AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎ ನಿಂದ ನಿವೇಶನ ಮಂಜೂರಾತಿಗಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ: ಸಚಿವ ಆರಗ ಜ್ಞಾನೇಂದ್ರ

ಕಳೆದ 17 ವರ್ಷಗಳ ಹಿಂದೆ ಮಂಜೂರಾದ ನಿವೇಶನಗಳನ್ನು ವಿವಿಧ ಕಾರಣಗಳನ್ನು ನೀಡಿ ಬಿಡಿಎ ಹಿಂಪಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಬಿಡಿಎ ನಿಂದ ನಿವೇಶನ ಮಂಜೂರಾತಿಗಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ: ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Updated By: ವಿವೇಕ ಬಿರಾದಾರ|

Updated on:Aug 27, 2022 | 6:21 PM

Share

ಬೆಂಗಳೂರು: ಕಳೆದ 17 ವರ್ಷಗಳ ಹಿಂದೆ ಮಂಜೂರಾದ ನಿವೇಶನಗಳನ್ನು ವಿವಿಧ ಕಾರಣಗಳನ್ನು ನೀಡಿ ಬಿಡಿಎ (BDA) ಹಿಂಪಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಸ್ಪಷ್ಟಪಡಿಸಿದ್ದಾರೆ. ಮಂಜೂರಾತಿ ಪಡೆದ ನಿವೇಶನಕ್ಕಾಗಿ ಕಳೆದ ಹದಿನೇಳು ವರ್ಷಗಳಲ್ಲಿ ಮೂರು ಬಾರಿ ನೋಂದಣಿ ಸಂಬಂಧ ಶುಲ್ಕ ಪಾವತಿ ಮಾಡಿದ್ದರೂ ಬಿಡಿಎ ನಿವೇಶನ ಪಡೆದು ಮನೆ ಕಟ್ಟಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಈ ಹಿಂದೆ ಶಾಸಕರೂ ಹಾಗೂ ಸಚಿವರುಗಳಿಗೆ ಬಿಡಿಎ ನಿವೇಶನಗಳನ್ನು ಹಂಚಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈ ಕೋರ್ಟ್​​ನಲ್ಲಿ ಸಲ್ಲಿಸಲಾಗಿತ್ತು. ಅರ್ಜಿಯ ಸಂಬಂಧ ಮಂಜೂರಾತಿ ಪಡೆದ ನಿವೇಶನದ ಕುರಿತು, ಪರಿಶೀಲಿಸಲು ಹೈ ಕೋರ್ಟ್ ನೇಮಿಸಿದ್ದ ನ್ಯಾಯಾಧೀಶ ಫಾರೂಖ್ ಸಮಿತಿ ಸಹ ಸ್ವಿಕರಿಸಿದೆ ಎಂದರು.

ಬಿಡಿಎ ನಿಯಮಾವಳಿಗಳ ಅನುಸಾರವಾಗಿಯೇ ನನಗೆ ನಿವೇಶನ ಮಂಜೂರಾತಿಯಾಗಿದೆ. ಬಿಡಿಎ ನಿಂದ ನಿವೇಶನ ಮಂಜೂರಾತಿಗಾಗಿ ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಜಿ ಕೆಟಗರಿ ಅಡಿಯಲ್ಲಿ ಈ ಹಿಂದೆ ಇತರ ಶಾಸಕರೂ ಹಾಗೂ ಸಚಿವರು ಮಂಜೂರಾತಿ ಪಡೆದ ರೀತಿಯಲ್ಲಿಯೇ ನನಗೂ ಬಿಡಿಎ ನಿವೇಶನ ಮಂಜೂರಾಗಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಬದಲಿ ನಿವೇಶನ ಮಂಜೂರು ಮಾಡಲು‌ ಬಿಡಿಎ ನಿಗದಿ ಪಡಿಸಿದ ಅಧಿಕ ಶುಲ್ಕವನ್ನೂ ಸಹ ಪಾವತಿಸಿದ್ದೇನೆ. ಈ ಹಿಂದೆ ನೂರಾರು ಮಂದಿ, ಬಿಡಿಎ ನಿಂದ ನಿವೇಶನ ಮಂಜೂರಾತಿ ಪಡೆದು ನೋಂದಣಿ ಶುಲ್ಕ ಕಟ್ಟಿದ್ದರೂ ನಿವೇಶನವನ್ನು ಪಡೆಯುವುದರಿಂದ ವಂಚಿತರಾಗಿದ್ದರು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಅವರಿಗೆ ಬಿಡಿಎ ಪರ್ಯಾಯ ನಿವೇಶನ ನೀಡಿ ಪರಿಹಾರ ಒದಗಿಸಿದೆ ಎಂದು ಮಾಹಿತಿ ನೀಡಿದರು.

ನಾನು ಮೂರು ಬಾರಿ ಮಂಜೂರಾದ ನಿವೇಶನಕ್ಕೆ ನೋಂದಣಿ ಮಾಡಿದ್ದರೂ ನಿವೇಶನದ ಹಕ್ಕು ಪಡೆಯಲು ಇದುವರೆಗೂ ಸಾಧ್ಯವಾಗಿಲ್ಲ. ಬಿಡಿಎನಿಂದ ನ್ಯಾಯ ಪಡೆಯಲು ನ್ಯಾಯಾಲಯದ ಮೊರೆ ಹೋಗಲು ಸಹ ನಿರ್ಧರಿಸಿದ್ದೇನೆ ಎಂದು ಹೇಳಿದರು.

ಘಟನೆ ಹಿನ್ನೆಲೆ

ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ತನ್ನ ಆದೇಶ ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿರುವ ಬಗ್ಗೆ ಸುಪ್ರೀಂಕೋರ್ಟ್​ ಆಕ್ಷೇಪ ವ್ಯಕ್ತಪಡಿಸಿತ್ತು. ಸಚಿವರೂ ಸೇರಿದಂತೆ ಹಲವು ವಿಐಪಿಗಳಿಗೆ ಪರ್ಯಾಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವು ವಿಐಪಿಗಳಿಗೆ ಪರ್ಯಾಯ ನಿವೇಶನ ಹಂಚಿಕೆ ಮಾಡಿರುವ ಬಗ್ಗೆ ಬಿಡಿಎ ಆಯುಕ್ತ, ಐಎಎಸ್ ಅಧಿಕಾರಿ ರಾಜೇಶ್ ಗೌಡವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ರಾಜೇಶ್ ಗೌಡ ಅವರನ್ನು ಆಯುಕ್ತರ ಹುದ್ದೆಯಿಂದ ಸ್ಥಳಾಂತರಿಸಲು ಮೌಖಿಕ ಸೂಚನೆ ನೀಡಿತ್ತು. ಸುಪ್ರೀಂಕೋರ್ಟ್  ಸೂಚನೆ ಮೇರೆಗೆ ರಾಜೇಶ್ ಗೌಡ  ಅವರವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.  ರಾಜೇಶ್ ಗೌಡ ಅವರು ಯಾವುದೇ ಪ್ರಮುಖ ಆದೇಶಗಳಿಗೆ ಸಹಿಹಾಕುವಂತಿಲ್ಲ ಎಂದು ಹೇಳಿತ್ತು.

ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆಯೂ ಸುಪ್ರೀಂಕೋರ್ಟ್​ ತೀವ್ರ ವಾಗ್ದಾಳಿ ನಡೆಸಿದೆ. ಬಿಡಿಎ ಕಾರ್ಯದರ್ಶಿ, ಉಪ ಕಾರ್ಯದರ್ಶಿಯನ್ನು ಬದಲಿಸುವಂತೆ ಸೂಚನೆ ನೀಡಿದೆ. ಕಾರಂತ ಬಡಾವಣೆ ಲೋಪದೋಷಗಳ ಸಂಬಂಧ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಸಮಿತಿಯ ಕಾರ್ಯಗಳ ಪ್ರಗತಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಹಾಗೂ ಸಂಚೀಜ್ ಖನ್ನಾ​​ ಅವರಿದ್ದ ನ್ಯಾಯಪೀಠವು ಆಯುಕ್ತರ ಬದಲಾವಣೆಗೆ ಸೂಚನೆ ನೀಡಿತ್ತು.

ಬಿಡಿಎ ಆಯುಕ್ತರಿಂದ ಪ್ರಾಧಿಕಾರಕ್ಕೆ ಆರ್ಥಿಕವಾಗಿ ನಷ್ಟವಾಗಿದೆ. ಆರ್​ಎಂವಿ 2ನೇ ಹಂತದಲ್ಲಿ ಇವರು ಹಂಚಿಕೆ ಮಾಡಿರುವ ನಿವೇಶನಗಳು ₹ 10 ಕೋಟಿಯವರೆಗೆ ಬೆಲೆ ಬಾಳುತ್ತವೆ. ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಸಾರ್ವಜನಿಕ ಹರಾಜಿನ ಮೂಲಕ ನಿವೇಶನಗಳ ಹಂಚಿಕೆ ಮಾಡಬೇಕಿತ್ತು’ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ಹೇಳಿದೆ. ‘ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಇಂದಿನಿಂದ ಯಾವುದೇ ಪ್ರಮುಖ ಆದೇಶಗಳಿಗೆ ಸಹಿ ಹಾಕುವುಂತಿಲ್ಲ. ಅವರನ್ನು ಆ ಸ್ಥಾನದಿಂದ ಬದಲಿಸಬೇಕು. ಅವರಿಗೆ ಸುಪ್ರೀಂಕೋರ್ಟ್​ ಬಗ್ಗೆಯೂ ಗೌರವವಿಲ್ಲ’ ಎಂದು ನ್ಯಾಯಪೀಠವು ಕಠಿಣ ಪದಗಳಲ್ಲಿ ತಾಕೀತು ಮಾತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:10 pm, Sat, 27 August 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!