Bengaluru News: ರ‍್ಯಾಪಿಡೋ ಬೈಕ್ಗೆ ಕಾಯುತ್ತಿದ್ದ ಟೆಕ್ಕಿ ಮೇಲೆ ಆಟೋ ಹತ್ತಿಸಲು ಯತ್ನ; ಆಟೋ ಚಾಲಕನ ಗುಂಡಾವರ್ತನೆ ಸಿಸಿಟಿವಿಯಲ್ಲಿ ಸೆರೆ
ರ‍್ಯಾಪಿಡೋ ಬೈಕ್ಗೆ ಕಾಯುತ್ತಿದ್ದ ಟೆಕ್ಕಿ ಮೇಲೆ ಆಟೋ ಚಾಲಕ(Auto Driver)ನೊಬ್ಬ ಆಟೋ ಹರಿಸಲು ಯತ್ನಿಸಿರುವ ಘಟನೆ ನಗರದ ಹೆಚ್ಎಸ್ಆರ್ ಲೇಔಟ್ ಸೆಕ್ಟರ್ 1ರಲ್ಲಿ ನಡೆದಿದೆ.
ಬೆಂಗಳೂರು: ನಗರದಲ್ಲಿ ಆಟೋ ಚಾಲಕರಿಂದ ರ‍್ಯಾಪಿಡೋ ಬೈಕ್(Rapido Bike) ಸವಾರರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಹೀಗೆ ನಗರದಲ್ಲಿ ಬೈಕ್ ಟ್ಯಾಕ್ಸಿ ರೈಡರ್ಗಳ ಮೇಲೆ ಆಟೋ ಚಾಲಕರು ಪದೇ ಪದೇ ಕಿರುಕುಳ ನೀಡುತ್ತಿರುವುದು ವರದಿಯಾಗುತ್ತಿದ್ದ ಹಿನ್ನಲೆ ಕಳೆದ ಮಾರ್ಚ್ನಲ್ಲಿ ಪ್ರತಿಭಟನೆ ಕೂಡ ಮಾಡಿದ್ದರು. ಇದೀಗ ಅದರ ಬೆನ್ನಲ್ಲೇ ರ‍್ಯಾಪಿಡೋ ಬೈಕ್ಗೆ ಕಾಯುತ್ತಿದ್ದ ಟೆಕ್ಕಿ ಮೇಲೆ ಆಟೋ ಚಾಲಕ(Auto Driver)ನೊಬ್ಬ ಆಟೋ ಹರಿಸಲು ಯತ್ನಿಸಿರುವ ಘಟನೆ ನಗರದ ಹೆಚ್ಎಸ್ಆರ್ ಲೇಔಟ್ ಸೆಕ್ಟರ್ 1ರಲ್ಲಿ ನಡೆದಿದೆ. ಇಂದು(ಮೇ.25) ಬೆಳಗಿನ ಜಾವ 3.30ರ ಸುಮಾರಿಗೆ ರ‍್ಯಾಪಿಡೋ ಬೈಕ್ ಬುಕ್ ಮಾಡಿ ಟೆಕ್ಕಿಯೊಬ್ಬರು ಕಾಯುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ನಿಂತಿದ್ದ ಒಂದು ಆಟೋ, ನೋಡ ನೋಡುತ್ತಿದ್ದಂತೆ ಟೆಕ್ಕಿ ಮೇಲೆ ಆಟೋ ನುಗ್ಗಿಸಿದ್ದಾನೆ. ಆಟೋ ಡಿಕ್ಕಿ ರಭಸಕ್ಕೆ ಟೆಕ್ಕಿ ರಸ್ತೆ ಬದಿಗೆ ಬಿದ್ದಿದ್ದಾನೆ. ಆಟೋ ಚಾಲಕನ ಈ ಗುಂಡಾವರ್ತನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಹೆಚ್ಎಸ್ಆರ್ ಲೇಔಟ್ ಪೊಲೀಸರಿಗೆ ದೂರು ನೀಡಲಾಗಿದೆ.
ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಚಾಲಕನಿಗೆ ಕಿರುಕುಳ, ಫೋನ್ ಕಸಿದು ನೆಲಕ್ಕೆ ಎಸೆದ ಆಟೋ ಚಾಲಕ
ಬೆಂಗಳೂರು: ಇನ್ನು ಮಾರ್ಚ್ ತಿಂಗಳಿನಲ್ಲಿ ಆಟೋ ಚಾಲಕನೊಬ್ಬ ರ‍್ಯಾಪಿಡೋ ಬೈಕ್ ಚಾಲಕನಿಗೆ ಕಿರುಕುಳ ನೀಡಿದ ಘಟನೆ ನಡೆದಿತ್ತು. ಈ ಘಟನೆಯ ವಿಡಿಯೋ ವೈರಲ್ ಆಗಿ, ಅದರಲ್ಲಿ ಆಟೋ ಚಾಲಕ, ರ‍್ಯಾಪಿಡೋ ಬೈಕ್ ಚಾಲಕನನ್ನು ನಿಲ್ಲಿಸಿ ಬೈದಿದ್ದ. ಅಲ್ಲದೇ ಕೋಪದಲ್ಲಿ ಫೋನ್ ಕಸಿದುಕೊಂಡು ನೆಲಕ್ಕೆ ಎಸೆದಿದ್ದ. ಈ ಘಟನೆ ಇಂದಿರಾನಗರ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ ಎನ್ನಲಾಗಿದ್ದು, ವಿಡಿಯೋ ವೈರಲ್ ಆಗಿತ್ತು. ಬಳಿಕ ಆಟೋ ಚಾಲಕನ ಕೃತ್ಯಕ್ಕೆ ಖಂಡನೆ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಬೆಂಗಳೂರು ಪೊಲೀಸ್ ಗಮನಕ್ಕೆ ಬಂದಿದ್ದು, ಆಟೋ ಚಾಲಕನ ವಿರುದ್ಧ ಸೂಕ್ತ ಕ್ರಮಕೈಗೊಳ್ಳುಂತೆ ಇಂದಿರಾನಗರ ಪೊಲೀಸರಿಗೆ ಸೂಚಿಸಿದ್ದರು.
ಇದನ್ನೂ ಓದಿ:ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಿಸುವಂತೆ ಪಟ್ಟು: ಸ್ಥಳದಲ್ಲೇ ವಿಷ ಕುಡಿದ ಪ್ರತಿಭಟನಾ ನಿರತ ಆಟೋ ಚಾಲಕ
ವಿಡಿಯೋನಲ್ಲಿ ಆಟೋ ಚಾಲಕ ಹೇಳಿದ್ದೇನು?
ಸ್ನೇಹಿತರೇ, ಅಕ್ರಮ ರ‍್ಯಾಪಿಡೋ ದಂಧೆ ಹೇಗೆ ನಡೆಯುತ್ತಿದೆ ಎಂಬುದನ್ನು ನೋಡಿ. ಈ ಸಹೋದ್ಯೋಗಿ ಬೇರೆ ದೇಶದಿಂದ ಬಂದು ರಾಜನಂತೆ ಓಡಿಸುತ್ತಾನೆ. ಆಟೋ ಇಲಾಖೆ ಎಷ್ಟು ಹಾಳಾಗಿದೆ ಎಂದು ನೀವು ಅರ್ಥಮಾಡಿಕೊಳ್ಳಬೇಕು. ಇಲಾಖೆಯು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ, ಬೇರೆ ದೇಶದಿಂದ ಬಂದವನು, ವೈಟ್ ಬೋರ್ಡ್ ಹೊಂದಿದ್ದರೂ ಹುಡುಗಿಯನ್ನು ಕರೆದುಕೊಂಡು ಹೋಗಲು ಬಂದಿದ್ದಾನೆ’ ಎಂದು ಆಟೋ ಚಾಲಕ ರಾಪಿಡೋ ಬೈಕ್ ಚಾಲಕನ ಮೇಲೆ ಕೈ ಮಾಡಲು ಮುಂದಾಗುತ್ತಾನೆ. ಇನ್ನು ಈ ಬಗ್ಗೆ ಬೈಕ್ ಸವಾರರು ಇನ್ನೂ ಯಾವುದೇ ದೂರು ದಾಖಲಿಸಿಲ್ಲವಾದರೂ, ವೈರಲ್ ವಿಡಿಯೋ ಆಧರಿಸಿ ಪೊಲೀಸರು ಘಟನೆಯ ಕುರಿತು ಪೊಲೀಸರು ತನಿಖೆ ನಡೆಸಿದ್ದರು. ಈಬ ಕುರಿತು ಕಟ್ಟುನಿಟ್ಟಿನ ಮತ್ತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದರು.
ಬೆಂಗಳೂರಿನಂತಹ ಮಹಾನಗರಗಳಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ಬುಕ್ಕಿಂಗ್ ಮಾಡಿ ತಲುಪಬೇಕಾದ ಸ್ಥಳಕ್ಕೆ ಸುಲಭವಾಗಿ ಹೋಗಬಹುದು. ಇದಕ್ಕಾಗಿ ರಾಪಿಡೋ ಬೈಕ್ ಸೇವೆಯನ್ನು ಒದಗಿಸುತ್ತಿದೆ. ರಾಪಿಡೋ ಬೈಕ್ ಬುಕ್ ಮಾಡುವ ಮೂಲಕ ಏಕಾಂಗಿಯಾಗಿರುವವರು ತಾವು ತಲುಪಬೇಕಾದ ಸ್ಥಳಕ್ಕೆ ತಲುಪಬಹುದು. ಆದ್ರೆ, ಇದಕ್ಕೆ ಆಟೋ ಚಾಲಕರು ವಿರೋಧಿಸುತ್ತಿದ್ದಾರೆ. ರ‍್ಯಾಪಿಡೋ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಹೆಸರಿನಲ್ಲಿ ವೈಟ್ ಬೋರ್ಡ್ ಬೈಕ್‌ಗಳಲ್ಲಿ ಅತಿ ಕಡಿಮೆ ದರಕ್ಕೆ ಸೇವೆ ನೀಡಲಾಗುತ್ತಿದೆ. ಕಾನೂನಿನಲ್ಲಿ ಇದ್ದಕ್ಕೆ ಅವಕಾಶವಿಲ್ಲ. ಆಟೋ ಚಾಲಕರು ಸರ್ಕಾರಕ್ಕೆ ಟ್ಯಾಕ್ಸ್ ಪಾವತಿಸಿ ಎಲ್ಲೋ ಬೋರ್ಡ್ ಆಟೋಗಳಲ್ಲಿ ಸೇವೆ ನೀಡುತ್ತಿದ್ದೇವೆ. ತೆರಿಗೆ ಪಾವತಿಸುವ ನಾವು ಎಲ್ಲಿಗೆ ಹೋಗಬೇಕು? ಯಾವುದೇ ಕಾರಣಕ್ಕೂ ಈ ಕಾನೂನು ಬಾಹಿರ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಬಾರದು ಎಂದು ಆಟೋ ಚಾಲಕರ ಸಂಘದಿಂದ ಆಗ್ರಹಿಸಿತ್ತು.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ