ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ

ಗೊಂಬೆ ಮಾಸ್ಕ್ ಧರಿಸಿಕೊಂಡು ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರು ಮತ್ತು ಬೈಕ್​ಗಳನ್ನು ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬೆಂಗಳೂರು ನಗರದ ರಾಜಗೋಪಾಲನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಲಗ್ಗೆರೆ ಬಳಿ 15 ಕಾರು, ಬೈಕ್​ಗಳನ್ನು ಪುಂಡರು ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದರು.

ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ
ಬೆಂಗಳೂರಿನ ಲಗ್ಗೆರೆ ಬಳಿ ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ (ಸಾಂದರ್ಭಿಕ ಚಿತ್ರ)
Follow us
Jagadisha B
| Updated By: Rakesh Nayak Manchi

Updated on:Nov 16, 2023 | 10:05 AM

ಬೆಂಗಳೂರು, ನ.16: ಗೊಂಬೆ ಮಾಸ್ಕ್ ಧರಿಸಿಕೊಂಡು ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರು ಮತ್ತು ಬೈಕ್​ಗಳನ್ನು ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬೆಂಗಳೂರು (Bengaluru) ನಗರದ ರಾಜಗೋಪಾಲನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಏರಿಯಾದಲ್ಲಿ ಹವಾ ಇಡಲು ಲಗ್ಗೆರೆ ಬಳಿ ಬೈಕ್​ನಲ್ಲಿ ಬಂದಿದ್ದ ಪುಂಡರ ಗ್ಯಾಂಗ್, 15 ಕಾರು ಹಾಗೂ ಬೈಕ್​ಗಳನ್ನು ಪೈಡಿಗೈದಿದ್ದರು. ಕಂಠ ಪೂರ್ತಿ ಕುಡಿದು ಬೈಕ್​ಗಳಲ್ಲಿ ಬಂದು ತೂರಾಡುತ್ತಾ ಮನಬಂದಂತೆ ರಾಡ್ ಮತ್ತು ಲಾಂಗ್​ಗಳಿಂದ ಕಾರುಗಳ ಗ್ಲಾಸ್ ಪುಡಿ ಮಾಡಿ ಪರಾರಿಯಾಗಿದ್ದರು.

ಸ್ಥಳಕ್ಕೆ ಶಾಸಕ ಮುನಿರತ್ನ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದರು. ಇತ್ತ, ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ರಾಜಗೋಪಾಲನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಸದ್ಯ, ಪಕ್ಕದ ಏರಿಯಾದಿಂದ ಲಗ್ಗೆರೆಗೆ ಬಂದು ಕೃತ್ಯ ಎಸಗಿ ಬೇರೆಬೇರೆ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಒಂದು ಚೊಂಬಿನ ಕಥೆ! ಕಳ್ಳತನದ ಕೇಸ್ ಅಂತ ಹೋದ ಹೊಯ್ಸಳ ಪೊಲೀಸರು ಕಕ್ಕಾಬಿಕ್ಕಿಯಾದರು!

ಬಾರ್​ ಶೆಟರ್​ ಮುರಿದು ಹಣ ಕಳ್ಳತನ

ಆನೇಕಲ್: ಶೆಟರ್​ ಮುರಿದು ಪ್ರಜ್ವಲ್ ಬಾರ್ ಒಳಗೆ ನುಗ್ಗಿದ ಕಳ್ಳರು, ಹಣ ದೋಚಿ ಪರಾರಿಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್​ ತಾಲೂಕಿನ ತಿರುಪಾಳ್ಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ಮೂರು ಜನ ಖದೀಮರು ಬಾರ್​ಗೆ ನುಗ್ಗಿ ಕಳ್ಳತನ ಮಾಡಿದ್ದಾರೆ.

ಕಳೆದ ರಾತ್ರಿ ಬಾರ್ ಬಳಿ ಬಂದಿದ್ದ ಮೂವರ ಪೈಕಿ ಇಬ್ಬರು ಹೊರಗಡೆ ಮಾಹಿತಿದಾರರಾಗಿ ನಿಂತುಕೊಂಡು ಮತ್ತೊಬ್ಬ ಬಾರ್ ಒಳಗೆ ನುಗ್ಗಿ ಹಣ ದೋಚಿ ಪರಾರಿಯಾಗಿದ್ದಾರೆ. ಬಾರ್​ನಲ್ಲಿ 6 ಲಕ್ಷಕ್ಕೂ ಹೆಚ್ಚು ನಗದು ಇತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ, ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 am, Thu, 16 November 23

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ