಡಿಸಿದ್ದಾರೆ.

ಅಂತರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ ಹಿನ್ನೆಲೆ ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಯುವತಿಯರಿಗೆ ಅರ್ಜಿ ಆಹ್ವಾನ
ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ
Follow us
TV9 Web
| Updated By: ಆಯೇಷಾ ಬಾನು

Updated on:Sep 03, 2022 | 8:34 PM

ಬೆಂಗಳೂರು: ಅಕ್ಟೋಬರ್ 11 ರಂದು ಅಂತರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ ಹಿನ್ನೆಲೆ ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಯುವತಿಯರಿಗೆ ಅವಕಾಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷದಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳು ಒಂದು ದಿನ ಕ್ರೀಡಾಧಿಕಾರಿಯಾಗಿ ಅಧಿಕಾರ ಅನುಭವ ಪಡೆಯಬಹುದಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಪ್ರಯುಕ್ತ ಭಾರತದಲ್ಲಿನ ಬ್ರಿಟಿಷ್ ಹೈಕಮಿಷನ್ ನಮ್ಮ ದೇಶದ 18 ರಿಂದ 23ರ ವಯಸ್ಸಿನ ಯುವತಿಯರಿಗೆ ಯುಕೆಯ ಉನ್ನತ ರಾಜತಾಂತ್ರಿಕ ಅಧಿಕಾರಿಯ ಒಂದು ದಿನದ ಆಡಳಿತ ಅನುಭವ ಪಡೆಯಲು ಅವಕಾಶವನ್ನು ಕಲ್ಪಿಸಲು ‘ಹೈಕಮಿಷನರ್ ಫಾರ್ ಎ ಡೇ’ ಸ್ಪರ್ಧೆ ಏರ್ಪಡಿಸಿದ್ದಾರೆ. ಅದಕ್ಕಾಗಿ ಆಸಕ್ತ ಯುವತಿಯರಿಂದ ವಿವರಗಳನ್ನು ಆಹ್ವಾನಿಸಿದೆ. ಅದೇ ರೀತಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ/ಉಪ ನಿರ್ದೇಶಕರ ಕಾರ್ಯ ವೈಖರಿಯನ್ನು ಪರಿಚಯಿಸಲು 18 ರಿಂದ 23 ವರ್ಷ ವಯಸ್ಸಿನ ಯುವತಿಯರು ಎಲ್ಲಾ ಜಿಲ್ಲೆಗಳ ಸಹಾಯಕ ಉಪ ನಿರ್ದೇಶಕರ ಜೊತೆಯಲ್ಲಿ ಒಂದು ದಿನ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಅಕ್ಟೋಬರ್ 11, ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯಂದು ಒಂದು ದಿನ ಯುವ ಕ್ರೀಡಾ ಅಧಿಕಾರಿಯಾಗಿ ಅನುಭವ ಪಡೆಯಲು ಆಸಕ್ತ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಯುವತಿಯರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 25 ರವರೆಗೂ ಕಾಲಾವಕಾಶ ನೀಡಲಾಗಿದೆ. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಈ ಲಿಂಕ್ https://bit.ly/Oct 11 ಮೂಲಕ ಅರ್ಜಿ ಸಲ್ಲಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:28 pm, Sat, 3 September 22