AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ನಿರ್ವಾಹಕ, ಚಾಲಕನ ಮೇಲೆ ಹಲ್ಲೆ, ಎಫ್ಐಆರ್ ದಾಖಲು

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ನಿರ್ವಾಹಕ ಮತ್ತು ಚಾಲಕನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಟ್ಯಾನರಿ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರು ವ್ಯಕ್ತಿಗಳು ನಿರ್ವಾಹಕ ಶಿವಕುಮಾರ್ ಮತ್ತು ಚಾಲಕ ಗಗನ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆ ಸಂಬಂಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ನೌಕರರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ.

ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ನಿರ್ವಾಹಕ, ಚಾಲಕನ ಮೇಲೆ ಹಲ್ಲೆ, ಎಫ್ಐಆರ್ ದಾಖಲು
ಚಾಲಕ ಗಗನ್​ ಮೇಲೆ ಹಲ್ಲೆ
Kiran Surya
| Edited By: |

Updated on:Oct 27, 2024 | 9:18 AM

Share

ಬೆಂಗಳೂರು, ಅಕ್ಟೋಬರ್​ 27: ಕ್ಷುಲ್ಲಕ ಕಾರಣಕ್ಕೆ ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್​​ ನಿರ್ವಾಹಕ ಮತ್ತು ಚಾಲಕನ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ನಗರದ ಟ್ಯಾನರಿ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ. ಕಿಡಿಗೇಡಿಗಳು ಕುಡಿದ ಮತ್ತಿನಲ್ಲಿ ನಿರ್ವಾಹಕ ಶಿವಕುಮಾರ್ ಮತ್ತು ಚಾಲಕ ಗಗನ್​ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಸಂಬಂಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಶನಿವಾರ (ಅ.26) ರಂದು ಸಂಜೆ 3:40ರ ಸುಮಾರಿಗೆ ಬಿಎಂಟಿಸಿ 290E ಎಲೆಕ್ಟ್ರಿಕ್ ಬಸ್ ಯಲಹಂಕದಿಂದ ಶಿವಾಜಿನಗರಕ್ಕೆ ಹೊರಟಿತ್ತು. ಸಂಜೆ 5.25ಕ್ಕೆ ಟ್ಯಾನರಿ ರಸ್ತೆಯಲ್ಲಿ ಕೆನರಾ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಿದೆ. ಈ ವೇಳೆ ಸ್ಕೂಟಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಾಹನದ ಮುಂಭಾಗಲಿನಿಂದ ಒಳ ಬಂದು ಕರ್ತವ್ಯದಲ್ಲಿದ್ದ ಚಾಲಕ ಗಗನ್​ ಅವರಿಗೆ ಏಕಾಏಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈ ತಿರುವಿ, ಮುಖಕ್ಕೆ ಗುದ್ದಿದ್ದಾರೆ. ಈ ವೇಳೆ ನಿರ್ವಾಹಕ ಶಿವಕುಮಾರ ತಡೆಯಲು ಹೋದಾಗ, ಅವರನ್ನು ಹೊರಗಡೆ ಎಳೆದು ಬಸ್ಸಿನ ಮುಂಭಾಗದಲ್ಲಿ ನಿಲ್ಲಿಸಿ ಥಳಿಸಿ ಮುಖ, ಕತ್ತು ಮತ್ತು ಸೊಂಟದ ಭಾಗಕ್ಕೆ ಗುದ್ದಿ ಹಲ್ಲೆ ಮಾಡಿದ್ದಾರೆ.

ಕರ್ತವ್ಯ ನಿರ್ವಹಿಸುತ್ತಿರುವಾಗ ಬಂದು ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದು ಹತ್ಯೆ ಮಾಡಿರುವ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಚಾಲಕ ಗಗನ್​​ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಕಂಡಕ್ಟರ್, ಡ್ರೈವರ್​ಗಳ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಬಿಎಂಟಿಸಿ ಎಂಡಿಗೆ ಪತ್ರ

ಇತ್ತೀಚಿಗೆ ನಗರದಲ್ಲಿ ದಿನದಿಂದ ದಿನಕ್ಕೆ ಬಿಎಂಟಿಸಿ ನೌಕರರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ತಿಂಗಳ ಆರಂಭದಲ್ಲಿ ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್​​ಗೆ ಚಾಕುವಿನಿಂದ ಇರಿದ ಘಟನೆ ಭಾರೀ ಸಂಚಲನ ಸೃಷ್ಟಿಸಿತ್ತು.

ಈ ಪ್ರಕರಣ ಬೆನ್ನಲ್ಲೇ ಪ್ರಯಾಣಿಕನೊಬ್ಬ ಕಲ್ಲಿನಿಂದ ಕಂಡಕ್ಟರ್ ತಲೆಯನ್ನು ಜಜ್ಜಲು ಬಂದಿದ್ದನು. ಕಂಡಕ್ಟರ್ ತಲೆಗೆ ಕಲ್ಲು ಬೀಸಿ ಎಸ್ಕೇಪ್ ಆಗಲು ಯತ್ನಿಸಿದ್ದ ಘಟನೆ ಟಿನ್ ಫ್ಯಾಕ್ಟರಿ ಬಳಿ ನಡೆದಿತ್ತು. KA-14F1107 ನಂಬರಿನ ಬಿಎಂಟಿಸಿ ಬಸ್​ನಲ್ಲಿ ಈ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಸ್ ಕಂಡಕ್ಟರ್​ಗಳ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಸೃಷ್ಟಿಯಾಗಿದೆ. ಕಳೆದ ಎರಡು ತಿಂಗಳಲ್ಲಿ ಬೆಂಗಳೂರಿನ ಬಸ್ ಕಂಡಕ್ಟರ್​ ಮೇಲೆ ಹಲ್ಲೆ ನಡೆದಿರುವ ನಾಲ್ಕು ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Sun, 27 October 24

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ