ಬೇಸಿಗೆ ಮಾಯವಾಗಿ, ರಾಜಧಾನಿ ಬೆಂಗಳೂರು ಫುಲ್ ಕೂಲ್! ವಾರದಿಂದ ಮಾಯದಂತ ಮಳೆ, ಇಂದೂ ಮಳೆಯ ಅಬ್ಬರ ಜೋರು

ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಪರದಾಡುವಂತ್ತಾಗಿದೆ. ಮನೆಯಲ್ಲಿದ್ದ ಫ್ರಿಡ್ಜ್, ಟಿವಿ ಸೇರಿದಂತೆ ಹಲವು ವಸ್ತುಗಳು ನೀರು ಪಾಲಾಗಿವೆ.

ಬೇಸಿಗೆ ಮಾಯವಾಗಿ, ರಾಜಧಾನಿ ಬೆಂಗಳೂರು ಫುಲ್ ಕೂಲ್! ವಾರದಿಂದ ಮಾಯದಂತ ಮಳೆ, ಇಂದೂ ಮಳೆಯ ಅಬ್ಬರ ಜೋರು
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Apr 18, 2022 | 7:44 PM

ಬೆಂಗಳೂರು: ರಾಜ್ಯ ರಾಜ್ಯಧಾನಿಯಲ್ಲಿ ಇಂದು ಕೂಡ ಹಲವೆಡೆ ಗುಡುಗು ಸಹಿತ ಮಳೆ (Rain)ಯ ಅಬ್ಬರ ಮುಂದುವರೆದಿದೆ. ಬೆಂಗಳೂರು ನಗರದ ಹಲವೆಡೆ ಧಾರಾಕಾರವಾಗಿ ವರುಣ ಆರ್ಭಟ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರತಿನಿತ್ಯ ಬೆಂಗಳೂರಿನ ಜನರಿಗೆ ಮಳೆರಾಯ ದರ್ಶನ ನೀಡುತ್ತಿದ್ದು, ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಸತತ ನಾಲ್ಕು ದಿನದಿಂದ ಮಳೆ ಆಗುತ್ತಿದ್ದು, ಹಲವೆಡೆ ಮಳೆಯಿಂದಾಗಿ ಟ್ರಾಫಿಕ್​ ಜಾಮ್​ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ. ಕಾರ್ಪೊರೇಷನ್, ಮೈಸೂರು ಬ್ಯಾಂಕ್ ವೃತ್ತದಲ್ಲಿ ಟ್ರಾಫಿಕ್​ಜಾಮ್ ಆಗಿದ್ದು,​ ಮೆಜೆಸ್ಟಿಕ್​ಗೆ ತೆರಳುವ ಮಾರ್ಗದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ನಾಳೆಯೂ ಕರಾವಳಿ, ದಕ್ಷಿಣ ಒಳನಾಡು, ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಇನ್ನೆರಡು ದಿನ ಗುಡುಗು, ಗಾಳಿ ಸಹಿತ ಮಳೆಯಾಗಲಿದೆ. ಇಂದು ಬೆಂಗಳೂರಿನಲ್ಲಿ ಕನಿಷ್ಟ 15 ಮಿ.ಮೀನಿಂದ ಗರಿಷ್ಠ 64 ಮಿ.ಮೀವರೆಗೆ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಮಾಹಿತಿ ನೀಡಿದೆ.

ಭಾರಿ ಗಾಳಿ ಮಳೆಯಿಂದ ಅವಾಂತರವಾಗಿದ್ದು, ಕಸ್ತೂರಬಾ ರಸ್ತೆಯಲ್ಲಿ ಬಸ್ ನಿಲ್ದಾಣದ ಮೇಲೆ ಮರ ಬಿದ್ದು ವಾಹನಗಳು ಜಖಂವಾಗಿದೆ. ಮರ ಬಿದ್ದ ರಭಸಕ್ಕೆ ದ್ವಿಚಕ್ರ ವಾಹನ, ಬಸ್​ಗೆ ಹಾನಿ ಉಂಟಾಗಿದೆ. ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಲಾಲ್ ಬಾಗ್, ಎಂ.ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆ ಹಿನ್ನಲೆ ದ್ವಿಚಕ್ರ ವಾಹನ ಸವಾರರು ಪರದಾಡುತ್ತಿದ್ದು, ಬಸ್ ನಿಲ್ದಾಣಗಳಲ್ಲಿ ಬೈಕ್​ಗಳನ್ನು ಪಾರ್ಕ್ ಮಾಡಿ ಮಳೆ ಬೀಳದ ಕಡೆ ನಿಂತ್ತಿದ್ದಾರೆ. ಕೆಂಪೇಗೌಡ ರಸ್ತೆ, ಮೆಜೆಸ್ಟಿಕ್ ಸುತ್ತಾ ಮುತ್ತಾ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಗರದ ತಗ್ಗು ಪ್ರದೇಶದ ಬಹುತೇಕ ರಸ್ತೆಗಳು ಮಳೆ‌ ನೀರಿನಿಂದ ಆವೃತಗೊಂಡಿವೆ. ಜಲಾವೃತವಾಗಿ ರಸ್ತೆಗಳು ಕೆರೆಯಂತಾಗಿವೆ. ಚಾಲುಕ್ಯ ಸರ್ಕಲ್, ಶಿವಾನಂದ ವೃತ್ತ, ಓಕಳಿಪುರಂ, ಹಡ್ಸನ್ ಸರ್ಕಲ್, ಬ್ರಿಗೇಡ್ ರೋಡ್ ಜಂಕ್ಷನ್, ಆನಂದರಾವ್ ಸರ್ಕಲ್, ರೇಸ್ ಕೋರ್ಸ್ ರಸ್ತೆ ಬಳಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಪರದಾಡುವಂತ್ತಾಗಿದೆ. ಮನೆಯಲ್ಲಿದ್ದ ಫ್ರಿಡ್ಜ್, ಟಿವಿ ಸೇರಿದಂತೆ ಹಲವು ವಸ್ತುಗಳು ನೀರು ಪಾಲಾಗಿವೆ. ಮಳೆ ನೀರು ಹೊರಹಾಕಲು ನಿವಾಸಿಗಳು ಹರಸಾಹಸ ಪಡುತ್ತಿದ್ದಾರೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಸತತ ಒಂದು ಗಂಟೆಯಿಂದ ವರ್ಷಧಾರೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ, ಆಲ್ದೂರು, ಸಖರಾಯಪಟ್ಟಣ, ಕಳಸಾಪುರ ಸೇರಿ ಜಿಲ್ಲೆಯ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಅದೇ ರೀತಿಯಾಗಿ ರಾಮನಗರ ಜಿಲ್ಲೆಯಲ್ಲಿ‌ ಗುಡುಗು, ಬಿರುಗಾಳಿ ಸಹಿತ ಮಳೆ ಶುರುವಾಗಿದ್ದು, ಗಾಳಿ ಮಳೆಯಿಂದಾಗಿ ಬೃಹತ್ ಗ್ರಾತದ ಮರ ನೆಲಕ್ಕೆ ಉರುಳಿದೆ. ಮನೆಯ ಶೀಟ್​ಗಳು ಹಾರಿಹೋಗಿವೆ. ಅದೃಷ್ಟವಶತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಇದನ್ನೂ ಓದಿ:

Maruti Cars Price: ಏಪ್ರಿಲ್ 18ರಿಂದ ಅನ್ವಯಿಸುವಂತೆ ಮಾರುತಿ ಕಾರುಗಳ ಬೆಲೆಯಲ್ಲಿ ಏರಿಕೆ

ಕೊವಿಡ್ ಏರಿಕೆ: 6 ಎನ್​​ಸಿಆರ್​​ ಜಿಲ್ಲೆ ಸೇರಿದಂತೆ ಲಖನೌದಲ್ಲಿ ಮಾಸ್ಕ್ ಕಡ್ಡಾಯ

Published On - 5:39 pm, Mon, 18 April 22