ರಿಯಲ್​ ಚೆಕ್! ಕಾಲ್ ಸೆಂಟರ್ ಮೂಲಕ ಕೋವಿಡ್​ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಮಾಡಿದ ಸಚಿವ ಅರವಿಂದ ಲಿಂಬಾವಳಿ

ಈ ಕೇಂದ್ರವನ್ನು ಸ್ಥಾಪಿಸುವ ಮೂಲಕ ಎಲ್ಲಾ ವಲಯಗಳನ್ನು ಒಳಗೊಂಡಂತೆ 9 ವಾರ್ ರೂಮ್ ಮತ್ತು ಒಂದು ಕೇಂದ್ರ ವಾರ್ ರೂಮ್ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ. ಜೊತೆಗೆ ಇದರಿಂದ ವಾರ್ ರೂಮ್ ಮತ್ತು ಕಾಲ್ ಸೆಂಟರ್ ಗಳ ಕಾರ್ಯನಿರ್ವಹಣೆ ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ

ರಿಯಲ್​ ಚೆಕ್! ಕಾಲ್ ಸೆಂಟರ್ ಮೂಲಕ ಕೋವಿಡ್​ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಮಾಡಿದ ಸಚಿವ ಅರವಿಂದ ಲಿಂಬಾವಳಿ
ರಿಯಲ್​ ಚೆಕ್! ಕಾಲ್ ಸೆಂಟರ್ ಮೂಲಕ ಕೋವಿಡ್​ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಮಾಡಿದ ಸಚಿವ ಅರವಿಂದ ಲಿಂಬಾವಳಿ
sadhu srinath

|

May 14, 2021 | 1:35 PM

ಬೆಂಗಳೂರು: ಕೊರೊನಾ ಕಾಟದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿರುವ ಆಸ್ಪತ್ರೆಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗಳಲ್ಲಿ ಬಿಡುಗಡೆಯಾಗುತ್ತಿರುವ ರೋಗಿಗಳು ಮತ್ತು ದಾಖಲಾಗುತ್ತಿರುವ ರೋಗಿಗಳ ನಿಖರ ಮಾಹಿತಿ, ಬೆಡ್ ಗಳ ಲಭ್ಯತೆ ಬಗ್ಗೆ ವಾಸ್ತವ ವರದಿಗಳು ದೊರಕಲು ಸಾಧ್ಯವಾಗುತ್ತದೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ಯಶವಂತಪುರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರಿಗೆ ನೆರವು ನೀಡಲು ಸ್ಥಾಪಿಸಿರುವ 1912 ಸಹಾಯವಾಣಿಯ ಹೆಚ್ಚುವರಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಹಿಂದೆ 1912 ಸಹಾಯವಾಣಿಯಲ್ಲಿ 60 ಮಾರ್ಗಗಳಿದ್ದವು, ಈಗ ಅದಕ್ಕೆ ಹೆಚ್ಚುವರಿಯಾಗಿ 70 ಮಾರ್ಗಗಳನ್ನು ( ಸೀಟರ್) ಸೇರಿಸಲಾಗಿದೆ. ಈವರೆಗೂ ಈ ಸಹಾಯವಾಣಿಗೆ ಕರೆ ಮಾಡಿದಾಗ 12 ರಿಂದ 20 ನಿಮಿಷಗಳ ಕಾಯುವಿಕೆ ಇರುತ್ತಿತ್ತು, ಆದರೆ ಈ ಹೆಚ್ಚುವರಿ ಕರೆ ಮಾರ್ಗಗಳನ್ನು ಸ್ಥಾಪಿಸಿರುವುದರಿಂದ ಈಗ ಕರೆ ಮಾಡಿದ ಕೂಡಲೇ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.

ಈ ಕಾಲ್ ಸೆಂಟರ್ ನಲ್ಲಿ ವೈದ್ಯರು ಸಹ ಉಪಸ್ಥಿತರಿದ್ದು, ವಲಯಗಳಿಗೆ ಕರೆ ವರ್ಗಾವಣೆ ವಿಳಂಬವಾದಲ್ಲಿ ಅವರೇ ಸ್ವತಹ ಮಾತನಾಡಿ ಅಗತ್ಯ ವೈದ್ಯಕೀಯ ಸಲಹೆ ಸೂಚನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಈ ಕಾಲ್ ಸೆಂಟರ್ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಜೊತೆಗೆ ಟ್ರಯೇಜಿಂಗ್ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

Arvind limbavali at coronavirus call center in bangalore 2

ಈ ಕಾಲ್ ಸೆಂಟರ್ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಜೊತೆಗೆ ಟ್ರಯೇಜಿಂಗ್ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತದೆ – ಸಚಿವ  ಲಿಂಬಾವಳಿ

ಈ ಕೇಂದ್ರವನ್ನು ಸ್ಥಾಪಿಸುವ ಮೂಲಕ ಎಲ್ಲಾ ವಲಯಗಳನ್ನು ಒಳಗೊಂಡಂತೆ 9 ವಾರ್ ರೂಮ್ ಮತ್ತು ಒಂದು ಕೇಂದ್ರ ವಾರ್ ರೂಮ್ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ. ಜೊತೆಗೆ ಇದರಿಂದ ವಾರ್ ರೂಮ್ ಮತ್ತು ಕಾಲ್ ಸೆಂಟರ್ ಗಳ ಕಾರ್ಯನಿರ್ವಹಣೆ ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಯಶವಂತಪುರದ ಶಾಸಕ ಮುನಿರತ್ನ, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ವಿಶೇಷ ಆಯುಕ್ತ ರಂದೀಪ್, ಸಹಾಯವಾಣಿ ನೋಡಲ್ ಅಧಿಕಾರಿ ವಿಪಿನ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

(Arvind limbavali at coronavirus call center in bangalore)

ಇದನ್ನೂ ಓದಿ: ಇದು ಸೋಂಕಿತರ ತುರ್ತು ಚಿಕಿತ್ಸೆಗಾಗಿ​.. ಬೆಂಗಳೂರಿನ ಎಲ್ಲಾ ಶಾಸಕ ಕ್ಷೇತ್ರಗಳಲ್ಲಿ ಟ್ರಯೇಜ್ ಕೇಂದ್ರಗಳ ಸ್ಥಾಪನೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada