ಅತ್ತಿಬೆಲೆ ಅಗ್ನಿ ದುರಂತ: ಸಾವಿನ ಸಂಖ್ಯೆ 16ಕ್ಕೆ ಏರಿಕೆ, ಪಟಾಕಿ ಖರೀದಿಸಲು ಹೋಗಿ ದುರಂತ ಅಂತ್ಯಕಂಡ

Attibele Fire CrackersTragedy: ಬೆಂಗಳೂರಿನ ಆನೇಕಲ್​ ತಾಲೂಕಿನ ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾನೆ. ಇದರಿಂದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಗೆಳೆಯ ಬರ್ತ್​ಡೇಗೆ ಪಟಾಕಿ ಖರಿದೀಸಲು ಹೋಗಿದ್ದ ವೆಂಕಟೇಶ್​ ಎನ್ನುವಾತ ದುರಂತ ಅಂತ್ಯ ಕಂಡಿದ್ದಾನೆ.

ಅತ್ತಿಬೆಲೆ ಅಗ್ನಿ ದುರಂತ: ಸಾವಿನ ಸಂಖ್ಯೆ 16ಕ್ಕೆ ಏರಿಕೆ, ಪಟಾಕಿ ಖರೀದಿಸಲು ಹೋಗಿ ದುರಂತ ಅಂತ್ಯಕಂಡ
ಅತ್ತಿಬೆಲೆ ಅಗ್ನಿ ದುರಂತ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 12, 2023 | 10:10 AM

ಬೆಂಗಳೂರು, (ಅಕ್ಟೋಬರ್ 12): ಅತ್ತಿಬೆಲೆ ಪಟಾಕಿ ಅಗ್ನಿ ದುರಂದಲ್ಲಿ (Attibele Fire Crackers Tragedy) ಗಾಯಗೊಂಡಿದ್ದ ಯುವಕನೋರ್ವ ಮೃತಪಟ್ಟಿದ್ದಾನೆ. ಇದರೊಂದಿಗೆ ದರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಬೊಮ್ಮನಹಳ್ಳಿಯ ಗಾರೇಬಾವಿಪಾಳ್ಯದ ನಿವಾಸಿ ವೆಂಕಟೇಶ್ ಅವರು ಇಂದು (ಅಕ್ಟೋಬರ್ 12) ಬೆಳಗ್ಗೆ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಪಟಾಕಿ ಖರೀದಿಸಲು ಹೋಗಿ ದುರಂತ ಅಂತ್ಯಕಂಡ

ಸ್ನೇಹಿತನ ಬರ್ತಡೇಗೆಂದು ಅತ್ತಿಬೆಲೆಯ ಬಾಲಾಜಿ ಟ್ರೇಡರ್ಸ್​ಗೆ ಪಟಾಕಿ ಖರೀದಿಸಲು ಹೋಗಿದ್ದರು. ಅದೇ ವೇಳೆಯೇ ಅಗ್ನಿ ದುರಂತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ವೆಂಕಟೇಶ್​ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದರು. ಬೆಂಕಿ ಅವಘಡದಲ್ಲಿ 50ರಷ್ಟು ದೇಹ ಸುಟ್ಟಿತ್ತು. ಕೂಡಲೇ ಗಾಯಾಳು ವೆಂಕಟೇಶ್ ನನ್ನು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು, ಇನ್ನಷ್ಟು ತಲೆದಂಡ ಸಾಧ್ಯತೆ

ಇದೇ ಅಕ್ಟೋಬರ್ 07ರಂದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಅತ್ತಿಬೆಲೆಯಲ್ಲಿ (Attibele) ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಈ ಅಗ್ನಿ ಅವಘಡದಲ್ಲಿ ಪಟಾಕಿಗಳು ಹೊತ್ತಿ ಉರಿದಿದ್ದವು. ಇದರಿಂದ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ತಮಿಳುನಾಡಿನ ಮೂಲದ 15 ಜನ ಮೃತಪಟ್ಟಿದ್ದರು. ಇನ್ನು ಪಟಾಕಿ ಖರೀದಿಗೆ ಹೋಗಿದ್ದ ವೆಂಕಟೇಶ್​ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದ.

ಒಟ್ಟಿನಲ್ಲಿ ಗೆಳೆಯನ ಹುಟ್ಟುಹಬ್ಬವನ್ನು ಭರ್ಜರಿಯಾಗಿಯಾಗಿ ಆಚರಿಸಲು ಪಟಾಕಿ ಖದೀಸಲು ಹೋಗಿದ್ದ ವೆಂಕಟೇಶ್​ ಇದೀಗ ದುರಂತ ಅಂತ್ಯ ಕಂಡಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ