AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ 6 ರೈಲು ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆಗೆ ಒಪ್ಪಿಗೆ

ಹೆಚ್ಚಿನ ರೈಲುಗಳ ಸಂಚಾರಕ್ಕೆ ಅನುಕೂಲ ಆಗಲು ಹಾಗೂ ರೈಲು ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರಿನ ಆರು ಪ್ರಮುಖ ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್​ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಒಟ್ಟು 639.05 ಕಿಮೀ ದೂರಕ್ಕೆ ಅನುಮತಿ ದೊರೆತಿದ್ದು, ಇದಕ್ಕೆ ಸುಮಾರು 874 ಕೋಟಿ ರೂ. ವೆಚ್ಚವಾಗಲಿದೆ.

ಬೆಂಗಳೂರಿನ ಈ 6 ರೈಲು ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆಗೆ ಒಪ್ಪಿಗೆ
ರೈಲು
ವಿವೇಕ ಬಿರಾದಾರ
|

Updated on: Feb 12, 2024 | 8:29 AM

Share

ಬೆಂಗಳೂರು, ಫೆಬ್ರವರಿ 12: ಹೆಚ್ಚುತ್ತಿರುವ ಪ್ರಯಾಣಿಕರ ಮತ್ತು ಸರಕು ಸಾಗಾಣೆಯ ದೃಷ್ಟಿಯಿಂದ ಲೈನ್​ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರಿನ (Bengaluru) ಆರು ಪ್ರಮುಖ ರೈಲು (Train) ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ (Automatic Signalling System)​ ವ್ಯವಸ್ಥೆಯನ್ನು ಅಳವಡಿಸುವ ನೈಋತ್ಯ ರೈಲ್ವೆ ಇಲಾಖೆಯ (South Western Railway) ಪ್ರಸ್ತಾವನೆಗೆ ರೈಲ್ವೆ ಮಂಡಳಿ (Indian Railway) ಅನುಮೋದನೆ ನೀಡಿದೆ.

ಸ್ವಯಂಚಾಲಿತ ಸಿಗ್ನಲಿಂಗ್​ ಸಿಸ್ಟಂ ಎಲ್ಲೆಲ್ಲಿ?

ಬೆಂಗಳೂರು ನಗರ-ಯಶವಂತಪುರ-ಯಲಹಂಕ 17.75 ಕಿ.ಮೀ

ಯಶವಂತಪುರ-ಅರಸೀಕೆರೆ ವಿಭಾಗದಲ್ಲಿ 160.65 ಕಿ.ಮೀ

ಲೊಟ್ಟೆಗೊಲ್ಲಹಳ್ಳಿ-ಹೊಸೂರು ವಿಭಾಗದ 63.6 ಕಿ.ಮೀ

ವೈಟ್‌ಫೀಲ್ಡ್-ಜೋಲಾರ್‌ಪೇಟೆ ವಿಭಾಗ 119 ಕಿ.ಮೀ

ಬೈಯ್ಯಪ್ಪನಹಳ್ಳಿ-ಪೆನುಕೊಂಡ ವಿಭಾಗ ಚನ್ನಸಂದ್ರ ಮಾರ್ಗವಾಗಿ 139.8 ಕಿ.ಮೀ

ಬೆಂಗಳೂರು ನಗರ-ಮೈಸೂರು 138.25 ಕಿ.ಮೀ

ಹೆಚ್ಚಿನ ರೈಲುಗಳ ಸಂಚಾರಕ್ಕೆ ಅನುಕೂಲ ಆಗಲು ಹಾಗೂ ರೈಲು ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರಿನ ಆರು ಪ್ರಮುಖ ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್​ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಒಟ್ಟು 639.05 ಕಿಮೀ ದೂರಕ್ಕೆ ಅನುಮತಿ ದೊರೆತಿದ್ದು, ಇದಕ್ಕೆ ಸುಮಾರು 874 ಕೋಟಿ ರೂ. ವೆಚ್ಚವಾಗಲಿದೆ. ನೈರುತ್ಯ ರೈಲ್ವೆ ಇಲಾಖೆ ಪ್ರಸ್ತುತ ಬೆಂಗಳೂರು ವಿಭಾಗದಲ್ಲಿ ಕೆಎಸ್‍ಆರ್ ಬೆಂಗಳೂರು ನಗರ-ವೈಟ್‍ಫೀಲ್ಡ್ ವಿಭಾಗದಲ್ಲಿ ಆಟೋಮೆಟಿಕ್ ಸಿಗ್ನಲ್ ಅಳವಡಿಕೆ ಮಾಡಲಾಗಿದೆ.

ನೈಋತ್ಯ ರೈಲ್ವೆ ಇಲಾಖೆ ಅಧಿಕಾರಿಗಳ ಪ್ರಕಾರ, ಇದು ಥ್ರೋಪುಟ್ ಅನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಚೆನ್ನೈ, ಮೈಸೂರು, ಹುಬ್ಬಳ್ಳಿ ಮತ್ತು ಹೈದರಾಬಾದ್ ಸೇರಿದಂತೆ ಎಲ್ಲ ದಿಕ್ಕುಗಳಲ್ಲಿ ಬೆಂಗಳೂರು ಪ್ರದೇಶಕ್ಕೆ ಮತ್ತು ಅಲ್ಲಿಂದ ಬರುವ ರೈಲುಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಬೆಂಗಳೂರಿಗೆ ಶೀಘ್ರ ಬರಲಿದೆ ಸಬ್ ಅರ್ಬನ್ ರೈಲು, ಅಂತಿಮ ಹಂತದಲ್ಲಿ 2 ಕಾರಿಡಾರ್: ಎಂಬಿ ಪಾಟೀಲ್

ಸ್ವಯಂಚಾಲಿತ ಸಿಗ್ನಲಿಂಗ್ ರೈಲು ಮೂಲಸೌಕರ್ಯವನ್ನು ಆಧುನೀಕರಿಸುವ ಮತ್ತು ಉತ್ತಮಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ. ಇದು ಹೆಚ್ಚು ಪರಿಣಾಮಕಾರಿ ಮತ್ತು ದೃಢವಾದ ಸಾರಿಗೆ ಜಾಲವನ್ನು ಖಾತ್ರಿಪಡಿಸುತ್ತದೆ. ಸ್ವಯಂಚಾಲಿತ ಸಿಗ್ನಲಿಂಗ್ ಅಳವಡಿಸುವುದರಿಂದ ಹಲವಾರು ಪ್ರಯೋಜನಗಳಿವೆ ಎಂದು ನೈಋತ್ಯ ರೈಲ್ವೆ ಇಲಾಖೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ್ ಕನಮಡಿ ಹೇಳಿದರು.

ನೈಋತ್ಯ ರೈಲ್ವೆ ಇಲಾಖೆ ಅಧಿಕಾರಿಯ ಪ್ರಕಾರ, ಈ ವ್ಯವಸ್ಥೆ ಅಳವಡಿಸುವುದರಿಂದ ರೈಲುಗಳು ತ್ವರಿತವಾಗಿ ಫ್ಲಾಟಫಾರಂನಿಂದ ನಿರ್ಗಮಿಸುತ್ತವೆ ಮತ್ತು ನಿಲ್ದಾಣಕ್ಕೆ ಬರುವ ಸಮಯ ವಿಳಂಬವನ್ನು ಕಡಿಮೆ ಮಾಡುತ್ತದೆ. ಸ್ವಯಂಚಾಲಿತ ಸಿಗ್ನಲಿಂಗ್‌ನ ಅಳವಡಿಸುವುದರಿಂದ ಎಲ್ಲ ಮಾಧರಿಯ ರೈಲುಗಳ ಕಾರ್ಯಾಚರಣೆಯನ್ನು ಹೆಚ್ಚಿಸುತ್ತದೆ.

ಸುರಕ್ಷತಾ ಮಾನದಂಡಗಳನ್ನು ಅನುಸರಿಸುತ್ತಾ, ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಇದು ಸಹಾಯ ಮಾಡುತ್ತದೆ. ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯು ರೈಲುಗಳ ಸರಾಸರಿ ವೇಗವನ್ನು ಹೆಚ್ಚಿಸುತ್ತದೆ ಏಕೆಂದರೆ ಬ್ಲಾಕ್ ವಿಭಾಗಗಳನ್ನು ವೇಗವಾಗಿ ತೆರವುಗೊಳಿಸಲಾಗುತ್ತದೆ, ಇದು ಸುಗಮ ಮತ್ತು ಹೆಚ್ಚು ಪರಿಣಾಮಕಾರಿ ಪ್ರಯಾಣಕ್ಕೆ ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ