ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2022-23 ನೇ ಸಾಲಿನ ಐಸಿಐಸಿಐ ಫೌಂಡೇಷನ್ ಸಹಯೋಗದೊಂದಿಗೆ ರಿಟೇಲ್ ಸೇಲ್ಸ್ ಮತ್ತು ಆಫೀಸ್ ಆಡ್ಮೀನ್ಟ್ರೇಷನ್ ತರಬೇತಿ (training) ನೀಡಲಾಗುತ್ತಿದೆ. ಜೊತೆಗೆ ಸೋಲಾರ್ ರಿಪೇರಿ ಮತ್ತು ಅಳವಡಿಸುವ ತರಬೇತಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೀಡಬೇಕಾದ ದಾಖಲೆಗಳು:
ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಪಡಿತರ ಚೀಟಿ ಹೊಂದಿರಬೇಕು. ವೋಟರ್ ಐಡಿ ಹೊಂದಿರಬೇಕು ಹಾಗೂ ಎಸ್.ಎಸ್.ಎಲ್.ಸಿ ಅಂಕ ಪಟ್ಟಿ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ https://kmvstdcl.karnataka.gov.in ನಲ್ಲಿ ನವೆಂಬರ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ನಗರ ಜಿಲ್ಲೆ, 4ನೇ ಮುಖ್ಯ ರಸ್ತೆ, 16ನೇ ಅಡ್ಡ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-27 ಅಥವಾ ದೂರವಾಣಿ ಸಂಖ್ಯೆ: 080-40936621 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.