ಬೆಂಗಳೂರು: ಕಳೆದ 10 ವರ್ಷಗಳಲ್ಲೇ 2023ರಲ್ಲಿ ಅತಿಹೆಚ್ಚು ಮಾರಣಾಂತಿಕ ಅಪಘಾತ, ವರದಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಬೇಸರದ ಸಂಗತಿಯಾಗಿದೆ. ಈ ರಸ್ತೆ ಅಪಘಾತಗಳಲ್ಲಿ ಅನೇಕರು ಮೃತಪಟ್ಟಿದ್ದರೇ, ಇನ್ನೂ ಅನೇಕು ಗಾಯಾಳುಗಳಾಗಿದ್ದಾರೆ. ಹಾಗಾದರೆ ಕಳೆದ 10 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಎಷ್ಟು ಅಪಘಾತ ಸಂಭವಿಸಿವೆ ಇಲ್ಲಿದೆ ಅಂಕಿ ಅಂಶ.

ಬೆಂಗಳೂರು: ಕಳೆದ 10 ವರ್ಷಗಳಲ್ಲೇ 2023ರಲ್ಲಿ ಅತಿಹೆಚ್ಚು ಮಾರಣಾಂತಿಕ ಅಪಘಾತ, ವರದಿ
ಪ್ರಾತಿನಿಧಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Jan 03, 2024 | 7:43 AM

ಬೆಂಗಳೂರು, ಜನವರಿ 03: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಳೆದ ವರ್ಷ ಅಂದರೆ 2023ರಲ್ಲಿ 870 ಮಾರಣಾಂತಿಕ ಅಪಘಾತಗಳು (Accident) ಸಂಭವಿಸಿವೆ. ಇದು ಕಳೆದ 10 ವರ್ಷಗಳಲ್ಲಿ ಸಂಭವಿಸಿದ ಗರಿಷ್ಠ ಅಪಘಾತಗಳ ಸಂಖ್ಯೆಗಿಂತ ಹೆಚ್ಚಾಗಿದೆ ಎಂದು ಸಂಚಾರ ಪೊಲೀಸ್ ಇಲಾಖೆ ಮಂಗಳವಾರ ಹಂಚಿಕೊಂಡ ಅಂಕಿಅಂಶ ತಿಳಿಸಿದೆ. 2013 ರಲ್ಲಿ 733 ಅಪಘಾತಗಳು ಸಂಭವಿಸಿದ್ದವು.

2023ರಲ್ಲಿ 4,959 ಅಪಘಾತಗಳು ಸಂಭವಿಸಿದ್ದು, 899 ಜನರು ಮೃತಪಟ್ಟಿದ್ದಾರೆ. 4,959 ಅಪಘಾತಗಳಲ್ಲಿ, 4,089 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ 4,176 ಜನರು ಗಾಯಗೊಂಡಿದ್ದಾರೆ. ಬೆಂಗಳೂರು ಟ್ರಾಫಿಕ್ ಪೊಲೀಸರ ಪ್ರಕಾರ, ಅಪಘಾತಕ್ಕೀಡಾದ ಶೇಕಡಾ 70 ರಷ್ಟು ವಾಹನಗಳು ದ್ವಿಚಕ್ರ ವಾಹನಗಳಾಗಿವೆ. ಕಳೆದ 10 ವರ್ಷಗಳಲ್ಲಿ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಶೇ 58 ರಷ್ಟು ಹೆಚ್ಚಳವಾಗಿದೆ. 2013ರಲ್ಲಿ 49 ಲಕ್ಷ ಇದ್ದ ವಾಹನಗಳ ಸಂಖ್ಯೆ, 2023ರಲ್ಲಿ 1.2 ಕೋಟಿಗೆ ಏರಿಕೆಯಾಗಿದೆ.

ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ಕೂಡ ಏರಿಕೆಯಾಗಿದೆ. 2018 ರಲ್ಲಿ 663 ಜನ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದರು. 2019 ರಲ್ಲಿ 746, 2020 ರಲ್ಲಿ 621, 2021 ರಲ್ಲಿ 621, 2022 ರಲ್ಲಿ 752 ಮತ್ತು 2023 ರಲ್ಲಿ 870 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 2023ರಲ್ಲಿ 89 ಲಕ್ಷಕ್ಕೂ ಹೆಚ್ಚು ಸಂಚಾರ ನಿಯಮ ಉಲ್ಲಂಘನೆ: 184.83 ಕೋಟಿ ರೂ. ದಂಡ ವಸೂಲಿ

ಚಾಲಕರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತಗಳಲ್ಲಿ ಹೆಚ್ಚು ಸಾವುನೋವುಗಳಾಗಿವೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

2014 ರಿಂದ 2023ರ ವರೆಗೆ ಸಂಭವಿಸಿದ ಅಪಘಾತಗಳು
ವರ್ಷ ಒಟ್ಟು ಅಪಘಾತಗಳು ಮಾರಣಾಂತಿಕ ಸಾವು ಮಾರಣಾಂತಿಕವಲ್ಲದ ಗಾಯಾಳುಗಳು
1 2014 5004 711 737 4293 4096
2 2015 4828 714 740 4114 4047
3 2016 5333 754 793 4579 4193
4 2017 5064 609 642 4455 4256
5 2018 4611 663 686 3948 4129
6 2019 4684 746 768 3938 4250
7 2020 3233 621 646 2612 2751
8 2021 3213 621 654 2592 2820
9 2022 3822 752 772 3070 3189
10 2023 4959 870 899 4089 4176

ಸಂಚಾರಿ ಪೊಲೀಸ್ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ಮಾತನಾಡಿ, 2020, 2021 ಮತ್ತು 2022 ಲಾಕ್​ಡೌನ್​ ಸಮಯವನ್ನು ಹೊರತುಪಡಿಸಿ, ವಾಹನಗಳ ಸಂಖ್ಯೆಯನ್ನು ಪರಿಗಣಿಸಿದಾಗ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. 2024 ರಲ್ಲಿ ಬೆಂಗಳೂರಿನಲ್ಲಿ ಸಾವಿನ ಪ್ರಮಾಣವನ್ನು ಶೇಕಡಾ 25 ರಷ್ಟು ಕಡಿಮೆ ಮಾಡುವುದು ಇಲಾಖೆಯ ಗುರಿಯಾಗಿದೆ ಎಂದು ಹೇಳಿದರು.

ದ್ವಿಚಕ್ರ ವಾಹನಗಳು ಹೆಚ್ಚು ಅಪಘಾತಕ್ಕೆ ಇಡಾಗುತ್ತವೆ. ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್‌ ಬಳಸದಿರುವುದು, ಉತ್ತಮವಾದ ಹೆಲ್ಮೆಟ್‌ ಬಳಕೆ ಮಾಡದಿರುವುದು ಮತ್ತು ಅರ್ಧ ಹೆಲ್ಮೆಟ್‌ಗಳ ಬಳಕೆಯಂತಹ ಅಂಶಗಳು ಸಾವಿಗೆ ಕಾರಣವಾಗುತ್ತವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:32 am, Wed, 3 January 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್