ಮತ್ತೆ ಹೋರಾಟಕ್ಕೆ ಇಳಿದ ಆಶಾ ಕಾರ್ಯಕರ್ತೆಯರು! ಬೆಂಗಳೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆ

ಕಳೆದ ಹದಿನೈದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಾಗಿಲ್ಲ. ಕೊವಿಡ್ ತಡೆಗಟ್ಟುವುದು, ಲಸಿಕೆ ಹಾಕುವಲ್ಲಿ ವಾರಿಯರ್ಸ್ ಆಗಿ 24 ಗಂಟೆ ಕೆಲಸ ಮಾಡಿದ್ದೇವೆ.

ಮತ್ತೆ ಹೋರಾಟಕ್ಕೆ ಇಳಿದ ಆಶಾ ಕಾರ್ಯಕರ್ತೆಯರು! ಬೆಂಗಳೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:May 16, 2022 | 10:50 AM

ಬೆಂಗಳೂರು: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು (ASHA Activist) ಮತ್ತೆ ಹೋರಾಟ ನಡೆಸಲು ಮುಂದಾಗಿದ್ದಾರೆ. ನಾಳೆ (ಮೇ 17) ನಗರದ ಫ್ರೀಡಂ ಪಾರ್ಕ್​ನಲ್ಲಿ ಬೃಹತ್ ಪ್ರತಿಭಟನೆ (Protest) ನಡೆಯಲಿದೆ. ಸಾವಿರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಧರಣಿಯಲ್ಲಿ ಭಾಗಿಯಾಗಲಿದ್ದು, ಎಐಯುಟಿಯುಸಿ (AIUTUC) ನೇತೃತ್ವದಲ್ಲಿ ತಯಾರಿಗಳು ನಡೆಯುತ್ತಿವೆ. ಹಲವು ವರ್ಷಗಳಿಂದ ಈಡೇರದ ಬೇಡಿಕೆಗಳನ್ನ ಕೂಡಲೇ ಈಡೇರಿಸಿ ಎಂದು ಆಶಾ ಕಾರ್ಯಕರ್ತೆಯರು ಆಗ್ರಹಿಸುತ್ತಾರೆ.

ಕಳೆದ ಹದಿನೈದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಾಗಿಲ್ಲ. ಕೊವಿಡ್ ತಡೆಗಟ್ಟುವುದು, ಲಸಿಕೆ ಹಾಕುವಲ್ಲಿ ವಾರಿಯರ್ಸ್ ಆಗಿ 24 ಗಂಟೆ ಕೆಲಸ ಮಾಡಿದ್ದೇವೆ. ಆದರೆ ಕೆಲಸಕ್ಕೆ ತಕ್ಕ ಸಂಬಳ ಕೊಡದೆ ಸರ್ಕಾರ ಅನ್ಯಾಯ ಮಾಡಿದೆ. ಪ್ರೋತ್ಸಾಹ ಧನ ರಾಜ್ಯದಿಂದ 5 ಸಾವಿರ, ಕೇಂದ್ರ ಸರ್ಕಾದಿಂದ 3 ಸಾವಿರ ನಿಗದಿ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಕೇವಲ 650 ಮಾತ್ರ ಕೈಗೆ ಸಿಗುತ್ತಿದೆ. ಪ್ರೋತ್ಸಹ ಧನ ಹಾಗೂ ಗೌರವಧನ ಎರಡನ್ನೂ ಒಗ್ಗೂಡಿಸಿ ಮಾಸಿಕ ವೇತನ ನೀಡಬೇಕು. ಆರ್​ಸಿಹೆಚ್​ ಪೋರ್ಟಲ್ ಡೇಟಾ ಎಂಟ್ರಿ ಸಮಸ್ಯೆಯನ್ನು ಬಗೆಹರಿಸಿ, ಆಶಾ ಕಾರ್ಯಕರ್ತೆಯರಿಗೆ ಆಗುವ ನಷ್ಟವನ್ನು ತುಂಬಿಕೊಡಬೇಕು ಎಂದು ಎಐಯುಟಿಯುಸಿ ಒತ್ತಾಯಿಸಿ ಬೃಹತ್ ಹೋರಾಟಕ್ಕೆ ಕರೆ ನೀಡಿದೆ.

ರಾಜ್ಯದ್ಯಾಂತ ಪ್ರತಿಭಟನೆಗೆ ಮುಂದಾದ ವಕೀಲರ ಸಂಘ: ಬಾಗಲಕೋಟೆ: ವಕೀಲೆ‌ ಮೇಲೆ ನಡುರಸ್ತೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣವನ್ನು ಬಾಗಲಕೋಟೆ ವಕೀಲರ ಸಂಘ ಗಂಭೀರವಾಗಿ ಪರಿಗಣಿಸಿದೆ. ವಕೀಲೆ ಮೇಲೆ ಹಲ್ಲೆ ಖಂಡಿಸಿ ವಕೀಲರ ಸಂಘ ಇಂದು ರಾಜ್ಯದ್ಯಾಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ದೂರಿನಲ್ಲಿರುವ ಎಲ್ಲ ಆರೋಪಿತರನ್ನ ವಶಕ್ಕೆ ಪಡೆಯಬೇಕೆಂದು ಆಗ್ರಹಿಸುತ್ತಾರೆ. ಇದುವರೆಗೂ ಪ್ರಥಮ‌ ಆರೋಪಿ ಮಾಹಾಂತೇಶ್ ಚೊಳಚಗುಡ್ಡ ಮಾತ್ರ ಬಂಧನವಾಗಿದೆ. ಆದರೆ ಎರಡನೇ ಆರೋಪಿ ಹನಮಂತಪ್ಪ ಶಿಕ್ಕೇರಿ, ಮೂರನೇ ಆರೋಪಿ ರಾಜು ನಾಯ್ಕರ್, ನಾಲ್ಕನೇ ಆರೋಪಿ ಮುತ್ತಪ್ಪ ಶಿಕ್ಕೇರಿ, ಐದನೇ ಆರೋಪಿ ಶಂಕ್ರಪ್ಪ ಶಿಕ್ಕೇರಿ ಬಂಧನವಾಗಿಲ್ಲ. ಉಳಿದ ನಾಲ್ವರ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಾರೆ. 11 ಗಂಟೆಗೆ ಪ್ರತಿಭಟನೆ ನಡೆಯುತ್ತದೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳ ಸಾಥ್ ನೀಡುತ್ತವೆ.

ಇದನ್ನೂ ಓದಿ
Image
ಮಕ್ಕಳು ಪ್ರೌಢಾವಸ್ಥೆಗೆ ಬರುತ್ತಿದ್ದಂತೆ ಅಮ್ಮನ ಮಾತು ಕೇಳುವುದಿಲ್ಲ ಏಕೆ?
Image
ಮಂಗಳೂರಿನಲ್ಲಿ ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆ ವಿಚಾರ; ಅಷ್ಟಮಂಗಲ ಪ್ರಶ್ನೆ ಮೊರೆ ಹೋದ ಹಿಂದೂ ಸಂಘಟನೆ
Image
ಮಕ್ಕಳ ವಿಚಾರದಲ್ಲಿ ತಾಯಂದಿರು ಇದನ್ನು ಕಡೆಗಣಿಸಬೇಡಿ, ಹಣಕಾಸಿನ ವಿಚಾರದಲ್ಲಂತು ಕಡೆಗಣನೆ ಬೇಡವೇ ಬೇಡ!
Image
Avesh Khan: ಆವೇಶ್ ಖಾನ್ ಎಸೆದ ಬೆಂಕಿ ಬೌಲಿಂಗ್​ಗೆ ಆರೆಂಜ್ ಕ್ಯಾಪ್ ಬ್ಯಾಟರ್ ಬಟ್ಲರ್ ಕ್ಲೀನ್ ಬೌಲ್ಡ್: ವಿಡಿಯೋ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:42 am, Mon, 16 May 22

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ