18 ವರ್ಷ ದುಡಿದರೂ ಆರ್ಥಿಕ ಅಭದ್ರತೆ; ಗೌರವಧನ, ಹೆರಿಗೆ ರಜೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.17ರಂದು ಬೃಹತ್ ಪ್ರತಿಭಟನೆ

ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ನಾಳೆಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದ ಕಾರಣ, ₹15,000 ನಿಶ್ಚಿತ ಗೌರವಧನ, ಮೊಬೈಲ್ ಭತ್ಯೆ, ಹೆರಿಗೆ ರಜೆ ಸೇರಿದಂತೆ ಹಲವು ಸುಧಾರಣೆಗಳಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಪ್ರೋತ್ಸಾಹಧನ ಆಧಾರಿತ ವೇತನ ಪದ್ಧತಿಯಿಂದಾಗಿ ಅವರು ಆರ್ಥಿಕ ಅಸ್ಥಿರತೆ ಎದುರಿಸುತ್ತಿದ್ದಾರೆ.

18 ವರ್ಷ ದುಡಿದರೂ ಆರ್ಥಿಕ ಅಭದ್ರತೆ; ಗೌರವಧನ, ಹೆರಿಗೆ ರಜೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.17ರಂದು ಬೃಹತ್ ಪ್ರತಿಭಟನೆ
ಸಾಂದರ್ಭಿಕ ಚಿತ್ರ

Updated on: Nov 16, 2026 | 12:03 PM

ಬೆಂಗಳೂರು, ನ.16: ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ರಾಜ್ಯಾದ್ಯಂತ ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು (ASHA Workers) ನಾಳೆಯಿಂದ (ನವೆಂಬರ್ 17) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ‘ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ’ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದು, ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟದ ಹಾದಿ ಹಿಡಿಯುವುದು ಅನಿವಾರ್ಯವಾಗಿದೆ ಎಂದು ತಿಳಿಸಿದೆ.

ಕಳೆದ 18 ವರ್ಷಗಳಿಗೂ ಹೆಚ್ಚು ಕಾಲ ಆಶಾ ಕಾರ್ಯಕರ್ತೆಯರು ತಳಮಟ್ಟದಲ್ಲಿ ಅತ್ಯಗತ್ಯ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದ್ದಾರೆ. ಪ್ರತಿದಿನ 6 ರಿಂದ 8 ಗಂಟೆಗಳ ಕಾಲ ಕ್ಷೇತ್ರಕಾರ್ಯ ನಿರ್ವಹಿಸುವುದರ ಜೊತೆಗೆ, ತುರ್ತು ಸಂದರ್ಭಗಳಲ್ಲಿ ದಿನದ 24 ಗಂಟೆಯೂ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತಾರೆ.

Loading...

ಇಷ್ಟೆಲ್ಲಾ ಶ್ರಮವಹಿಸಿದರೂ ಆಶಾ ಕಾರ್ಯಕರ್ತೆಯರ ವೇತನವು ಈಗಲೂ ಬಹುತೇಕ ಪ್ರೋತ್ಸಾಹಧನ (Incentive-based) ಆಧಾರಿತವಾಗಿಯೇ ಮುಂದುವರಿದಿದೆ. ಇದರಿಂದ ಕಾರ್ಯಕರ್ತೆಯರು ತೀವ್ರ ಆರ್ಥಿಕ ಅಭದ್ರತೆ ಎದುರಿಸುತ್ತಿದ್ದಾರೆ. ದೇಶದ ಇತರೆ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ನಿಶ್ಚಿತ ಗೌರವಧನ ನೀಡಲಾಗುತ್ತಿದ್ದು, ಕರ್ನಾಟಕದಲ್ಲೂ ಅದೇ ಮಾದರಿ ಅನುಸರಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಇದನ್ನೂ ಓದಿ: ಏಳು ಶವಗಳನ್ನು ಸಾಗಿಸಲು ಪ್ರೆಸ್ ಬೋರ್ಡ್ ಹಾಕಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಇಂದುಶೇಖರ್: ಸ್ಫೋಟಕ ಸತ್ಯ ಬಯಲು

ಸರ್ಕಾರದ ಮುಂದಿರುವ ಆಶಾ ಕಾರ್ಯಕರ್ತೆಯರ 7 ಪ್ರಮುಖ ಬೇಡಿಕೆಗಳು:

ಪ್ರತಿಭಟನಾ ನಿರತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ರಾಜ್ಯ ಸರ್ಕಾರದ ಮುಂದೆ ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಇರಿಸಿದೆ:

₹15,000 ನಿಶ್ಚಿತ ಗೌರವಧನ: ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000 ನಿಶ್ಚಿತ ಗೌರವಧನವನ್ನು ನಿಗದಿಪಡಿಸಬೇಕು.

ಉತ್ತಮ ಗುಣಮಟ್ಟದ ಮೊಬೈಲ್ ಮತ್ತು ರೀಚಾರ್ಜ್ ಭತ್ಯೆ: ಆನ್‌ಲೈನ್ ವರದಿ ಹಾಗೂ ದತ್ತಾಂಶ ದಾಖಲಾತಿಗಾಗಿ ಉತ್ತಮ ಗುಣಮಟ್ಟದ ಮೊಬೈಲ್ ಫೋನ್‌ಗಳನ್ನು ವಿತರಿಸಬೇಕು ಮತ್ತು ಮಾಸಿಕ ರೀಚಾರ್ಜ್ ಭತ್ಯೆ ನೀಡಬೇಕು.

6 ತಿಂಗಳ ವೇತನ ಸಹಿತ ಹೆರಿಗೆ ರಜೆ: ಆಶಾ ಕಾರ್ಯಕರ್ತೆಯರಿಗೆ 6 ತಿಂಗಳ ವೇತನ ಸಹಿತ ಹೆರಿಗೆ ರಜೆ ಸೌಲಭ್ಯವನ್ನು ಜಾರಿಗೊಳಿಸಬೇಕು.

ಆರೋಗ್ಯೇತರ ಕೆಲಸಗಳಿಗೆ ಬ್ರೇಕ್: ಆರೋಗ್ಯ ಇಲಾಖೆಗೆ ಸಂಬಂಧಪಡದ ಇತರೆ ಇಲಾಖೆಗಳ ಹೆಚ್ಚುವರಿ ಕೆಲಸಗಳನ್ನು ಆಶಾ ಕಾರ್ಯಕರ್ತೆಯರಿಗೆ ವಹಿಸುವುದನ್ನು ತಕ್ಷಣವೇ ನಿಲ್ಲಿಸಬೇಕು.

ಸುಗಮಕಾರರ ಮರುನೇಮಕ: 2025ರ ಫೆಬ್ರವರಿ 25ರಿಂದ ಸೇವೆಯಿಂದ ಹಿಂಪಡೆಯಲಾಗಿರುವ ಆಶಾ ಸುಗಮಕಾರರನ್ನು ಸೂಕ್ತ ಸಂಭಾವನೆಯೊಂದಿಗೆ ತಕ್ಷಣವೇ ಮರುನೇಮಕ ಮಾಡಿಕೊಳ್ಳಬೇಕು.

ಬಾಕಿ ವೇತನ & ಪ್ರೋತ್ಸಾಹಧನ ಪಾವತಿ: 2024–25ನೇ ಸಾಲಿನ ಹೆಚ್ಚುವರಿ ಮಾಸಿಕ ಪ್ರೋತ್ಸಾಹಧನವಾದ ₹1,500 ಸೇರಿದಂತೆ ಬಾಕಿ ಉಳಿದಿರುವ ಎಲ್ಲಾ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us