AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಹ್ಯಾಕಾಶದಲ್ಲಿ ಏನೇನು ಸಂಕಷ್ಟ ಎದುರಾಗಿತ್ತು? ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಜತೆ ಮನದಾಳ ತೆರೆದಿಟ್ಟ ಗಗನಯಾನಿ ಶುಭಾಂಶು ಶುಕ್ಲಾ

ಕೈ ಈಗಿರುವುದಕ್ಕಿಂತ ಎಂಟು ಪಟ್ಟು ಭಾರವಾಯಿತು, ಕೆಲ ಗಂಟೆಗಳ ಕಾಲ ದೇಹದ ಎತ್ತರವೇ ತುಸು ಹೆಚ್ಚಾಯಿತು! ಒಬ್ಬ ಮನುಷ್ಯನಿಗೆ ಹೀಗೆಲ್ಲ ಆಗುತ್ತದಾ!? ಇಂಥದ್ದೊಂದು ಪ್ರಶ್ನೆ ನಿಮ್ಮಲ್ಲಿ ಮೂಡಿದರೆ ಅಚ್ಚರಿಯಿಲ್ಲ. ಆದರೆ, ಬಾಹ್ಯಾಕಾಶ ನಿಲ್ದಾಣದಲ್ಲಿ ಇವೆಲ್ಲವೂ ಸಾಧ್ಯ. ಖುದ್ದು ಅಲ್ಲಿಗೆ ಹೋಗಿ ಬಂದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೇ ಹೇಳಿದ ಮಾತಿದು! ಹಾಗಾದರೆ ಅವರು ಹೇಳಿದ್ದೇನು? ವಿವರಗಳಿಗೆ ಮುಂದೆ ಓದಿ.

ಬಾಹ್ಯಾಕಾಶದಲ್ಲಿ ಏನೇನು ಸಂಕಷ್ಟ ಎದುರಾಗಿತ್ತು? ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಜತೆ ಮನದಾಳ ತೆರೆದಿಟ್ಟ ಗಗನಯಾನಿ ಶುಭಾಂಶು ಶುಕ್ಲಾ
ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಜತೆ ಮನದಾಳ ತೆರೆದಿಟ್ಟ ಗಗನಯಾನಿ ಶುಭಾಂಶು ಶುಕ್ಲಾ
ವಿನಯ್​ ಕಾಶಪ್ಪನವರ್​
| Edited By: |

Updated on:Nov 25, 2025 | 3:17 PM

Share

ಬೆಂಗಳೂರು, ನವೆಂಬರ್ 25: ಬೆಂಗಳೂರಿನ ನೆಹರು ತಾರಾಲಯದಲ್ಲಿ ಗಗನಯಾನಿ ಶುಭಾಂಶು ಶುಕ್ಲಾ (Shubhanshu Shukla) ಜೊತೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ನಡೆಯಿತು. ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕೂಡ ಹಾಜರಿದ್ದರು. ಮಕ್ಕಳ ಕುತೂಹಲ ಭರಿತ ಪ್ರಶ್ನೆಗಳಿಗೆ ಉತ್ತರಿಸಿದ ಶುಕ್ಲಾ, ಬಾಹ್ಯಾಕಾಶದ ತಮ್ಮ ಅನುಭವವನ್ನು ಹಂಚಿಕೊಂಡರು.

ಮಕ್ಕಳಿಗೆ ತಮ್ಮ ಗಗನಯಾನದ ಅನುಭವವನ್ನು ವಿವರಿಸಿದ ಶುಕ್ಲಾ

ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಶುಭಾಂಶು ಶುಕ್ಲಾ, ಗಗನಯಾತ್ರೆಯ ವೇಳೆ ಅನುಭವಿಸಿದ ಮಾನಸಿಕ ಮತ್ತು ದೈಹಿಕ ಸವಾಲುಗಳನ್ನು ಹಂಚಿಕೊಂಡರು. ಪರೀಕ್ಷೆಗೆ ಪೂರ್ಣ ಸಿದ್ಧತೆ ಮಾಡಿಕೊಂಡಿದ್ದರೂ, ಪ್ರಶ್ನೆಪತ್ರಿಕೆ ನೋಡಿದಾಗ ಹೇಗೆ ಕ್ಷಣ ಮಾತ್ರದಲ್ಲಿ ಎಲ್ಲವೂ ಮರೆತುಹೋಗುತ್ತದೋ,  ರಾಕೆಟ್ ಲಾಂಚ್ ವೇಳೆಯಲ್ಲಿ ನನಗೂ ಹಾಗೆ ಆಗಿತ್ತು ಎಂದು ವಿನೋದದಿಂದ ಹೇಳಿಕೊಂಡರು.

ತಮ್ಮ ಗಗನಯಾನದ ಅನುಭವವನ್ನು ವಿವರಿಸಿದ ಶುಕ್ಲಾ, ಫೈಟರ್ ಪೈಲಟ್ ಆಗಿರುವುದರಿಂದ ಎಲ್ಲವನ್ನೂ ನಿಭಾಯಿಸಬಹುದು ಎಂಬ ಆತ್ಮವಿಶ್ವಾಸವಿದ್ದರೂ, ಬಾಹ್ಯಾಕಾಶದಲ್ಲಿನ ಅನುಭವ ಸಂಪೂರ್ಣ ವಿಭಿನ್ನವಾಗಿತ್ತು . ಸ್ಪೇಸ್ ಸ್ಟೇಷನ್‌ಗೆ ಹೋದಾಗ ನನ್ನ ಕೈ ಈಗಿರುವುದಕ್ಕಿಂತ ಎಂಟು ಪಟ್ಟು ಭಾರವಾಗಿದೆ ಎನ್ನಿಸುತ್ತಿತ್ತು. ಗಾಳಿಯಲ್ಲಿ ತೇಲುವ ಪರಿಸ್ಥಿತಿ, ಗೋಡೆಗಳ ಮೇಲೆ ಚಲಿಸುವ ಅನುಭವಕ್ಕೆ ಹೊಂದಿಕೊಳ್ಳಲು ನನಗೆ ಏಳು–ಎಂಟು ದಿನಗಳು ಹಿಡಿದವು ಎಂದರು.

ಬಾಹ್ಯಾಕಾಶದ ಸ್ಥಿತಿಗತಿಗಳಿಗೆ ಹೇಗಿತ್ತು?

ಬಾಹ್ಯಾಕಾಶದಲ್ಲಿನ ಸ್ಥಿತಿಗತಿಗಳ ಬಗ್ಗೆ ಮಕ್ಕಳಿಗೆ ಮನದಟ್ಟಾಗುವಂತೆ ಹೇಳುತ್ತಾ, ಸ್ಪೇಸ್​ನಲ್ಲಿರುವ ತೂಕವಿಲ್ಲದ ಸ್ಥಿತಿಯಿಂದಾಗಿ ಗಗನಯಾತ್ರಿಗಳು ಭಾರವಾದ ವಸ್ತುಗಳನ್ನೂ ಸುಲಭವಾಗಿ ಎತ್ತಬಹುದು. 5 ಕೆಜಿ ತೂಕವೂ ಅಲ್ಲಿ ತೀರಾ ಕಡಿಮೆ ಎನಿಸುತ್ತಿತ್ತು. ಬಾಹ್ಯಾಕಾಶದಲ್ಲಿದ್ದಾಗ ಹಸಿವು ಎನ್ನುವುದೇ ತಿಳಿಯದ ಮಟ್ಟಿಗೆ ದೇಹ ಹೊಂದಿಕೊಂಡಿತ್ತು. ಭೂಮಿಗೆ ಮರಳಿ ಬಂದ ತಕ್ಷಣ ನನ್ನ ಹೃದಯ ಬಡಿತ ಹೆಚ್ಚಾಗಿತ್ತು. ಬೆನ್ನುನೋವಿನ ಸಮಸ್ಯೆಯೂ ಉಂಟಾಗಿತ್ತು. ಕೆಲ ಗಂಟೆಗಳ ಕಾಲ ನನ್ನ ಎತ್ತರವೂ ಸ್ವಲ್ಪ ಹೆಚ್ಚಾಗಿತ್ತು. ಆದರೆ ದಿನಗಳು ಕಳೆದಂತೆ ನಾನು ಸಹಜ ಸ್ಥಿತಿಗೆ ಮರಳಿದೆ ಎಂದು ವಿದ್ಯಾರ್ಥಿಗಳಿಗೆ ವಿವರಿಸಿದರು.

ಇದನ್ನೂ ಓದಿ ‘ಶುಭಾಂಶು ಶುಕ್ಲಾ ನೂರು ಕೋಟಿ ಕನಸುಗಳಿಗೆ ಸ್ಫೂರ್ತಿ’; ಆಕ್ಸಿಯಮ್ ಮಿಷನ್ ಯಶಸ್ಸಿಗೆ ಪ್ರಧಾನಿ ಮೋದಿ ಶ್ಲಾಘನೆ

ಕಾರ್ಯಕ್ರಮದ ಅಂತ್ಯದಲ್ಲಿ, ಶುಭಾಂಶು ಶುಕ್ಲಾ ಸ್ಪೇಸ್‌ನಿಂದ ಬೆಂಗಳೂರನ್ನು ಸೆರೆ ಹಿಡಿದಿರುವ ವಿಶೇಷ ವಿಡಿಯೋವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಶುಭಾಂಶು, ವಿದ್ಯಾರ್ಥಿಗಳೊಂದಿಗಿನ ಈ ಸಂವಾದದಲ್ಲಿ ಬಾಹ್ಯಾಕಾಶ ಕುರಿತು ಮಕ್ಕಳಿಗಿದ್ದ ಕುತೂಹಲವನ್ನು ಇಂಗಿಸಿದರು. ಅವರ ಜೊತೆಗಿನ ಈ ಮಾತುಕತೆ ಮಕ್ಕಳಲ್ಲಿ ಬಾಹ್ಯಾಕಾಶದ ಒಲವನ್ನು ಇನ್ನಷ್ಟು ಹೆಚ್ಚಿಸಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:16 pm, Tue, 25 November 25

Follow Us
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್