AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಗಾಂಜಾ ಮಾರಾಟ ಮಾಡ್ತಿದ್ದ ನಾಲ್ವರ ಬಂಧನ; ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತು ವಶಕ್ಕೆ

Anekal News: ಆನೇಕಲ್ ತಾಲ್ಲೂಕಿನ ಚಂದಾಪುರ-ದೊಮ್ಮಸಂದ್ರ ಮುಖ್ಯರಸ್ತೆಯ ರೈಲ್ವೆ ಸ್ಟೇಷನ್ ಬಳಿ ಕಾಲೇಜು ಯುವಕ-ಯುವತಿಯರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಹಿನ್ನಲೆ ದಾಳಿ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆನೇಕಲ್: ಗಾಂಜಾ ಮಾರಾಟ ಮಾಡ್ತಿದ್ದ ನಾಲ್ವರ ಬಂಧನ; ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತು ವಶಕ್ಕೆ
ಆನೇಕಲ್​ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 15, 2023 | 12:18 PM

Share

ಬೆಂಗಳೂರು, ಆ.15: ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸೂರ್ಯ ನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bengaluru) ಹೊರವಲಯದ ಆನೇಕಲ್(Anekal) ತಾಲ್ಲೂಕಿನ ಚಂದಾಪುರ-ದೊಮ್ಮಸಂದ್ರ ಮುಖ್ಯರಸ್ತೆಯ ರೈಲ್ವೆ ಸ್ಟೇಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಆನೇಕಲ್​ನ ಚನ್ನಕೇಶವ ನಗರದ ಅಭಿ(19), ತರಣ್(20), ಸೂರ್ಯ(21), ಹರ್ಷ (21) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳು ಗಾಂಜಾವನ್ನು ತಂದು ಸಣ್ಣ ಸಣ್ಣ ಪ್ಯಾಕೆಟ್​ಗಳನ್ನಾಗಿ ಮಾಡಿ ಚಂದಾಪುರದ ಹೀಲಲಿಗೆ ಸಮೀಪದ ಕಾಲೇಜು ಯುವಕ ಯುವತಿಯರಿಗೆ ಮಾರಾಟ ಮಾಡುತ್ತಿದ್ದರು.

ಸೂರ್ಯನಗರ ಪೊಲೀಸ್ರ ಮಿಂಚಿನ ಕಾರ್ಯಾಚರಣೆ

ಹೌದು, ಕಾಲೇಜು ಯುವಕ ಯುವತಿಯರಿಗೆ ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಸೂರ್ಯನಗರ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಎಸ್ಕೇಪ್ ಆಗಲು ಪ್ರಯತ್ನಿಸಿದ್ದು, ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ವಿದ್ಯಾರ್ಥಿಗಳನ್ನೇ ಟಾರ್ಗೆಟ್​ ಮಾಡಿ ಗಾಂಜಾ ಮಾರಾಟ; ಅರೋಪಿಯನ್ನ ಬಂಧಿಸಿದ ಪೊಲೀಸರು, 5 ಕೆಜಿಗೂ ಅಧಿಕ ಗಾಂಜಾ ಜಪ್ತಿ

ಧಾರವಾಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧಿಸಿ, 510 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿತ್ತು

ಆಗಸ್ಟ್​ 09 ರಂದು ಧಾರವಾಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿ, 510 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿತ್ತು. ಮಂಗಳೂರು, ರಾಯಚೂರು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿದ ಬೆನ್ನಲ್ಲೇ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡದಲ್ಲಿ ಇಂತಹ ಘಟನೆಗಳು ಬೆಳಕಿಗೆ ಬಂದಿತ್ತು. ಹೌದು, ಆಗಸ್ಟ್​ 8 ರಂದು ಹುಬ್ಬಳ್ಳಿಯಲ್ಲಿ ಓರ್ವ ಡ್ರಗ್​ ಪೆಡ್ಲರ್​ನನ್ನು ಬಂಧಿಸಿದ್ದರು. ಇದಾದ ಮಾರನೇ ದಿನವೇ ಧಾರವಾಡದ ತಡಸಿನಕೊಪ್ಪ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ವಿದ್ಯಾಗಿರಿ ಪೊಲೀಸರು ಬಂಧಿಸಿದ್ದರು. ದರ್ಶನ ದುಗ್ಗಾಣಿ, ಗುರುರಾಜ ಯರೇಸೀಮಿ, ಮಂಜುನಾಥ ಮಾನೆ ಬಂಧಿತ ಆರೋಪಿಗಳು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ