AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET ವಿಚಾರವಾಗಿ ಕೇಂದ್ರ ಸಚಿವರ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದಲ್ಲಿ ನಡೆದ ಗಂಭೀರ ಘಟನೆಗಳಿಗೆ ಹೊಣೆ ಯಾರೆಂದು ಕಾಂಗ್ರೆಸ್​​ಗೆ ಅಶೋಕ್​​ ಪ್ರಶ್ನೆ

NEET ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಯ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ರಾಜೀನಾಮೆ ಬೆನ್ನಲ್ಲೇ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ, ಐಪಿಎಲ್ ಕಾಲ್ತುಳಿತ ದುರಂತ ಹಾಗೂ ರೈತರ ಆತ್ಮಹತ್ಯೆಗಳಿಗೆ ನೈತಿಕ ಹೊಣೆ ಯಾರೆಂದು ಕಾಂಗ್ರೆಸ್ ಸರ್ಕಾರಕ್ಕೆ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಎಂದರೆ ಕೇವಲ ಹುದ್ದೆಯಲ್ಲ; ಅದರೊಂದಿಗೆ ಜವಾಬ್ದಾರಿಯೂ ಇರುತ್ತದೆ ಎಂದವರು ಇದೇ ವೇಳೆ ತಿಳಿಸಿದ್ದಾರೆ.

NEET ವಿಚಾರವಾಗಿ ಕೇಂದ್ರ ಸಚಿವರ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದಲ್ಲಿ ನಡೆದ ಗಂಭೀರ ಘಟನೆಗಳಿಗೆ ಹೊಣೆ ಯಾರೆಂದು ಕಾಂಗ್ರೆಸ್​​ಗೆ ಅಶೋಕ್​​ ಪ್ರಶ್ನೆ
ಆರ್. ಅಶೋಕ್Image Credit source: PTI
ಪ್ರಸನ್ನ ಹೆಗಡೆ
|

Updated on:Jul 26, 2026 | 1:47 PM

Share

ಮುಖ್ಯಾಂಶಗಳು

  • NEET ವಿಚಾರವಾಗಿ ಕೇಂದ್ರ ಸಚಿವರ ರಾಜೀನಾಮೆ
  • ರಾಜ್ಯ ಸರ್ಕಾರದ ವಿರುದ್ಧ ಅಶೋಕ್​ ವಾಗ್ದಾಳಿ
  • ಕರ್ನಾಟಕದಲ್ಲಿನ ಘಟನೆಗಳಿಗೆ ಹೊಣೆ ಯಾರೆಂದು ಪ್ರಶ್ನೆ

ಬೆಂಗಳೂರು, ಜುಲೈ 26: ಕರ್ನಾಟಕದ ಕಾಂಗ್ರೆಸ್ ವಿರುದ್ಧ ದ್ವಂದ್ವ ನೀತಿ ಆರೋಪ ಮಾಡಿ ಎಕ್ಸ್ ಪೋಸ್ಟ್ ಮೂಲಕ ಸರ್ಕಾರದ ವಿರುದ್ಧ ವಿಧಾನ ಸಭೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಕೇಂದ್ರದಲ್ಲಿ NEET ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಆಡಳಿತಾತ್ಮಕ ಹೊಣೆ ಹೊತ್ತು ಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರೆ. ಹಾಗಾದರೆ ಕರ್ನಾಟಕದಲ್ಲಿ ನಡೆದ ಗಂಭೀರ ಘಟನೆಗಳಿಗೆ ನೈತಿಕ ಮತ್ತು ಆಡಳಿತಾತ್ಮಕ ಹೊಣೆ ಯಾರು ಹೊರುತ್ತಾರೆ? ಎಂದವರು ಖಾರವಾಗಿ ಪ್ರಶ್ನಿಸಿದ್ದಾರೆ.

ಸರ್ಕಾರಕ್ಕೆ ಅಶೋಕ್​​ ಸಾಲು ಸಾಲು ಪ್ರಶ್ನೆ

KPSC ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಒಂದು ಹುದ್ದೆಗೆ ₹80 ಲಕ್ಷ ಡೀಲ್ ನಡೆದಿರುವ ಆರೋಪದ ಆಡಿಯೋ ಬಹಿರಂಗವಾಗಿದೆ. ಈ ಆರೋಪಗಳ ಕುರಿತು ಸಮಗ್ರ, ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ಯಾವಾಗ? ಐಪಿಎಲ್ ವಿಜಯೋತ್ಸವದ ಕಾಲ್ತುಳಿತ ದುರಂತದಲ್ಲಿ 11 ಅಮಾಯಕ ಜೀವಗಳು ಬಲಿಯಾದವು. ಆ ದುರಂತಕ್ಕೆ ನೈತಿಕ ಮತ್ತು ಆಡಳಿತಾತ್ಮಕ ಹೊಣೆ ಯಾರು ಹೊರುತ್ತಾರೆ? ನೊಂದ ಕುಟುಂಬಗಳಿಗೆ ಸಂಪೂರ್ಣ ನ್ಯಾಯ ಯಾವಾಗ ದೊರೆಯುತ್ತದೆ? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ ಮೂರು ವರ್ಷಗಳಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ತಡೆಯಲಾರದೆ ನೂರಾರು ಬಡವ ಸಾಲಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ? ಇದಕ್ಕೆಲ್ಲ ಯಾರು ಹೊಣೆ? ಎಂದವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ; 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದ ಮಾಜಿ ಸಿಎಂ

ಪ್ರಜಾಪ್ರಭುತ್ವದಲ್ಲಿ ಅಧಿಕಾರ ಎಂದರೆ ಕೇವಲ ಹುದ್ದೆಯಲ್ಲ; ಅದರೊಂದಿಗೆ ಜವಾಬ್ದಾರಿಯೂ ಇರುತ್ತದೆ. ತಪ್ಪುಗಳು ನಡೆದಾಗ ಅಧಿಕಾರಿಗಳ ಮೇಲೆ ಗೂಬೆ ಕೂರಿಸದೆ, ನಾಮಕಾವಸ್ತೆ ತನಿಖೆಗಳ ಹೆಸರಿನಲ್ಲಿ ತಪ್ಪಿಸಿಕೊಳ್ಳದೆ ಉತ್ತರದಾಯಿತ್ವ ಸ್ವೀಕರಿಸಬೇಕು. ಪ್ರತಿಯೊಂದು ಪ್ರಕರಣದಲ್ಲೂ ಸತ್ಯ ಹೊರಬರಬೇಕು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಾಗಬೇಕು ಹಾಗೂ ಜನರ ವಿಶ್ವಾಸವನ್ನು ಮರುಸ್ಥಾಪಿಸುವ ಕಾರ್ಯ ನಡೆಯಬೇಕು ಎಂದವರು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:44 pm, Sun, 26 July 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ