Araga Jnanendra: ಗೃಹ ಇಲಾಖೆಯ ವರ್ಷದ ಮೊದಲ ಸಭೆ: ಕಳೆದ 1 ವರ್ಷದ ನಿರ್ವಹಣೆ ಬಗ್ಗೆ ಅವಲೋಕನ ಮಾಡಿದ ಆರಗ ಜ್ಞಾನೇಂದ್ರ

ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಇಂದು (ಜ.04) ವಿಕಾಸಸೌಧದಲ್ಲಿ ಗೃಹ ಇಲಾಖೆ ಸಭೆ ನಡೆಯಿತು. ಹಿರಿಯ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ 1 ವರ್ಷದ ನಿರ್ವಹಣೆ ಬಗ್ಗೆ ಅವಲೋಕನ ಮಾಡಿದರು.

Araga Jnanendra: ಗೃಹ ಇಲಾಖೆಯ ವರ್ಷದ ಮೊದಲ ಸಭೆ: ಕಳೆದ 1 ವರ್ಷದ ನಿರ್ವಹಣೆ ಬಗ್ಗೆ ಅವಲೋಕನ ಮಾಡಿದ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರImage Credit source: varthabharati.in
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 04, 2023 | 8:39 PM

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ನೇತೃತ್ವದಲ್ಲಿ ಇಂದು (ಜ.04) ವಿಕಾಸಸೌಧದಲ್ಲಿ ಗೃಹ ಇಲಾಖೆ ಸಭೆ ನಡೆಯಿತು. ಹಿರಿಯ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಆರಗ ಜ್ಞಾನೇಂದ್ರ 1 ವರ್ಷದ ನಿರ್ವಹಣೆ ಬಗ್ಗೆ ಅವಲೋಕನ ಮಾಡಿದರು. ಸಭೆಯಲ್ಲಿ ಗೃಹ ಇಲಾಖೆ ಎಸಿಎಸ್ ರಜನೀಶ್ ಗೋಯಲ್, ಡಿಜಿಪಿ ಪ್ರವೀಣ್ ಸೂದ್, ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಮೋಹನ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಗೃಹ ಇಲಾಖೆ ಸಭೆಯಲ್ಲಿ 1 ವರ್ಷದ ನಿರ್ವಹಣೆ ಬಗ್ಗೆ ಅವಲೋಕನ ಮಾಡಲಾಗಿದೆ. ಇಲಾಖೆಗೆ ಸಂಬಂಧಿಸಿದ ವಿಧೇಯಕಗಳ ಅನುಷ್ಠಾನದ ಬಗ್ಗೆ, ಗೃಹ ಇಲಾಖೆಗೆ ಅಗತ್ಯವಿರುವ ಹೊಸ ವಾಹನ ಖರೀದಿ ಹಾಗೂ ಡ್ರೋನ್​ ನಿರ್ವಹಣೆ ತರಬೇತಿ ಬಗ್ಗೆ ಕೂಡ ಚರ್ಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಗೃಹ ಸಚಿವನಾಗಿ ಪೊಲೀಸರ ಕಾರ್ಯವೈಖರಿ ಬಗ್ಗೆ ತೃಪ್ತಿ ಇದೆ

2022ರಲ್ಲಿ ಗೃಹ ಇಲಾಖೆಗೆ ಬಹಳ ಸವಾಲುಗಳು ಎದುರಾಗಿದ್ದು, ಗೃಹ ಸಚಿವನಾಗಿ ಪೊಲೀಸರ ಕಾರ್ಯವೈಖರಿ ಬಗ್ಗೆ ತೃಪ್ತಿ ಇದೆ.  ಚುನಾವಣಾ ವರ್ಷದಲ್ಲಿ ವಿಶೇಷ ವ್ಯವಸ್ಥೆ ಬಗ್ಗೆ ಚರ್ಚಿಸಲಾಗಿದೆ. ಸ್ಯಾಂಟ್ರೋ ರವಿ ಬಗ್ಗೆ ಮಾಜಿ ಸಿಎಂ ಹೆಚ್.​​ಡಿ. ಕುಮಾರಸ್ವಾಮಿ ಪ್ರಸ್ತಾಪ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಗಮನಿಸಿ ವರದಿ ತರಿಸಿಕೊಳ್ಳುತ್ತೇನೆ. ಈ ಕುರಿತು ದೂರು ನೀಡಿದರೆ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಬಳ್ಳಾರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ; 400 ಹಾಸಿಗೆಗಳ ತಾಯಿ, ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ

ತಪ್ಪಿತಸ್ಥರು ಯಾರೇ ಇದ್ರೂ ಅವರನ್ನು ಪೊಲೀಸರು ಬಂಧಿಸುತ್ತಾರೆ

ಲಿಂಬಾವಳಿ ಹೆಸರು ಬರೆದಿಟ್ಟು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಕೇಸ್​ ಕುರಿತು ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ 6 ಜನರ ವಿರುದ್ಧ ಪೊಲೀಸರು FIR ದಾಖಲಿಸಿದ್ದಾರೆ. ತಪ್ಪಿತಸ್ಥರು ಯಾರೇ ಇದ್ರೂ ಅವರನ್ನು ಪೊಲೀಸರು ಬಂಧಿಸುತ್ತಾರೆ. ತನಿಖೆಯಲ್ಲಿ ನಿರಪರಾಧಿ ಇದ್ದರೆ ಅವರನ್ನು ಬಂಧಿಸುವುದಿಲ್ಲ. ಯಾರು ಏನೋ ಬರೆದು ಇಟ್ಟಿದ್ದಾರೆ ಎಂದು ಬಂಧಿಸಲು ಆಗಲ್ಲ. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಯಾವುದೋ ವ್ಯವಹಾರಕ್ಕೆ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನ ಪತ್ನಿಯೂ ಕೂಡ ಪತಿ ಬಗ್ಗೆ ದೂರು ನೀಡಿದ್ದಾರೆಂಬ ಮಾಹಿತಿಯಿದೆ. ತನಿಖೆ ಹಂತದಲ್ಲಿ ನಾನು ಏನು ಹೇಳಿದರೂ ತಪ್ಪಾಗುತ್ತದೆ ಎಂದರು.

ಇದನ್ನೂ ಓದಿ: ಬೆಂಗಳೂರು ಕ್ರೈಂ ರೇಟಿಂಗ್​ ಹೇಗಿದೆ? ನಗರದಲ್ಲಿ ಕಳೆದ ವರ್ಷ ನಡೆದ ಕ್ರೈಂ ಗಳೆಷ್ಟು: ಇಲ್ಲಿದೆ ಆಯುಕ್ತ ಪ್ರತಾಪ್ ರೆಡ್ಡಿ ಬಿಚ್ಚಿಟ್ಟ ವರದಿ

ಅಂತೆ ಕಂತೆ ವಿಚಾರಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ

ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಅತ್ಯಾಚಾರ ಆಗಿಲ್ಲವೆಂದು ಜಿಲ್ಲಾಸ್ಪತ್ರೆ ವೈದ್ಯರಿಂದ ವರದಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಚಿತ್ರದುರ್ಗ‌ ಜಿಲ್ಲಾಸ್ಪತ್ರೆ ವೈದ್ಯರ ವರದಿ ಬಗ್ಗೆ ಮಾಹಿತಿ ಇಲ್ಲ. ಅಂತೆ ಕಂತೆ ವಿಚಾರಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಮುರುಘಾಶ್ರೀ ಸೇರಿದಂತೆ ಎಲ್ಲರನ್ನೂ ಬಂಧಿಸಲಾಗಿದೆ. ಪ್ರಕರಣದ ತನಿಖೆ ವೇಳೆ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:39 pm, Wed, 4 January 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?