ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಗರದಲ್ಲಿಂದು ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಬೆಂಗಳೂರು: 12 ಸಾವಿರಕ್ಕೆ ವೇತನ ಹೆಚ್ಚಳ ಮಾಡಬೇಕು, ಆರೋಗ್ಯ ವಿಮೆ ನೀಡಬೇಕು, ಪ್ರೋತ್ಸಾಹ ಧನ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿಂದು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ. ಹೀಗಾಗಿ ವಿವಿಧ ಕಡೆಗಳಿಂದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ತಂಡೋಪ ತಂಡವಾಗಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ ಜಾಥಾ ಆರಂಭವಾಗಲಿದೆ. ಹೀಗಾಗಿ ರೈಲ್ವೇ ಸ್ಟೇಷನ್ನಲ್ಲೇ ಕಾದು ಕುಳಿತಿದ್ದಾರೆ.
ಬೆಂಗಳೂರು: 12 ಸಾವಿರಕ್ಕೆ ವೇತನ ಹೆಚ್ಚಳ ಮಾಡಬೇಕು, ಆರೋಗ್ಯ ವಿಮೆ ನೀಡಬೇಕು, ಪ್ರೋತ್ಸಾಹ ಧನ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿಂದು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.
ಹೀಗಾಗಿ ವಿವಿಧ ಕಡೆಗಳಿಂದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ತಂಡೋಪ ತಂಡವಾಗಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ ಜಾಥಾ ಆರಂಭವಾಗಲಿದೆ. ಹೀಗಾಗಿ ರೈಲ್ವೇ ಸ್ಟೇಷನ್ನಲ್ಲೇ ಕಾದು ಕುಳಿತಿದ್ದಾರೆ.
Published On - 8:25 am, Fri, 3 January 20