Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇಂದು ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ; ನಗರದಲ್ಲಿ ಟ್ರಾಫಿಕ್ ಜಾಮ್ ಸಾಧ್ಯತೆ

15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರು, ಕೊರೊನಾ ಸಂದರ್ಭದಲ್ಲಿ ದಿನದ 24 ಗಂಟೆ ಸೇವೆ ಸಲ್ಲಿಸಿದ್ದಾರೆ. ಆದರೆ ಕೆಲಸಕ್ಕೆ ತಕ್ಕ ವೇತನ ನೀಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ; ನಗರದಲ್ಲಿ ಟ್ರಾಫಿಕ್ ಜಾಮ್ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:May 17, 2022 | 9:17 AM

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಸರ್ಕಾರಗಳಿಗೆ (Karnataka Government) ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಇಂದು (ಮೇ 17) ಬೃಹತ್ ಪ್ರತಿಭಟನೆ ನಡೆಸುತ್ತಾರೆ. ಎಐಯುಟಿಯುಸಿ (AIUTUC) ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ಫ್ರೀಡಂಪಾರ್ಕ್​ನಲ್ಲಿ ಧರಣಿ ಆರಂಭವಾಗಲಿದ್ದು, ಕೇಂದ್ರ, ರಾಜ್ಯ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಮುಟ್ಟಿಸಲಿದ್ದಾರೆ. ಪ್ರತಿಭಟನೆ ಹಿನ್ನೆಲೆ ಬೆಂಗಳೂರು ನಗರದಲ್ಲಿ ಇಂದು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದೆ. ಈಗಾಗಲೇ ಆಶಾ ಕಾರ್ಯಕರ್ತೆಯರು ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದಾರೆ.

15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರು, ಕೊರೊನಾ ಸಂದರ್ಭದಲ್ಲಿ ದಿನದ 24 ಗಂಟೆ ಸೇವೆ ಸಲ್ಲಿಸಿದ್ದಾರೆ. ಆದರೆ ಕೆಲಸಕ್ಕೆ ತಕ್ಕ ವೇತನ ನೀಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ 3 ಸಾವಿರ, ರಾಜ್ಯ ಸರ್ಕಾರ 5 ಸಾವಿರ ಎನ್ನುತ್ತಿದೆ. ಕೇಂದ್ರ ಸರ್ಕಾರದಿಂದ ಕೇವಲ 650 ರೂ. ಮಾತ್ರ ಕೈಗೆ ಸಿಗುತ್ತಿದೆ. ಪ್ರೋತ್ಸಾಹ ಧನ, ಗೌರವಧನ ಒಗ್ಗೂಡಿಸಿ ಮಾಸಿಕ ವೇತನ ನೀಡಬೇಕು. ಆರ್ಸಿಹೆಚ್ ಪೋರ್ಟಲ್ ಡೇಟಾ ಎಂಟ್ರಿ ಸಮಸ್ಯೆ ಬಗೆಹರಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಆಗುತ್ತಿರುವ ನಷ್ಟ ತುಂಬಿಕೊಡಬೇಕು. ಆರೋಗ್ಯ ಮತ್ತು ನಿವೃತ್ತ ಪರಿಹಾರ ಸೇರಿದಂತೆ ಹಲವು ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಧರಣಿ ನಡೆಯುತ್ತದೆ.

ಕಳೆದ ಬಾರಿಯೂ ಐವತ್ತು ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಗದರಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಿತ್ತು. ಈ ಬಾರಿ ಒಂದು ಲಕ್ಷ ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಬರಬೇಕು ಎಂದು ಎಐಯುಟಿಯುಸಿ ಸಂಘಟನೆ ಕರೆ ನೀಡಿದೆ. ಹೀಗಾಗಿ ಎಲ್ಲಾ ಜಿಲ್ಲೆಗಳಿಂದ ಕಾರ್ಯಕರ್ತೆಯರು ಬೆಂಗಳೂರಿಗೆ ದಾಂಗುಡಿ ಇಡುತ್ತಿದ್ದಾರೆ.

ಇದನ್ನೂ ಓದಿ
Image
ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪ್ರಿಯಕರನಿಗೆ ನೀಡಿದ ಆರೋಪ; ಮಗಳ ವಿರುದ್ಧ ದೂರು ನೀಡಿದ ತಾಯಿ
Image
ಕನ್ನಡದ ಮುದ್ದು ಚಾರ್ಲಿ ಎದುರು ಫೈಟ್​ ಮಾಡಲಿದೆ ಡೈನೋಸಾರ್; ಈ ಯುದ್ಧದಲ್ಲಿ ಏನಾಗಲಿದೆ ಭವಿಷ್ಯ?
Image
Crime News: ವೈಯಕ್ತಿಕ ದ್ವೇಷದ ಹಿನ್ನಲೆ ಚಾಕುವಿನಿಂದ ಇರಿದು ಯುವಕನ ಕೊಲೆ
Image
ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ! ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:14 am, Tue, 17 May 22

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ