AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ತೀರ್ಪು: ಜಡ್ಜ್​ಗಳಿಗೆ ಬೆದರಿಕೆ, ಬಾಡಿ ವಾರೆಂಟ್ ಮೂಲಕ ಆರೋಪಿ ರಹಮತ್ ಬೆಂಗಳೂರಿಗೆ, 8 ದಿನ ಬೆಂಗಳೂರು ಪೊಲೀಸರ ವಶಕ್ಕೆ

ತಮಿಳುನಾಡು ಪೊಲೀಸರು ಇದಕ್ಕೆ ಸಹಕಾರ ನೀಡಿದ್ದಾರೆ. ಆರೋಪಿಯನ್ನ ನ್ಯಾಯಾಲಯ 8 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ. ಜಡ್ಜ್ ಬಗ್ಗೆ ಆಗಿರುವ ಬೆದರಿಕೆ ಇಲ್ಲಿಗೆ ಕೊನೆಯಾಗಬೇಕು. ಹಾಗಾಗಿ ಪೊಲೀಸರು ವಿಶೇಷವಾಗಿ ಗಮನಿಸುತ್ತಿದ್ದಾರೆ. -ಗೃಹ ಸಚಿವ ಆರಗ ಜ್ಞಾನೇಂದ್ರ

ಹಿಜಾಬ್ ತೀರ್ಪು: ಜಡ್ಜ್​ಗಳಿಗೆ ಬೆದರಿಕೆ, ಬಾಡಿ ವಾರೆಂಟ್ ಮೂಲಕ ಆರೋಪಿ ರಹಮತ್ ಬೆಂಗಳೂರಿಗೆ, 8 ದಿನ ಬೆಂಗಳೂರು ಪೊಲೀಸರ ವಶಕ್ಕೆ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Updated By: ಆಯೇಷಾ ಬಾನು|

Updated on:Mar 22, 2022 | 10:10 PM

Share

ಬೆಂಗಳೂರು: ಹಿಜಾಬ್(Hijab) ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra)  ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು ಹಿಜಾಬ್ ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕರ್ನಾಟಕದ ಪೊಲೀಸರು ಆರೋಪಿಯನ್ನು ಕರೆತಂದಿದ್ದಾರೆ. ಬಾಡಿ ವಾರೆಂಟ್ ಮೂಲಕ ರಹಮತ್ ಉಲ್ಲಾನನ್ನು ಕರೆತಂದಿದ್ದಾರೆ ಎಂದು ತಿಳಿಸಿದ್ದಾರೆ.

ತಮಿಳುನಾಡು ಪೊಲೀಸರು ಇದಕ್ಕೆ ಸಹಕಾರ ನೀಡಿದ್ದಾರೆ. ಆರೋಪಿಯನ್ನ ನ್ಯಾಯಾಲಯ 8 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ. ಜಡ್ಜ್ ಬಗ್ಗೆ ಆಗಿರುವ ಬೆದರಿಕೆ ಇಲ್ಲಿಗೆ ಕೊನೆಯಾಗಬೇಕು. ಹಾಗಾಗಿ ಪೊಲೀಸರು ವಿಶೇಷವಾಗಿ ಗಮನಿಸುತ್ತಿದ್ದಾರೆ. ಬೆಂಗಳೂರು ಕಮಿಷನರ್ ನೇತೃತ್ವದಲ್ಲಿ ವಿಚಾರಣೆ ಆಗ್ತಿದೆ. ನ್ಯಾಯಾಂಗದ ಗೌರವ ಹಾಳು ಮಾಡುವ ಪ್ರಯತ್ನ ಇದು ಎಂದಿದ್ದಾರೆ. ರಹಮತ್ ಉಲ್ಲಾ ಎಂಬ ಓರ್ವನನ್ನು ಕರೆತರಲಾಗಿದೆ. ದೇಶದಲ್ಲಿ ಏನು ಬೇಕಾದರೂ ಮಾಡಬಹುದು ಎಂಬ ಭಾವನೆ ಹೋಗಬೇಕು. ಮತೀಯ ಸಂಘಟನೆ ಭೇದಿಸುವ ಪ್ರಯತ್ನ ಪೊಲೀಸರು ಮಾಡುತ್ತಿದ್ದಾರೆ. ಬೆಂಗಳೂರಿಗೆ ಆರೋಪಿ ಕರೆತಂದ ಪೊಲೀಸರು 37 ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 8 ದಿನ ಪೊಲೀಸ್ ವಶಕ್ಕೆ ಪಡೆದಿದ್ದಾರೆ.

ತಮಿಳುನಾಡು ತಾಬೇದ್ ಜಮಾತ್ ಸಂಘಟನೆಗೆ ಸೇರಿದ್ದ ಆರೋಪಿ ರೆಹಮತ್ ಉಲ್ಲಾ ತಮಿಳುನಾಡಿನ ತಿರುಪತ್ತೂರ್ ಜೈಲಿನಲ್ಲಿದ್ದ. ಕಳೆದ ಗುರುವಾರ ಮಧುರೈನಲ್ಲಿ ನಡೆದ ಭಾಷಣದಲ್ಲಿ ಹಿಜಾಬ್ ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದ. ಸದ್ಯ ಬಾಡಿ ವಾರಂಟ್ ಪಡೆದು ಬೆಂಗಳೂರು ಪೊಲೀಸರು ತಮಿಳುನಾಡಿಗೆ ಹೋಗಿ ಆರೋಪಿ ಕರೆತಂದಿದ್ದಾರೆ.

ಇನ್ನು ಕಬ್ಬನ್ ಪಾರ್ಕ್ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಆರೋಪಿ ರೆಹಮತ್ ಉಲ್ಲಾ ವಿಚಾರಣೆ ನಡೆಸಲಿದ್ದಾರೆ. ವಕೀಲೆ ಸುಧಾಕಾಟ್ವಾ ನೀಡಿದ್ದ ದೂರಿನ‌ ಅಡಿ ಪೊಲೀಸರು ತನಿಖೆ ನಡೆಸಲಿದ್ದಾರೆ. ತಮಿಳು ಭಾಷೆ ಬಳಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಡತನವನ್ನೇ ಸವಾಲಾಗಿ ಸ್ವೀಕರಿಸಿದ ಮಹಾದೇವಸ್ವಾಮಿ 14 ಚಿನ್ನದ ಪದಕ ಪಡೆದರೆ, ಭಾವನಾ 19 ಪದಕಗಳನ್ನು ತಮ್ಮವಾಗಿಸಿಕೊಂಡರು

ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗೆ ಬೆದರಿಕೆ ಹಾಕಿ ಮೂರು ದಿನ ಕಳೆದರೂ ಜಾತ್ಯತೀತವಾದಿಗಳು ಮೌನವಾಗಿದ್ದಾರೆ; ಸಿಎಂ ಬೊಮ್ಮಾಯಿ

Published On - 9:45 pm, Tue, 22 March 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?