ಬೆಂಗಳೂರು: 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಜೈಲಿನ ಒಳಗೆ ಆತ್ಮಹತ್ಯೆ

ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣಾ ನಿವಾಸಿ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿತ್ತು. ಇದೀಗ ಆರೋಪಿ ಆತ್ಮಹತ್ಯೆ ಮಾಡಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಜೈಲಿನ ಒಳಗೆ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 09, 2022 | 2:32 PM

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಜೈಲಿನ ಒಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ತಿಬೆಲೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣಾ ನಿವಾಸಿ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿತ್ತು. ಇದೀಗ ಆರೋಪಿ ಆತ್ಮಹತ್ಯೆ ಮಾಡಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಅಗ್ರಹಾರ ಜೈಲಿನ ಒಳಗೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​​ನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಶೇಷಾದ್ರಿ ರಸ್ತೆಯಲ್ಲಿ BMTC ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುತ್ತಿದ್ದಾರೆ. 2014 ರಲ್ಲಿ 186 ಅಶೋಕ್ ಲೇಲ್ಯಾಂಡ್ ಬಸ್ಸುಗಳನ್ನು ಖರೀದಿ ಮಾಡಲಾಗಿತ್ತು. ಇತ್ತೀಚಿಗೆ ಎರಡು ಮಿಡಿ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸೌತ್ ಎಂಡ್ ಸರ್ಕಲ್ ಮತ್ತು ಮಕ್ಕಳ ಕೂಟದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬಿಎಂಟಿಸಿ ಅಧಿಕಾರಿಗಳು ಅಶೋಕ್ ಲೇಲ್ಯಾಂಡ್ ಕಂಪನಿಗೆ ದೂರು ನೀಡಿ, ನಂತರ ಅಲ್ಲಿಂದ ಇಂಜಿನಿಯರ್​ಗಳು ಬಂದು ಎಲ್ಲಾ ಬಸ್​ಗಳನ್ನು ತಪಾಸಣೆ ಮಾಡಿ ಸಮಸ್ಯೆ ಬಗಹರಿಸಿದ್ದರು. ಬಳಿಕವೇ ಬಸ್​ಗಳನ್ನು ಮತ್ತೆ ರೋಡ್​ಗೆ ಇಳಿಸಲಾಗಿತ್ತು ಎಂದು ಹೇಳಲಾಗಿದೆ. ಆದರೆ, ನಂತರ ಈಗ ಮತ್ತೊಂದು ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ದಾವಣಗೆರೆ: ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್​ನಲ್ಲಿ ನವಜಾತ ಶಿಶು ಸಾವು

ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್​ನಲ್ಲಿ ನವಜಾತ ಶಿಶು ಸಾವನ್ನಪ್ಪಿದ ದಾರುಣ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ಸಂಭವಿಸಿದೆ. ಶೃಂಗಾರಬಾಬು ತಾಂಡಾದ ಹಾಲೇಶ್- ಸ್ವಾತಿ ದಂಪತಿಯ ಮಗು ಆಂಬುಲೆನ್ಸ್​ನಲ್ಲೇ ಮೃತಪಟ್ಟಿದೆ. ನಿನ್ನೆ ತಡರಾತ್ರಿ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಿಕರು ದಾಖಲಿಸಿದ್ದರು. ಆದರೆ, ಬಳಿಕ ಅವಘಡ ಸಂಭವಿಸಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪೋಷಕರ ಆಕ್ರೋಶ ಕೇಳಿಬಂದಿದೆ.

ಚಾಮರಾಜನಗರ: ಆನೆ ದಾಳಿಯಿಂದ ವ್ಯಕ್ತಿ ಸಾವು

ಚಾಮರಾಜನಗರದ ಮೂಡಹಳ್ಳಿ ಬಳಿ ಕಾಡಾನೆ ದಾಳಿಯಿಂದ ಕೋಳಿಪಾಳ್ಯದ ಸುರೇಶ್ (38) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಲೂನ್​ನಲ್ಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿ ದುರ್ಘಟನೆ ಸಂಭವಿಸಿದೆ.

ಬಾಗಲಕೋಟೆ: ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆ

ಬಾದಾಮಿ ತಾಲ್ಲೂಕಿನ ಇಸಬ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮುತ್ತಣ್ಣ ಇಂಗಳಗಿ (25) ಎಂಬವರ ಮೃತದೇಹ ಪತ್ತೆಯಾಗಿದೆ. ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Bengaluru Gangrape: 16 ವರ್ಷದ ಬಾಲಕಿ ಮೇಲೆ 8 ಜನರಿಂದ ನಿರಂತರ ಲೈಂಗಿಕ ದೌರ್ಜನ್ಯ; 7 ಆರೋಪಿಗಳು ಅರೆಸ್ಟ್

ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ 15 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ದಾರುಣ ಸಾವು

Published On - 12:58 pm, Sat, 9 April 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ