ಬೆಂಗಳೂರು: ಆಪ್​ ರಾಜ್ಯ ​ಯುವ ಘಟಕದ ಉಪಾಧ್ಯಕ್ಷರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆಗೆ ಯತ್ನ

ಆಮ್​ ಆದ್ಮಿ ಪಾರ್ಟಿ ರಾಜ್ಯ ​ಯುವ ಘಟಕದ ಉಪಾಧ್ಯಕ್ಷ ಗಿರೀಶ್ ಕುಮಾರ್ ನಾಯ್ಡು ಅವರ ಮೇಲೆ ಗಾಜಿನ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಲು ಯತ್ನಿಸಿರುವ ಘಟನೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ಜಕ್ಕೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ಆಪ್​ ರಾಜ್ಯ ​ಯುವ ಘಟಕದ ಉಪಾಧ್ಯಕ್ಷರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆಗೆ ಯತ್ನ
ಸಾಂಧರ್ಬಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Mar 19, 2023 | 10:10 AM

ಬೆಂಗಳೂರು: ಆಮ್​ ಆದ್ಮಿ ಪಾರ್ಟಿ (AAP) ರಾಜ್ಯ ​ಯುವ ಘಟಕದ ಉಪಾಧ್ಯಕ್ಷ (AAP state youth unit vice president) ಗಿರೀಶ್ ಕುಮಾರ್ ನಾಯ್ಡು ಅವರ ಮೇಲೆ ಗಾಜಿನ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಲು ಯತ್ನಿಸಿರುವ ಘಟನೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ಜಕ್ಕೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಿರೀಶ್ ಕುಮಾರ್ ನಾಯ್ಡು, ಯಲಹಂಕದಿಂದ ಕೆ.ಆರ್​.ಪುರಂ ಆಸ್ಪತ್ರೆಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ 2 ಡಿಯೋ ಬೈಕ್​ನಲ್ಲಿ ಬಂದ ನಾಲ್ವರು ಯುವಕರು, ಕಾರಿಗೆ ಓವರ್ ಟೇಕ್ ಮಾಡಿ ಕಾರನ್ನು ಅಡ್ಡಗಟ್ಟಿದ್ದಾರೆ. ನಂತರ ಬಿಯರ್ ಬಾಟಲ್ ಒಡೆದು, ಬಾಟಲ್ ಗಾಜಿನಿಂದ ಗಿರೀಶ್​ ಮತ್ತು ಜೊತೆಯಲ್ಲಿದ್ದವರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ.

ಸದ್ಯ ಗಿರೀಶ್​ ಕುಮಾರ್​ ನಾಯ್ಡು ಪೊಲೀಸ್ ಆಯುಕ್ತರಿಗೆ ಹಾಗೂ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಅಮೃತಹಳ್ಳಿ ಪೊಲೀಸ್ ಠಾಣೆ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ಪೊಲೀಸರು ಆರೋಪಿಗಳಿಗಾಗಿ ತಲಾಶ್ ನಡೆಸಿದ್ದಾರೆ.

ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲಿ ಫುಲ್ ಅಲರ್ಟ್ ಆದ ಪೊಲೀಸರು; ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಅಕ್ಕಿ ಚೀಲ, ಮದ್ಯ ವಶ

ಗಿರೀಶ್​ ಕುಮಾರ್​ ನಾಯ್ಡು ಈ ಹಿಂದೆ ಓರ್ವ ಬಿಲ್ಡರ್ ಸೇರಿ ಬಿಬಿಎಂಪಿ, ಬಿಡಿಎ, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಮತ್ತು ರಾಜಕಾರಣಿಗಳ ವಿರುದ್ಧ 430 ಕ್ಕೂ ಹೆಚ್ಚು ದೂರು ನೀಡಿದ್ದರು. ಈ ಹಿನ್ನೆಲೆ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಕರೆಗಳು ಬರುತ್ತಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Sun, 19 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ