ಬೆಂಗಳೂರು, ಮಾ.18: ನಗರತ್ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ (Assault) ನಡೆಸಿದ ಪ್ರಕರಣ ಸದ್ಯ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಎಸ್.ಜೆ.ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ನೇತೃತ್ವದಲ್ಲಿ ಎಸ್.ಪಿ.ರೋಡ್, ಚಿಕ್ಕಪೇಟೆ ಸೇರಿದಂತೆ ಹಲವೆಡೆ ಪಥ ಸಂಚಲನ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಜನರಿಗೆ ಮನವಿ ಮಾಡಿದ್ದಾರೆ. ಅಲ್ಲದೆ, ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಂಗಡಿ ಮಾಲೀಕರು, ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ.
ಪ್ರಕರಣ ಸಂಬಂಧ ಮಾತನಾಡಿದ ಕೇಂದ್ರ ವಿಭಾಗ ಡಿಸಿಪಿ ಶೇಖರ್, ನಿನ್ನೆ ಸಾಯಂಕಾಲ ಸಿದ್ದನಗಲ್ಲಿಯಲ್ಲಿ ಗಲಾಟೆ ಆಗಿದೆ. ಹಾಡು ಹಾಕಿದ ವಿಚಾರಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಸಂಜೆ ವೇಳೆ ಆರು ಜನ ಆರೋಪಿಗಳ ಬಗ್ಗೆ ದೂರು ನೀಡಿದ್ದಾರೆ. ಭಜನೆ ಹಾಡು ಹಾಕಿ ಕೇಳ್ತಿರುವಾಗ ಹಲ್ಲೆ ಮಾಡಿದ್ದಾರೆಂದು ಹೇಳಿಕೆ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೂಸರಯು ಮೂವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದರು.
ಹಲ್ಲೆ ಘಟನೆಯನ್ನು ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಮಾಡಿದ ಪ್ರಕರಣದ ನಂತರ ಇದೀಗ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ಕಾರಣ ಎಂದು ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆಗಳ ಘೋಷಣೆ ಮತ್ತು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದಂತಹ ಘಟನೆಗಳ ನಂತರ ಈಗ ಬೆಂಗಳೂರಿನ ಹಿಂದೂ ಅಂಗಡಿಯವನೊಬ್ಬ ಹನುಮಾನ್ ಚಾಲೀಸಾ ನುಡಿಸಿದ್ದಕ್ಕಾಗಿ ಅಮಾನುಷವಾಗಿ ಹಲ್ಲೆ ನಡೆಸಲಾಯಿತು.
ಇದನ್ನೂ ಓದಿ: ಜೋರು ಸೌಂಡ್ ಇಟ್ಟು ಹಾಡು ಹಾಕಿದ್ದಕ್ಕೆ ಹಲ್ಲೆ: ಸ್ಥಳಕ್ಕೆ ತೇಜಸ್ವಿ ಸೂರ್ಯ ಭೇಟಿ, ಕೇಸ್ ಬುಕ್
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ವಿಜಯೇಂದ್ರ, ಕಾಂಗ್ರೆಸ್ ಆಡಳಿತದ ತುಷ್ಟೀಕರಣ ನೀತಿಗಳು ಕರ್ನಾಟಕವನ್ನು ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ಹದಗೆಡುವ ಮೂಲಕ ಆಮೂಲಾಗ್ರ ಸ್ಥಿತಿಗೆ ತಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂದೂಗಳು ಮತ್ತು ಹಿಂದೂ ಸಂಸ್ಥೆಗಳ ಮೇಲಿನ ಈ ದಾಳಿಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುತ್ತೇನೆ. ಅವರ ತುಷ್ಟೀಕರಣ ರಾಜಕಾರಣವು ಅನಾಗರಿಕರನ್ನು ರಾಜ್ಯದಲ್ಲಿ ಅಟ್ಟಹಾಸ ನಡೆಸಲು ಪ್ರೋತ್ಸಾಹಿಸಿದೆ ಎಂದು ಆರೋಪಿಸಿದ್ದಾರೆ.
Following incidents such as the chanting of “Pakistan Zindabad” slogans in Vidhan Soudha and a bomb explosion at Rameshwaram Cafe now a Hindu shopkeeper in Bengaluru was viciously assaulted for playing the Hanuman Chalisa.
The appeasement policies of the @INCKarnataka… pic.twitter.com/NTANCBRCla
— Vijayendra Yediyurappa (Modi Ka Parivar) (@BYVijayendra) March 18, 2024
ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿಯದೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಮತ್ತು ಸಮಾಜ ವಿರೋಧಿ ಅಂಶಗಳನ್ನು ಕೂಡಲೇ ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಒತ್ತಾಯಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ