AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2000 ರೂ. ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು: ಹೋರಾಟ ಮುಂದುವರಿಸಲು ನಿರ್ಧಾರ

ವೇತನವನ್ನು 15000 ರೂಪಾಯಿಗೆ ಹೆಚ್ಚಿಸಬೇಕೆಂದು ಕಳೆದ 12 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಸಿಎಂ ಕರೆದು ಮಾತುಕತೆ ಮಾಡಿ 2000 ರೂ. ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಸಭೆಯಲ್ಲಿ ಸಿಎಂ ಸಂಘಟನೆ ಪ್ರತಿನಿಧಿಗಳನ್ನು ಮನವೊಲಿಸಿದ್ದರು. ಸಿಎಂ ಮಾತಿಗೆ ಸಂಘಟನೆಕಾರರು ಸಹ ಒಪ್ಪಿಕೊಂಡಿದ್ದರು. ಆದ್ರೆ, ಇದೀಗ ಆಶಾ ಕಾರ್ಯಕರ್ತೆಯರು ಮಾತ್ರ ಯಾವುದೇ ಕಾರಣಕ್ಕೂ ಒಪ್ಪುತ್ತಿಲ್ಲ.

2000 ರೂ. ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು: ಹೋರಾಟ ಮುಂದುವರಿಸಲು ನಿರ್ಧಾರ
Asha Workers
ಅರುಣ್ ಕುಮಾರ್​ ಆರ್​.
| Edited By: |

Updated on:Nov 28, 2026 | 9:30 PM

Share

ಬೆಂಗಳೂರು, ನವೆಂಬರ್ 28: ಆಶಾ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ 2000 ರೂ ಹೆಚ್ಚಿಸುವುದಾಗಿ ಒಪ್ಪಿಕೊಂಡಿದೆ. ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರೇ ಆಶಾ ಕಾರ್ಯಕರ್ತೆಯರೊಂದಿಗೆ ಸಭೆ ಮಾಡಿ ಸದ್ಯಕ್ಕೆ 2000 ರೂ. ಹೆಚ್ಚಳ ಮಾಡುತ್ತೇವೆ. ಇನ್ನುಳಿದಿರುವುದನ್ನು ಬಜೆಟ್​​ನಲ್ಲಿ ಘೋಷಿಸಿಸುವುದಾಗಿ ಭರವಸೆ ನೀಡಿ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳಿಗೆ ಮನವೊಲಿಸಿದ್ದರು. ಆದ್ರೆ, ಇದೀಗ ಪ್ರತಿಭಟನೆ ನಿರತ ಆಶಾ ಕಾರ್ಯಕರ್ತೆಯರು ಇದಕ್ಕೆ ಸುತರಾಂ ಒಪ್ಪುತ್ತಿಲ್ಲ. ಹೀಗಾಗಿ ಫ್ರೀಡಂಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮುಂದುವರಿಸಲು ತೀರ್ಮಾನಿಸಿದ್ದಾರೆ.

ಈ ಬಗ್ಗೆ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮೀ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು,ಸಿಎಂ ಸಭೆಯ ತೀರ್ಮಾನಕ್ಕೆ ಆಶಾ ಕಾರ್ಯಕರ್ತೆಯರು ಒಪ್ಪಿಲ್ಲ . ಆ ಕಾರಣಕ್ಕೆ ಸಂಘಟನೆಯ ಮುಖಂಡರು ಹಾಗೂ ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರಿಸಲು ನಿರ್ಧರಿಸಲಾಗಿದೆ. ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ಮುಂದುವರೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತೆಯರ ಜತೆಗಿನ ಸಿಎಂ ಸಂಧಾನ ಸಕ್ಸಸ್: 2 ಸಾವಿರ ರೂ. ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ

ನಮಗೆ ನಮ್ಮ ಬೇಡಿಕೆ ಬಗ್ಗೆ ಲಿಖಿತ ರೂಪದಲ್ಲಿ ನಾವು ಕೇಳಿದ್ವಿ. ಲಿಖಿತ ರೂಪದಲ್ಲಿ ನಮಗೆ ಸ್ಪಷ್ಟ ಸಂದೇಶ ಬರುವವರೆಗೂ ಹೋರಾಟ ಮಾಡುತ್ತೇವೆ. ಯಾರೋ ಕೊಟ್ಟ ಹೂಗುಚ್ಛವನ್ನ ನಾವು ಸಿಎಂಗೆ ಕೊಟ್ಟಿದ್ದೇವೆ. ಕೆಲವು ತಪ್ಪು ಸಂದೇಶ ರವಾನೆಯಾಗಿದೆ. ನಾವು ಗುಟ್ಟಾಗಿ ಮಾಡುವಂತಹದ್ದು ಏನೂ ಇಲ್ಲ. ಕೆಲ ಆಶಾ ಕಾರ್ಯಕರ್ತೆಯರಿಗೂ ತಪ್ಪು ಸಂದೇಶ ಹೋಗಿದೆ. ನಾನು ತಪ್ಪು ಮಾಡಿದ್ರೆ ನಾಡಿನ ಜನತೆಗೆ ಕ್ಷಮೆ ಕೋರಲು ಸಿದ್ಧ. ನಮ್ಮ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಕಣ್ಣೀರಿಟ್ಟರು. ಗುಲಾಬಿ ಸೀರೆಯುಟ್ಟು ಒಗ್ಗಟ್ಟಿನಿಂದ ಆಶಾ ಕಾರ್ಯಕರ್ತೆಯರ ಹೋರಾಟ ಸಂಬಂಧ ಸಿಎಂ ಹಾಗೂ ಆರೋಗ್ಯ ಸಚಿವರು ಈ ಹಿಂದೆ ನಡೆಸಿದ ಸಂಧಾನಗಳು ವಿಫಲ ಆಗಿದ್ದವು. ಲಿಖಿತ ಆದೇಶದವರೆಗೂ ಹೋರಾಟ ಕೈಬಿಡಲ್ಲ ಅಂತಾ ಆಶಾ ಪಡೆ ಪಟ್ಟು ಹಿಡಿದಿತ್ತು. ಇದೇ ಹೋರಾಟ ಇಂದು 12 ದಿನಕ್ಕೆ ಕಾಲಿಟ್ಟಿತ್ತು. ಹೀಗಾಗಿ ಇಂದು ಮುಖ್ಯಮಂತ್ರಿಗಳೇ ಅಖಾಡಕ್ಕೆ ಇಳಿದು 2 ಸಾವಿರ ರೂಪಾಯಿ ಹೆಚ್ಚಳ ಮಾಡುವುದಾಗಿ ಆಶಾ ಮುಖಂಡರ ಜತೆ ಸಂಧಾನ ನಡೆಸಿದರು. ಸಿಎಂ ಮುಂದೆ ಸಂಘದ ಪ್ರತಿನಿಧಿಗಳು ತಲೆ ಆಡಿಸಿ ಬಂದರು. ಆದ್ರೆ, ಪ್ರತಿಭಟನೆ ನಿತರ ಕಾರ್ಯಕರ್ತೆಯರು ಮಾತ್ರ ಯಾವುದೇ ಕಾರಣಕ್ಕೂ ಒಪ್ಪಿಲ್ಲ. ಹೀಗಾಗಿ ಧರಣಿ ಮುಂದುವರೆಯಲಿದೆ.

ಒಟ್ಟಿನಲ್ಲಿ ಆರೋಗ್ಯ ಸಚಿವ ಖಾದರ್ ಹಾಗೂ ಸಿಎಂ ಡಿಕೆ ಶಿವಕುಮಾರ್ ಮನವೊಲಿಕೆಗೂ ಬಗ್ಗದ ಆಶಾ ಕಾರ್ಯಕರ್ತೆಯರು ಧರಣಿ ಮುಂದುವರಿಸಲು ತೀರ್ಮಾನಿಸಿದ್ದಾರೆ. ಈ ಮೂಲಕ ಇನ್ನೇನು ಎಲ್ಲವೂ ಅಂತ್ಯವಾಯ್ತು ಎನ್ನುವಷ್ಟರಲ್ಲಿ ಸರ್ಕಾರಕ್ಕೆ ಮತ್ತೆ ಶಾಕ್ ಕೊಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:27 pm, Sat, 28 November 26

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು
ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ? ಇಂದು ದೆಹಲಿಗೆ ಸಿಎಂ
ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ? ಇಂದು ದೆಹಲಿಗೆ ಸಿಎಂ
ಸುದೀಪ್ ಪಾರ್ಟಿಗೆ ಬರ್ತಿಲ್ಲ; ದೂರಿದ ನಲಪಾಡ್
ಸುದೀಪ್ ಪಾರ್ಟಿಗೆ ಬರ್ತಿಲ್ಲ; ದೂರಿದ ನಲಪಾಡ್