ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಸದನದಲ್ಲಿ ಅಗತ್ಯವಿರುವಷ್ಟು ಉತ್ತರ ಕೊಡಲಾಗಿದೆ. ಇನ್ನೂ ಹೆಚ್ಚಿನ ಉತ್ತರ ನಾವು ಕೊಡಲು ಶಕ್ತವಾಗಿದ್ದೇವೆ. ಕೋರ್ಟ್ ಆದೇಶ ಪಾಲನೆ ಮಾಡುವುದು ನಮ್ಮ ಜವಾಬ್ದಾರಿ. ಅದರ ಅರಿವು ನಮಗಿದೆ. ಎಲ್ಲರೂ ಆದೇಶಕ್ಕೆ ಬದ್ಧ ಆಗಿರಬೇಕು ಎಂದು ಜ್ಞಾನೇಂದ್ರ ಹೇಳಿದ್ದಾರೆ.

ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Feb 15, 2022 | 4:18 PM

ಬೆಂಗಳೂರು: ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ (ಫೆಬ್ರವರಿ 15) ಹೇಳಿಕೆ ನೀಡಿದ್ದಾರೆ. ನ್ಯಾಯಾಲಯದ ಆದೇಶ ಪಾಲನೆ ಮಾಡುವುದು ಸರ್ಕಾರದ ಕರ್ತವ್ಯ ಮತ್ತು ಬದ್ಧತೆ. ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ, ಸಮಸ್ಯೆ ಆದ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಅದನ್ನು ನಾವು ಪರಿಶೀಲನೆ ಮಾಡ್ತಿದ್ದೇವೆ ಎಂದು ಅರಗ ಜ್ಙಾನೇಂದ್ರ ತಿಳಿಸಿದ್ದಾರೆ.

ಹಿಜಾಬ್ ವಿವಾದದ ಬಗ್ಗೆ ಸದನದಲ್ಲಿ ಉತ್ತರ ಕೊಡಲಾಗುವುದು. ನಮಗೂ ಸಮವಸ್ತ್ರ ಪಾಲನೆ ವಿಚಾರದಲ್ಲಿ ಸ್ಪಷ್ಟತೆ ತರುವ ಸದುದ್ದೇಶ ಇದೆ. ಇವತ್ತು ಸದನದಲ್ಲಿ ಈ ವಿಚಾರ ಪ್ರಸ್ತಾಪ ಆಯ್ತು. ಅಗತ್ಯವಿರುವಷ್ಟು ಉತ್ತರ ಕೊಡಲಾಗಿದೆ. ಇನ್ನೂ ಹೆಚ್ಚಿನ ಉತ್ತರ ನಾವು ಕೊಡಲು ಶಕ್ತವಾಗಿದ್ದೇವೆ. ಕೋರ್ಟ್ ಆದೇಶ ಪಾಲನೆ ಮಾಡುವುದು ನಮ್ಮ ಜವಾಬ್ದಾರಿ. ಅದರ ಅರಿವು ನಮಗಿದೆ. ಎಲ್ಲರೂ ಆದೇಶಕ್ಕೆ ಬದ್ಧ ಆಗಿರಬೇಕು ಎಂದು ಜ್ಞಾನೇಂದ್ರ ಹೇಳಿದ್ದಾರೆ.

ಕಾಶ್ಮೀರ ವಿದ್ಯಾರ್ಥಿಗಳನ್ನ ಪ್ರತ್ಯೇಕವಾಗಿ ಕಾಣುತ್ತಿಲ್ಲ: ಕಮಲ್ ಪಂತ್ ಸ್ಪಷ್ಟನೆ

ಮುನ್ನೆಚ್ಚರಿಕಾ ಕ್ರಮವಾಗಿ ಮಾಹಿತಿ ಕೇಳಿರುವುದಕ್ಕೆ ಕಾಶ್ಮೀರಿ ವಿದ್ಯಾರ್ಥಿಗಳ ಅಸಮಾಧಾನ ಹಿನ್ನೆಲೆ ಕಾಶ್ಮೀರ ವಿದ್ಯಾರ್ಥಿಗಳನ್ನ ಪ್ರತ್ಯೇಕವಾಗಿ ಕಾಣುತ್ತಿಲ್ಲ. ಭೌಗೋಳಿಕ ಹಿನ್ನೆಲೆಯನ್ನ ಲೆಕ್ಕಿಸದೆ ಪೊಲೀಸರು ವಿದ್ಯಾರ್ಥಿಗಳ ಭದ್ರತೆಗಿರಲಿದ್ದೇವೆ. ಕಾಶ್ಮೀರಿ ವಿದ್ಯಾರ್ಥಿಗಳ ಭದ್ರತೆಗೆ ನಾವು ಬದ್ಧ ಎಂದು ಟ್ವೀಟ್ ಮೂಲಕ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ ಹಿನ್ನೆಲೆ: ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳ ಬಳಿ ಮಾಹಿತಿ ಕೇಳಿದ ಆಂತರಿಕ ಭದ್ರತಾ ದಳ

ದಾವಣಗೆರೆ ಜಿಲ್ಲೆಯಲ್ಲಿ ಶನಿವಾರದವರೆಗೆ ಸೆಕ್ಷನ್ 144 ಮುಂದುವರಿಕೆ

ದಾವಣಗೆರೆ ಜಿಲ್ಲೆಯಲ್ಲಿ ಶನಿವಾರದವರೆಗೆ ಸೆಕ್ಷನ್ 144 ಮುಂದುವರಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ನೀಡಿದ್ದಾರೆ. ನಾಳೆಯಿಂದ ಪಿಯು, ಪದವಿ ಕಾಲೇಜುಗಳು ಆರಂಭ ಹಿನ್ನೆಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿ ಹೊರತುಪಡಿಸಿ ಬೇರೆಯವರಿಗೆ ಕಾಲೇಜಿನೊಳಗೆ ಪ್ರವೇಶ ಇರಲ್ಲ ಎಂದು ತಿಳಿಸಲಾಗಿದೆ.

ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಮೌಲಾನಾ ಆಜಾದ್ ಪ್ರೌಡ ಶಾಲೆಯಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದ ಘಟನೆ ನಡೆದಿದೆ. ಇದೇ ವಿಚಾರವಾಗಿ ಪಾಲಕರು ಮತ್ತು ಶಿಕ್ಷಕರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ. ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಶಿಕ್ಷಕರು ಹೊರಗೆ ನಿಲ್ಲಿಸಿದ್ದಾರೆ. ಹಿಜಾಬ್ ತಗೆದ್ರೆ ಮಾತ್ರ ಶಾಲೆಯೊಳಗೆ ಪ್ರವೇಶ ನೀಡೋದಾಗಿ ಶಿಕ್ಷಕರು ಹೇಳಿದ್ದರು. ಶಿಕ್ಷಕರ ವಿರುದ್ಧ ವಿದ್ಯಾರ್ಥಿನಿಯರು ಪಾಲಕರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರ ಮಧ್ಯಪ್ರವೇಶದಿಂದ ವಾತಾವರಣ ತಿಳಿಯಾಗಿದೆ. ವಿದ್ಯಾರ್ಥಿಗಳ ಮನವೊಲಿಸಿ ಶಿಕ್ಷಕರು ಹಿಜಾಬ್ ತಗೆಸಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು; ಹಿಜಾಬ್ ಹೇಳಿಕೆ ಕುರಿತು ಕ್ಷಮೆ ಕೇಳಿದ ಜಮೀರ್ ಅಹ್ಮದ್

Published On - 4:15 pm, Tue, 15 February 22