ಅಂಬೇಡ್ಕರ್​ಗೆ ಅಪಮಾನ ವಿಚಾರ: ವರದಿ ನೀಡಲು ಶಿಕ್ಷಣ ಇಲಾಖೆಗೆ ಅಶ್ವತ್ಥ ನಾರಾಯಣ ಸೂಚನೆ, ಜೈನ್​ ವಿವಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆ

ಅಂಬೇಡ್ಕರ್​ರಿಗೆ ಅಪಮಾನ ವಿಚಾರ ಸದ್ಯ ವಿವಾದಾಸ್ಪದವಾಗಿದ್ದು, ಘಟನೆ ಬಗ್ಗೆ ವರದಿ ನೀಡಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಸೂಚನೆ ನೀಡಿದ್ದಾರೆ.

ಅಂಬೇಡ್ಕರ್​ಗೆ ಅಪಮಾನ ವಿಚಾರ: ವರದಿ ನೀಡಲು ಶಿಕ್ಷಣ ಇಲಾಖೆಗೆ ಅಶ್ವತ್ಥ ನಾರಾಯಣ ಸೂಚನೆ, ಜೈನ್​ ವಿವಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆ
ಜೈನ್ ವಿಶ್ವವಿದ್ಯಾಲಯದ ಎದರು ಪ್ರತಿಭಟನೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 12, 2023 | 3:06 PM

ಬೆಂಗಳೂರು: ನಗರದ ಜೈನ್​​ ವಿಶ್ವವಿದ್ಯಾಲಯದಲ್ಲಿ ಡಾ. ಬಿ.ಆರ್​ ಅಂಬೇಡ್ಕರ್​ರಿಗೆ  (Ambedkar) ಅಪಮಾನ ವಿಚಾರವಾಗಿ ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR) ದಾಖಲು ಮಾಡಲಾಗಿದೆ. ಸದ್ಯ ಈ ಘಟನೆ ವಿವಾದಾಸ್ಪದವಾಗಿರುವ ಹಿನ್ನೆಲೆ ಘಟನೆ ಬಗ್ಗೆ ವರದಿ ನೀಡಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಸೂಚನೆ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ,  ಜೈನ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆ ದುರದೃಷ್ಟಕರ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿಗಳಾಗಿದ್ದಾರೆ. ಅವರನ್ನು ಇಡೀ ಜಗತ್ತೇ ಗೌರವಿಸುತ್ತಿದೆ, ಅಂಥವರನ್ನು ಅಪಮಾನಿಸಿದ್ದರೆ ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜೈನ್ ವಿಶ್ವವಿದ್ಯಾಲಯದ ವಿರುದ್ಧ ಸಿಡಿದೆದ್ದ ದಲಿತ ಹಾಗೂ ವಿವಿಧ ಸಂಘಟನೆಗಳು

ಇನ್ನು ಘಟನೆ ಹಿನ್ನೆಲೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಮೇಲೆ ದಲಿತ ಹಾಗೂ ವಿವಿಧ ಸಂಘಟನೆಗಳು ಸಿಡಿದೆದ್ದಿದ್ದಾರೆ.  ಇಂದು ದಲಿತ ಸಂಘಟನೆಗಳು, ಎನ್​ಎಸ್​​ಯೂಐ (NSUI)ಯಿಂದ ಯೂನಿವರ್ಸಿಟಿ ಮುಂದೆ ಪ್ರತಿಭಟನೆ ಮಾಡಲಾಯಿತು. ಅಂಬೇಡ್ಕರ್, ದಲಿತರ ಮೇಲೆ ಆಕ್ಷೇಪಾರ್ಹ ಹೇಳಿಕೆ ಆರೋಪ ಹಿನ್ನಲೆ ರಾಜ್ಯಾದ್ಯಂತ ಪ್ರತಿಭಟನೆಗೆ ದಲಿತ ಸಂಘಟನೆಗಳು ನಿರ್ಧರಿಸಿವೆ. ಜೈನ್ ಯೂನಿವರ್ಸಿಟಿಯ ಸೆಂಟರ್ ಪಾರ್ ಮ್ಯಾನೇಜ್ಮೆಂಟ್ ಸ್ಟಡೀಸ್​ನ 6 ವಿದ್ಯಾರ್ಥಿಗಳಿಂದ ಅಂಬೇಡ್ಕರ್ ಹಾಗೂ ದಲಿತರಿಗೆ ಅವಮಾನ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮತ್ತೆ 8 ಸಹಶಿಕ್ಷಕರನ್ನು ಬಂಧಿಸಿದ ಸಿಐಡಿ ಪೊಲೀಸರು

ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆ್ಯಡ್ ಸ್ಪರ್ಧೆಯಲ್ಲಿ ಜಾತಿ ವ್ಯವಸ್ಥೆಯನ್ನ ಖಂಡಿಸುವ ಸಂದೇಶ ನೀಡುವ ಭರದಲ್ಲಿ ವಿದ್ಯಾರ್ಥಿಗಳಿಂದ ಬಿ. ಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್. ಡೋಂಟ್ ಟಚ್ ಮಿ, ಟಚ್ ಮಿ ಅಂತ ಹಾಡು ಹಾಕಿ ಅವಮಾನ ಮಾಡಿದ್ದಾರೆಂದು ಆರೋಪಿಸಲಾಗುತ್ತಿದೆ. ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು ಎಂದು ‍ವಿವಾದಾತ್ಮಕ ಸ್ಕಿಟ್ ಪ್ರದರ್ಶನ ಮಾಡಲಾಗಿದೆ.

ಇದನ್ನೂ ಓದಿ: Traffic Updates: ಏರೋ ಇಂಡಿಯಾ ಶೋ; ಬೆಂಗಳೂರಿನಲ್ಲಿ ಟ್ರಾಫಿಕ್ ಬದಲಾವಣೆ; ಹೊಸ ಅಪ್​ಡೇಟ್ಸ್ ಇಲ್ಲಿವೆ

ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ FIR

ಇನ್ನು ಈ ವಿಚಾರವಾಗಿ ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ನಿನ್ನೆ( ಫೆ. 11) ಎಫ್​ಐಆರ್ (FIR) ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣಾಧಿಕಾರಿ ದೂರು ಹಿನ್ನೆಲೆ ಎಫ್​ಐಆರ್​ ದಾಖಲಿಸಲಾಗಿದೆ. ಕಾರ್ಯಕ್ರಮ ಒಂದರಲ್ಲಿ ಅಂಬೇಡ್ಕರ್​ರ ಮೀಸಲಾತಿ ಬಗ್ಗೆ ಅವಹೇಳನ ಮಾಡಲಾಗಿದೆ ಎನ್ನಲಾಗಿದೆ. ಖಾಸಗಿ ಕಾಲೇಜು ಪ್ರಾಂಶುಪಾಲರು, ಡೀನ್, ಕಾರ್ಯಕ್ರಮ ಆಯೋಜಕರು, ವಿದ್ಯಾರ್ಥಿಗಳು, ಸ್ಕಿಟ್​ ಬರಹಗಾರರ ವಿರುದ್ಧ ಎಫ್​ಐಆರ್ ಹಾಕಲಾಗಿದೆ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಫೆಬ್ರವರಿ 8ರಂದು ಕಾರ್ಯಕ್ರಮ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:04 pm, Sun, 12 February 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ