ಆರ್ಯ ವೈಶ್ಯ ನಿಗಮ ಕ್ರಿಯಾ ಯೋಜನೆಗೆ ಅನುಮೋದನೆ; ಸಣ್ಣ ಉದ್ಯಮಿಗಳು ಸದುಪಯೋಗ ಪಡೆದುಕೊಳ್ಳಿ- ಕೃಷ್ಣ ಬೈರೇಗೌಡ ಮನವಿ
ಇಂದು (ಗುರುವಾರ) ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಆರ್ಯ ವೈಶ್ಯ ನಿಗಮ 2024/25ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದ್ದು, ಅದನ್ನು ಸಣ್ಣ ಉದ್ಯಮಿಗಳು ಸದುಪಯೋಗ ಪಡೆದುಕೊಳ್ಳಿ ಎಂದು ಮನವಿ ಮಾಡಿಕೊಂಡರು.
ಬೆಂಗಳೂರು, ಜು.04: ಆರ್ಯ ವೈಶ್ಯ ನಿಗಮ 2024/25ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದ್ದು, ಅದನ್ನು ಸಣ್ಣ ಉದ್ಯಮಿಗಳು ಸದುಪಯೋಗ ಪಡೆದುಕೊಳ್ಳಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ(Krishna Byre Gowda) ಮನವಿ ಮಾಡಿದರು. ಇಂದು (ಗುರುವಾರ) ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ‘ಆರ್ಯ ವೈಶ್ಯ ನಿಗಮದ ಮೂಲಕ ಕಳೆದ ವರ್ಷ 2023-24ರಲ್ಲಿ 800 ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಸಣ್ಣ ಉದ್ಯಮಿಗಳಿಗೆ ಸಾಲ-ಸಹಾಯಧನ ನೀಡಲಾಗಿತ್ತು. ಈ ವರ್ಷವೂ ಸಹ ಈ ಎಲ್ಲಾ ಯೋಜನೆಗಳೂ ಮುಂದುವರೆಯಲಿವೆ ಎಂದರು.
ಇನ್ನು ಇಂದು ನಡೆದ ಸಭೆಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಬಗ್ಗೆ ಚರ್ಚೆ ಮಾಡಿ, ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ ನಿಗಮದ ಸಹಾಯದ ಅಗತ್ಯವಿರುವ ಅರ್ಹ ಸಣ್ಣ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.
ಇದನ್ನೂ ಓದಿ:ಅಮೆರಿಕದ ಬ್ಲೂ ಒರಿಜಿನ್ನ ಗಗನನೌಕೆಯಲ್ಲಿ ಪ್ರಯಾಣಿಸಬೇಕೆ? ಅರ್ಜಿ ಸಲ್ಲಿಕೆಗೆ ಕೇವಲ 200 ರೂ
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 03 ಯೋಜನೆಗಳು
1) ಸ್ವಯಂ-ಉದ್ಯೋಗ ನೇರಸಾಲ ಯೋಜನೆ.
2) ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ.
3) ವಾಸವಿ ಜಲಶಕ್ತಿ ಯೋಜನೆ.
ಈ ಮೇಲಿನ ಯೋಜನೆಗಳಿಗೆ ಅರ್ಜಿಗಳನ್ನು ಇದೇ ಜುಲೈ 12, 2024 ರಿಂದ ಆನ್ಲೈನ್ ಮೂಲಕವೇ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಅಗಸ್ಟ್. 31, 2024 ಕೊನೆಯ ದಿನವಾಗಿದೆ. ಈ ಎಲ್ಲಾ ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ 9448451111 ಅನ್ನು ಸಂಪರ್ಕಿಸಲು ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ