AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಭಾನುವಾರದಂದು ನಮ್ಮ ಮೆಟ್ರೋ ನಸುಕಿನಿಂದಲೇ ಆರಂಭ

ಏಪ್ರಿಲ್ 27 ಭಾನುವಾರದಂದು ನಡೆಯುವ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್‌ನಲ್ಲಿ ಭಾಗವಹಿಸುವವರಿಗೆ ಅನುಕೂಲವಾಗುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮೆಟ್ರೋ ಸೇವೆಯನ್ನು ನಸುಕಿನಿಂದಲೇ ಆರಂಭಿಸುತ್ತಿದೆ. ಸಾಮಾನ್ಯ ದಿನಗಳಿಗಿಂತ ಮೂರು ಗಂಟೆಗಳ ಮುಂಚೆ ಮೆಟ್ರೋ ಸಂಚಾರ ಆರಂಭವಾಗಲಿದೆ. ನಮ್ಮ ಮೆಟ್ರೋ ರೈಲು ಸಂಚಾರ ಆರಂಭದ ಸಮಯ ಮಾಹಿತಿ ಇಲ್ಲಿದೆ.

ಪ್ರಯಾಣಿಕರ ಗಮನಕ್ಕೆ: ಭಾನುವಾರದಂದು ನಮ್ಮ ಮೆಟ್ರೋ ನಸುಕಿನಿಂದಲೇ ಆರಂಭ
ನಮ್ಮ ಮೆಟ್ರೋ
ವಿವೇಕ ಬಿರಾದಾರ
|

Updated on:Apr 26, 2025 | 5:39 PM

Share

ಬೆಂಗಳೂರು, ಏಪ್ರಿಲ್​ 26: ನಮ್ಮ ಮೆಟ್ರೋ (Namma Metro) ಬೆಂಗಳೂರಿಗರ ಜೀವನಾಡಿಯಾಗಿದೆ. ನಮ್ಮ ಮೆಟ್ರೋದಲ್ಲಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಪ್ರಯಾಣಿಸುತ್ತಾರೆ. ನಮ್ಮ ಮೆಟ್ರೋ ಆಗಾಗ ಜನರ ಅನುಕೂಲತೆಗೆ ತಕ್ಕಂತೆ ಹೆಚ್ಚುವರಿ ಸಮಯ ಕಾರ್ಯ ನಿರ್ವಹಿಸುತ್ತದೆ. ಇದೀಗ, ಭಾನುವಾರ (ಏ.27) ರಂದು ನಮ್ಮ ಮೆಟ್ರೋ ಬೆಳಗ್ಗೆ 6 ಗಂಟೆ ಬದಲಾಗಿ ನಸುಕಿನ ಜಾವ 3:30ಕ್ಕೆ ಆರಂಭವಾಗಲುದೆ. ಟಿಸಿಎಸ್​ ವರ್ಲ್ಡ್ 10ಕೆ-2025 ಮ್ಯಾರಥಾನ್​ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮೆಟ್ರೋ ಸಮಯ ವಿಸ್ತರಣೆ ಮಾಡಿದೆ.

ಬೆಳಗ್ಗೆ 3:30ಕ್ಕೆ ರೈಲು ಸೇವೆ ಆರಂಭ

ಟಿಸಿಎಸ್ ವರ್ಲ್ಡ್ 10ಕೆ-2025 ಮ್ಯಾರಥಾನ್‌ನ 17ನೇ ಆವೃತ್ತಿಯಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ, ಬಿಎಂಆರ್‌ಸಿಎಲ್ ಏಪ್ರಿಲ್ 27 ರ ಭಾನುವಾರ ಬೆಳಿಗ್ಗೆ, 3:30ಕ್ಕೆ ಮೆಟ್ರೋ ರೈಲು ಸೇವೆ ಪ್ರಾರಂಭವಾಗಲಿದೆ. ಇದು ಸಾಮಾನ್ಯ ಸಮಯಕ್ಕಿಂತ ಮೂರುವರೆ ಗಂಟೆಗಳ ಮುಂಚೆಯೇ ಪ್ರಾರಂಭವಾಗುತದೆ. ಈ ವಿಸ್ತ್ರತ ಅವಧಿಯಲ್ಲಿ ನಾಲ್ಕು ಮೆಟ್ರೋ ಟರ್ಮಿನಲ್ ಗಳು ಮತ್ತು ನಾಡಪ್ರಭು ಕೆಂಪೇಗೌಡ ನಿಲ್ಯಾಣ ಮೆಜೆಸ್ಟಿಕ್ ನಿಲ್ಯಾಣದಿಂದ ರೈಲುಗಳು 12 ನಿಮಿಷಗಳ ಅಂತರದಲ್ಲಿ ಚಲಿಸುತ್ತವೆ.

ಇದನ್ನೂ ಓದಿ
Image
ಪ್ರಯಾಣಿಕರಿಗೆ ಬೆಳಗ್ಗೆಯೇ ಕೈಕೊಟ್ಟ ನಮ್ಮ ಮೆಟ್ರೋ: ವಿಡಿಯೋ ವೈರಲ್
Image
ಮೆಟ್ರೋ ನಿಲ್ದಾಣದಲ್ಲಿ ಜೋಡಿ ರೋಮ್ಯಾನ್ಸ್ ವಿಡಿಯೋ ವೈರಲ್
Image
ವಾಹನ ಪಾರ್ಕ್ ಮಾಡಿ ಮೆಟ್ರೋದಲ್ಲಿ ಸಂಚರಿಸುವವರಿಗೆ ಸಿಗಲಿದೆ ಡಿಸ್ಕೌಂಟ್
Image
ನಮ್ಮ ಮೆಟ್ರೋ ಗುಡ್ ನ್ಯೂಸ್: ಐಪಿಎಲ್ ಪ್ರಯುಕ್ತ ಸಂಚಾರ ಸಮಯ ವಿಸ್ತರಣೆ

ಇದೊಂದು ಸುಗಮ ಸಾರಿಗೆಯಾಗಿದ್ದು ಸಾರ್ವಜನಿಕರಿಗೆ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ವರ್ಲ್ಡ್ಸ್​ ಪ್ರೀಮಿಯರ್​ 10K ಓಟದಲ್ಲಿ ಭಾಗವಹಿಸಲು ಮೇಲಿನ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಬಿಎಂಆರ್​​ ಸಿಎಲ್​ ವಿನಂತಿಸಿದೆ.

ಟ್ವಿಟರ್​ ಪೋಸ್ಟ್​

ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ ಏರಿಕೆ

ನಮ್ಮ ಮೆಟ್ರೋ ದೈನಂದಿನ ಪ್ರಯಾಣಿಕರ ಸಂಖ್ಯೆ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದೆ. ಮೆಟ್ರೋ ಟಿಕೆಟ್ ದರ ದುಪ್ಪಟ್ಟು ಹೆಚ್ಚಾದ ಹೊರತಾಗಿಯೂ ದಾಖಲೆಯ ಸಂಖ್ಯೆಯಲ್ಲಿ ಜನ ಪ್ರಯಾಣ ಮಾಡಿರುವುದು ಅಚ್ಚರಿ ಮೂಡಿಸಿದೆ. ಏಪ್ರಿಲ್ 17 ರಂದು ಒಟ್ಟು 9,08,153 ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್ ವಿಡಿಯೋ ವೈರಲ್: ಛೀ, ಥೂ ಎಂದ ನೆಟ್ಟಿಗರು

ಬಿಎಂಆರ್​ಸಿಎಲ್ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಲೈನ್ 1 (ಪರ್ಪಲ್ ಲೈನ್) ರಲ್ಲಿ 4,35,516 ಮಂದಿ ಪ್ರಯಾಣಿಸಿದ್ದಾರೆ ಮತ್ತು ಲೈನ್ 2 (ಗ್ರೀನ್ ಲೈನ್) ರಲ್ಲಿ 2,85,240 ಜನ ಪ್ರಯಾಣಿಸಿದ್ದಾರೆ. ಕೆಂಪೇಗೌಡ ನಿಲ್ದಾಣದಲ್ಲಿ 1,87,397 ಪ್ರಯಾಣಿಕರು ಮಾರ್ಗ ಬದಲಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Sat, 26 April 25

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?