ಗಮನಿಸಿ: ನವೆಂಬರ್ 5 ರಂದು ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ನಮ್ಮ‌ ಮೆಟ್ರೋ ಕೆಲಕಾಲ ಸ್ಥಗಿತ

ನಿರ್ವಹಣಾ ಕಾಮಗಾರಿ ಹಿನ್ನೆಲೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಇಂದಿರಾನಗರದವರೆಗೆ ನವೆಂಬರ್ 5 ರಂದು ಬೆಳಗ್ಗೆ 9 ಗಂಟೆವರೆಗೆ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಗಮನಿಸಿ: ನವೆಂಬರ್ 5 ರಂದು ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ನಮ್ಮ‌ ಮೆಟ್ರೋ ಕೆಲಕಾಲ ಸ್ಥಗಿತ
ನಮ್ಮ ಮೆಟ್ರೋ
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on:Nov 03, 2023 | 10:03 PM

ಬೆಂಗಳೂರು, ನವೆಂಬರ್​​​​ 03: ನಿರ್ವಹಣಾ ಕಾಮಗಾರಿ ಹಿನ್ನೆಲೆ ಸ್ವಾಮಿ ವಿವೇಕಾನಂದ ಮೆಟ್ರೋ (Metro) ನಿಲ್ದಾಣದಿಂದ ಇಂದಿರಾನಗರದವರೆಗೆ ನವೆಂಬರ್ 5 ರಂದು ಬೆಳಗ್ಗೆ 9 ಗಂಟೆವರೆಗೆ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಕಾಮಗಾರಿ ಪೂರ್ಣ ಬಳಿಕ ಮೆಟ್ರೋ ಸೇವೆ ಯಥಾಸ್ಥಿತಿ ಆರಂಭಗೊಳ್ಳುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನವೆಂಬರ್​ 5 ರಂದು ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು, ಸದರಿ ಕಾರ್ಯವನ್ನು ನಿರ್ವಹಿಸಲು ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7.00ಗಂಟೆಗೆ ಬದಲಾಗಿ 9.00 ಗಂಟೆಗೆ ಪ್ರಾರಂಭವಾಗಲಿದೆ.

ಇದನ್ನೂ ಓದಿ: Namma Metro: ನಮ್ಮ ಮೆಟ್ರೋಗೆ ಬಸವೇಶ್ವರ ಮೆಟ್ರೋ ಅಂತ ಹೆಸರಿಡಲು‌ ಸಿಎಂ ಬಳಿ‌ ಚರ್ಚಿಸಿ ತೀರ್ಮಾನ; ಎಂಬಿ ಪಾಟೀಲ್​​

ಬೆಳಗ್ಗೆ 9.00 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ.

ಚಲ್ಲಘಟ್ಟ ಮತ್ತು ಎಂ.ಜಿ ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ), ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ, ರೈಲುಗಳ ಸೇವೆಯು ಬೆಳಿಗ್ಗೆ 7.00 ಗಂಟೆಗೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪಕಾರ ಸಂಚರಿಸಲಿದೆ. ನಮ್ಮ ಮೆಟ್ರೋ ಪಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಬೆಂಗಳೂರು ಮೆಟ್ರೋ ರೈಲು ನಿಗಮ ಕೋರಿದ್ದು, ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದೆ.

ನಮ್ಮ ಮೆಟ್ರೋ ಹೆಸರು ಬದಲಾವಣೆ 

ಸಿಲಿಕಾನ್ ಸಿಟಿಯ ಲಕ್ಷಾಂತರ ಮಂದಿಗೆ ಅನುಕೂಲವಾಗಿರುವ ನಮ್ಮ ಮೆಟ್ರೋ ಸಂಪೂರ್ಣ ಜಾಲಕ್ಕೆ 12ನೇ ಶತಮಾನದ ಬಸವೇಶ್ವರರ ಹೆಸರನ್ನು ನಾಮಕರಣ ಮಾಡುವ ಪ್ರಸ್ತಾವನೆಗೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ನಮ್ಮ ಮೆಟ್ರೋ ಕೇವಲ ಹೆಸರಲ್ಲ. ಅದು ಬೆಂಗಳೂರಿನ ಜನರಿಗೆ ಭಾವನಾತ್ಮಕ ವಿಷಯ. ಇಂತಹ ವಿಷಯಗಳ ಜತೆ ಆಟವಾಡುವುದನ್ನು ಬಿಟ್ಟುಬಿಡಿ. ಹೆಸರು ಬದಲಾವಣೆ ಮಾಡುವ ಬಗ್ಗೆ ತಲೆ ಕೆಡಿಸಿಕೊಳ್ಳುವುದನ್ನು ಬಿಟ್ಟು ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ತಲೆ ಕೆಡಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮೆಟ್ರೋ ಕಾಮಗಾರಿ: ಇಂದಿನಿಂದ 4 ತಿಂಗಳವರೆಗೆ ಸೆಂಟ್ರಲ್ ಜಂಕ್ಷನ್ ಫ್ಲೈಓವರ್ ಬಂದ್

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿನಂತೆ ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರನ್ನು ಮರುನಾಮಕರಣ ಮಾಡುವ ಬಗ್ಗೆ ಸಲಹೆಗಳು ಬಂದಿವೆ ಎಂದು ಸಚಿವ ಎಂ.ಬಿ.ಪಾಟೀಲ್ ಇತ್ತೀಚೆಗೆ ಪ್ರಸ್ತಾಪಿಸಿದ್ದರು. ಇದಕ್ಕೆ ಜನರಿಂದ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ ಕೂಡ ಶುರುವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:27 pm, Fri, 3 November 23

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ