ಸ್ಯಾಂಕಿ ಕೆರೆ ಸದ್ಬಳಕೆ ಬಗ್ಗೆ ಅರಿವು ಮೂಡಿಸುತ್ತಿರುವುದಕ್ಕೆ ಧನ್ಯವಾದ: ಡಿಕೆ ಶಿವಕುಮಾರ್ ವಾಕಿಂಗ್ ಅಭ್ಯಾಸಕ್ಕೆ ಅಶ್ವತ್ಥ್ ನಾರಾಯಣ ಟಾಂಗ್
ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಡಿಕೆಶಿ ವಾಕಿಂಗ್ ಪ್ರಾಕ್ಟಿಸ್ ಮಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಸಚಿವ ಅಶ್ವತ್ಥ್ ನಾರಾಯಣ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು: ಸ್ಯಾಂಕಿ ಕೆರೆ ಸದ್ಬಳಕೆ ಬಗ್ಗೆ ಅರಿವು ಮೂಡಿಸುತ್ತಿರುವುದಕ್ಕೆ ಧನ್ಯವಾದ. ಡಿ.ಕೆ. ಶಿವಕುಮಾರ್ ಅವರೇ ಹೊಸ ವರ್ಷದ ಶುಭಾಶಯಗಳು. ಮಲ್ಲೇಶ್ವರಂ ಕ್ಷೇತ್ರ ವ್ಯಾಪ್ತಿಯ ಸ್ಯಾಂಕಿ ಕೆರೆ ಸದ್ಬಳಕೆ ಬಗ್ಗೆ ಅರಿವು ಮೂಡಿಸುತ್ತಿರುವುದಕ್ಕೆ ನನ್ನ ಕಡೆಯಿಂದ ಧನ್ಯವಾದಗಳು. ವಾಯು ವಿಹಾರಿಗಳನ್ನು ಗಮನಿಸಿ ಸ್ವಚ್ಛ, ಸುಂದರವಾಗಿಟ್ಟಿದ್ದೇವೆ. ಈ ವಾತಾವರಣ ಆಹ್ಲಾದಕರವಾಗಿರುತ್ತೆಂದು ಭಾವಿಸುತ್ತೇನೆ ಎಂದು ಟ್ವೀಟ್ ಮೂಲಕ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಟಾಂಗ್ ಕೊಟ್ಟಿದ್ದಾರೆ.
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಕೈಗೊಳ್ಳಲಿದೆ. ಪಾದಯಾತ್ರೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಕಿಂಗ್ ಪ್ರಾಕ್ಟಿಸ್ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಪ್ರತಿನಿತ್ಯ 6- 7 ಕಿ.ಮೀ. ನಡೆಯುತ್ತಿರುವ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು. ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಡಿಕೆಶಿ ವಾಕಿಂಗ್ ಪ್ರಾಕ್ಟಿಸ್ ಮಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಸಚಿವ ಅಶ್ವತ್ಥ್ ನಾರಾಯಣ ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ ನಾಳೆ ಚಾಮರಾಜನಗರದಲ್ಲಿ ಕಾಂಗ್ರೆಸ್ ಪೂರ್ವಭಾವಿ ಸಭೆ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ ನಾಳೆ ಚಾಮರಾಜನಗರದಲ್ಲಿ ಕಾಂಗ್ರೆಸ್ ಪೂರ್ವಭಾವಿ ಸಭೆ ನಡೆಸಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಭಾಗಿ ಆಗಲಿದ್ದಾರೆ. ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ.
ಇದನ್ನೂ ಓದಿ: ಅಶೋಕಣ್ಣನಿಗೆ ಮೇಕೆ, ಕುರಿ, ನಾಟಿಕೋಳಿ ರುಚಿ ಚೆನ್ನಾಗಿ ಗೊತ್ತಿದೆ, ಬೆಂಗಳೂರು ಬಗ್ಗೆ ಕಾಳಜಿ ಇಲ್ಲ; ಡಿಕೆ ಶಿವಕುಮಾರ್