ಸಿಡಿಎಸ್ ರಾವತ್ ನಿಧನದ ಬಗ್ಗೆ ವಿಕೃತ ಪೋಸ್ಟ್! ದೇಶ ವಿರೋಧಿಗಳ ಪತ್ತೆ ಹಚ್ಚಿ ಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

ವಿಕೃತ ಪೋಸ್ಟ್ ಬಗ್ಗೆ ನಿನ್ನೆ ಬಸವರಾಜ ಬೊಮ್ಮಯಿ ಸುದ್ದಿಗಾರರೊಂದಿಗೆ ಮಾತನಾಡಿದ್ದರು. ಸಿಡಿಎಸ್ ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಸಿಡಿಎಸ್ ರಾವತ್ ನಿಧನದ ಬಗ್ಗೆ ವಿಕೃತ ಪೋಸ್ಟ್! ದೇಶ ವಿರೋಧಿಗಳ ಪತ್ತೆ ಹಚ್ಚಿ ಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: sandhya thejappa

Updated on:Dec 11, 2021 | 1:07 PM

ಬೆಂಗಳೂರು: ಸಿಡಿಎಸ್ ಬಿಪಿನ್ ರಾವತ್ ಭಾರತಕ್ಕೆ ನೀಡಿರುವ ಕೊಡುಗೆ ಅಪಾರ. ಇವರ ನಿಧನ ಇಡೀ ದೇಶಕ್ಕೆ ತುಂಬಲಾರದ ನಷ್ಟ. ಆದರೆ ಇವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಕೃತ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆ ದೇಶ ವಿರೋಧಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕೆಂದು ಡಿಜಿ ಮತ್ತು ಐಜಿಪಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ವಿಕೃತ ಪೋಸ್ಟ್ ಮಾಡುವವರನ್ನು ಸಹಿಸುವುದಿಲ್ಲ. ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ತಕ್ಕ ಶಿಕ್ಷೆ ಆಗಬೇಕು ಅಂತ ದೂರವಾಣಿ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಜಿಪಿಗೆ ಸೂಚನೆ ನೀಡಿದ್ದಾರೆ.

ವಿಕೃತ ಪೋಸ್ಟ್ ಬಗ್ಗೆ ನಿನ್ನೆ ಬಸವರಾಜ ಬೊಮ್ಮಯಿ ಸುದ್ದಿಗಾರರೊಂದಿಗೆ ಮಾತನಾಡಿದ್ದರು. ಸಿಡಿಎಸ್ ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇಡೀ ದೇಶವೇ ಬಿಪಿನ್ ರಾವತ್ ಸಾವಿಗೆ ಕಂಬನಿ ಮಿಡಿಯುತ್ತಿದೆ. ಅದರೆ ಕೆಲವರು ಅವರ ಸಾವನ್ನ ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ಗಳನ್ನ ಹಾಕಿರೋದು ತೀರಾ ಖಂಡನೀಯ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಅಂತ ಹೇಳಿದ್ದರು.

ಉಡುಪಿ ಮೂಲದ ಬರಹಗಾರನ ವಿರುದ್ಧ ಫೇಸ್​ಬುಕ್​ನಲ್ಲಿ ಆಕ್ರೋಶ ಬಿಪಿನ್ ರಾವತ್ ನಿಧನದ ಬಗ್ಗೆ ವಿಕೃತಿ ಮೆರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಉಡುಪಿ ಮೂಲದ ಬರಹಗಾರರೊಬ್ಬರ ವಿರುದ್ಧ ಫೇಸ್​ಬುಕ್​ನಲ್ಲಿ ಆಕ್ರೋಶಗಳು ವ್ಯಕ್ತವಾಗಿವೆ. ಈ ಸಂಬಂಧ ಉಡುಪಿ ಪೊಲೀಸರಿಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈ ಕೂಡಲೇ ಅವರನ್ನು ಬಂಧಿಸಬೇಕೆಂದು ಸಮಾಜಿಕ ಜಾಲತಾಣದಲ್ಲಿ ಆಗ್ರಹಗಳು ಕೇಳಿಬಂದಿವೆ.

ಇದನ್ನೂ ಓದಿ

Omicron: ದೆಹಲಿಯಲ್ಲಿ ಇನ್ನೊಂದು ಒಮಿಕ್ರಾನ್​ ಕೇಸ್​ ದಾಖಲು; ಭಾರತದಲ್ಲೀಗ ಹೊಸ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ

ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ: ಬಂದೋಬಸ್ತ್‌ಗಾಗಿ 4 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

Published On - 12:02 pm, Sat, 11 December 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್