ಕೋಮುಗಲಭೆಗೆ ಯತ್ನ; ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್ನಿಂದ ದೂರು
ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ. ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್ನಲ್ಲಿ ಸಂದೇಶ ಒಂದು ಹರಿದಾಡುತ್ತಿದೆ ಎಂದು ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ವಿರುದ್ಧ ಸೈಬರ್ ಕ್ರೈಂಗೆ ಕಾಂಗ್ರೆಸ್ ದೂರು ನೀಡಿದೆ. ಹಾಘೂ ಈ ಬಗ್ಗೆ ಬಿಕೆ ಹರಿಪ್ರಸಾದ್ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, ಜ.07: ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗವು ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ವಿರುದ್ಧ ಸೈಬರ್ ಕ್ರೈಂಗೆ (Bengaluru Cyber Crime) ದೂರು ನೀಡಿದೆ. ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್ನಲ್ಲಿ ಸಂದೇಶ ರವಾನಿಸುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್, ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ದೂರು ದಾಖಲಿಸಿದೆ. ಹಾಗೂ ಕೂಡಲೆ ಕ್ರಮ ಆಗಬೇಕೆಂದು ಒತ್ತಾಯಿಸಿದೆ.
ಕಾಂಗ್ರೆಸ್ ದೂರಿನಲ್ಲೇನಿದೆ?
ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ. ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್ನಲ್ಲಿ ಸಂದೇಶ ಒಂದು ಹರಿದಾಡುತ್ತಿದೆ. ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸೋದಕ್ಕೆ ಬಿಜೆಪಿ ಬೆಂಬಲ ಕೊಟ್ಟಿದೆ. ಆದುದರಿಂದ ಎಲ್ಲಾ ಕಾರ್ಯಕರ್ತರು ರೆಡಿಯಾಗಿ ಇರಿ. ಎಲ್ಲಿ ಏನು ಮಾಡಬೇಕು ಅಂತ ಈ ಗ್ರೂಪಿನ ಮೂಲಕ ಮಾಹಿತಿ ಕೊಡುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ 2024ಕ್ಕೆ ಮತ್ತೊಮ್ಮೆ ಮೋದಿ ಎಂಬ ಸಂದೇಶ ಹಾಕಿ ಕೋಮುಗಲಭೆಗೆ ಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ. ಇನ್ನು ವಾಟ್ಸಾಪ್ ಗ್ರೂಪ್ನಲ್ಲಿ ಸಂದೇಶ ಹಾಕಿರುವ ನಂಬರ್ ಅನ್ನು ಟ್ರೂ ಕಾಲರ್ನಲ್ಲಿ ಚೆಕ್ ಮಾಡಿದಾಗ ಪುನೀತ್ ಕೆರೆಹಳ್ಳಿ ನಂಬರ್ ಎಂದ ತಿಳಿದು ಬಂದಿದೆ. ಜನಾಂಗೀಯ ದ್ವೇಷ ಹುಟ್ಟಿಸುವ ಈತನನ್ನ ಬಂಧಿಸಬೇಕು. ಅದ್ಯಾವ ಬಿಜೆಪಿ ಮುಖಂಡ ಈತನಿಗೆ ಸುಪಾರಿ ಕೊಟ್ಟಿದ್ದಾನೆಂದು ತನಿಖೆ ಆಗಬೇಕು. ಕೂಡಲೆ ಕ್ರಮ ಆಗಬೇಕೆಂದು ಕಾಂಗ್ರೆಸ್ ದೂರು ನೀಡಿದೆ.
ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶಗಳಿಗೆ 2.75 ಟಿಎಂಸಿ ನೀರು ಹರಿಸಲು ನಿರ್ಧಾರ: ಡಿಕೆ ಶಿವಕುಮಾರ್
ಇನ್ನು ಈ ಬಗ್ಗೆ ಬಿಕೆ ಹರಿಪ್ರಸಾದ್ ಟ್ವೀಟ್ ಮಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ.
ರೌಡಿ ಶೀಟರ್ ಆಗಿರುವ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ… pic.twitter.com/ULB5eGdZyn
— Hariprasad.B.K. (@HariprasadBK2) January 6, 2024
ಬಿ.ಕೆ.ಹರಿಪ್ರಸಾದ್ ಮನಬಂದಂತೆ ಮಾತನಾಡುತ್ತಿದ್ದಾರೆ
ಕೋಮು ಗಲಭೆ ಸೃಷ್ಟಿ ಕುರಿತು ಹರಿಪ್ರಸಾದ್ ಟ್ವೀಟ್ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಹರಿಪ್ರಸಾದ್ರನ್ನು ನೀವು ಬಹಳ ಗಂಭೀರವಾಗಿ ತೆಗೆದುಕೊಳ್ತಿಲ್ಲ. ಹೀಗಾಗಿ ಬಿ.ಕೆ.ಹರಿಪ್ರಸಾದ್ ಮನಬಂದಂತೆ ಮಾತನಾಡುತ್ತಿದ್ದಾರೆ. MLC ಬಿ.ಕೆ.ಹರಿಪ್ರಸಾದ್ ಹೇಳಿಕೆ ಅವರಿಗೆ ಅರ್ಥ ಆಗುವುದಿಲ್ಲ. ಅವರು ಪ್ರಚಾರ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಪ್ರಸಾದ್ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬಿ.ಕೆ.ಹರಿಪ್ರಸಾದ್ ರಾಮನ ಸೇವೆ ಮಾಡಿದರೆ ಮಂತ್ರಿಗಿರಿ ಸಿಗುತ್ತದೆ
ಕಾಂಗ್ರೆಸ್‌ನವರು ಒಟ್ಟಾರೆ ಹತಾಶರಾಗಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ನವರಿಗೆ ರಾಮ ಶಕ್ತಿ, ರಾಮ ಭಕ್ತಿ ತಡೆದುಕೊಳ್ಳಲು ಆಗುತ್ತಿಲ್ಲ. ದಿನೇದಿನೆ ಉತ್ಸಾಹದ ವಾತಾವರಣ ಎಲ್ಲೆಡೆ ಹಬ್ಬುತ್ತಿದೆ. ಕಾಂಗ್ರೆಸ್ ನಾಯಕರಿಗೆ ದೇಶದ ಹಿಂದೂಗಳ ಶಾಪ ತಟ್ಟುತ್ತದೆ. ಕಾಂಗ್ರೆಸ್‌ನವರು ಭಕ್ತಿ ಇಲ್ಲದಿದ್ದರೆ ಸುಮ್ಮನೆ ಇರಲಿ. ನಮ್ಮ ಭಕ್ತಿ ಹಾಗೂ ಭಾವನೆಗೆ ಧಕ್ಕೆಯಾಗುವಂತಹ ಹೇಳಿಕೆ ಬೇಡ. ಮಂತ್ರಿಗಿರಿ ಸಿಕ್ಕಿಲ್ಲವೆಂದು ಹರಿಪ್ರಸಾದ್ ಏನೇನೋ ಮಾತಾಡ್ತಿದ್ದಾರೆ. ಇದೇ ರೀತಿ ಮಾತನಾಡಿದರೆ ಶಾಶ್ವತವಾಗಿ ಮಂತ್ರಿಗಿರಿ ಸಿಗುವುದಿಲ್ಲ. ಬಿ.ಕೆ.ಹರಿಪ್ರಸಾದ್ ರಾಮನ ಸೇವೆ ಮಾಡಿದರೆ ಮಂತ್ರಿಗಿರಿ ಸಿಗುತ್ತದೆ ಎಂದಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ