AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಬೆಲೆ ಪಟಾಕಿ ದುರಂತ: ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ತಹಶೀಲ್ದಾರ್

ಅತ್ತಿಬೆಲೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ನೇತೃತ್ವದಲ್ಲಿ 5 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ತಮಿಳುನಾಡಿನ ತಹಶೀಲ್ದಾರ್​ಗಳ ಸಹಭಾಗಿತ್ವದಲ್ಲಿ ತಮಿಳುನಾಡಿನ ಕಾರ್ಮಿಕರ ಕುಟುಂಬಗಳಿಗೆ ತಹಶೀಲ್ದಾರ್ ಚೆಕ್ ವಿತರಿಸಿದ್ದಾರೆ.

ಅತ್ತಿಬೆಲೆ ಪಟಾಕಿ ದುರಂತ: ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ತಹಶೀಲ್ದಾರ್
ಚೆಕ್ ವಿತರಣೆ
ರಾಮು, ಆನೇಕಲ್​
| Edited By: |

Updated on: Oct 28, 2023 | 6:26 PM

Share

ಆನೇಕಲ್, ಅಕ್ಟೋಬರ್​​​​ 28: ಆನೆಕಲ್​ ತಾಲೂಕಿನ ಅತ್ತಿಬೆಲೆಯಲ್ಲಿನ (Attibele) ಪಟಾಕಿ ಗೋಡೌನ್​ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಈ ಹಿಂದೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಇದೀಗ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ನೇತೃತ್ವದಲ್ಲಿ 5 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ತಮಿಳುನಾಡಿನ ತಹಶೀಲ್ದಾರ್​ಗಳ ಸಹಭಾಗಿತ್ವದಲ್ಲಿ ತಮಿಳುನಾಡಿನ ಕಾರ್ಮಿಕರ ಕುಟುಂಬಗಳಿಗೆ ತಹಶೀಲ್ದಾರ್ ಚೆಕ್ ವಿತರಿಸಿದ್ದಾರೆ.

ವೆಲ್ಲಾಕುಟ್ಟೈ ಗ್ರಾಮದ ರಾಜೇಶ್, ದಿನೇಶ್, ಸಂತೋಷ್ ಕುಮಾರ್, ನಿತೀಶ್​, ಅಮ್ಮಪೆಟೈ ಗ್ರಾಮದ ವೇದಪ್ಪನ್, ಆದಿಕೇಶವನ್, ವಿಜಯರಾಘವನ್​ ಆಕಾಶ್ ರಾಜ್, ಗಿರಿ, ಇಂಬರ್ತಿ, ಮುನಿವೇಲ್, ನೀಪತುರೈನ ಪ್ರಕಾಶರಾಜ್​, ಹೊಸೂರಿನ ಆಂಥೋನಿ ಪೌಲಾರಾಜ್ ಸೇರಿ 13 ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ಉಳಿದ ಮೂವರು ಕಾರ್ಮಿಕರ ಕುಟುಂಬಗಳಿಗೆ ಇನ್ನೆರಡು ದಿನದಲ್ಲಿ ಪರಿಹಾರ ನೀಡಲಿದ್ದಾರೆ.

ಇದನ್ನೂ ಓದಿ: ಆನೇಕಲ್: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಪಟಾಕಿ ಅಂಗಡಿ: 13 ಜನರು ಸಜೀವದಹನ

ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ಮಾಲೀಕ ರಾಮಸ್ವಾಮಿ ರೆಡ್ಡಿ, ಪುತ್ರ ನವೀನ್​ ಮತ್ತು ಕಟ್ಟಡದ ಮಾಲೀಕ ಅನಿಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗೋಡೌನ್​​ನಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ಪಟಾಕಿ ಮಾರಾಟ ಮಾಡಲು ಹಾಗೂ ಸಂಗ್ರಹಿಸಲು ಎರಡಕ್ಕೂ ಲೈಸೆನ್ಸ್ ಇದೆಯಾ? ಎಂಬುವುದನ್ನು ಪರಿಶೀಲಿಸಲಾಗಿದೆ.

ಇದನ್ನೂ ಓದಿ: ಅಗ್ನಿ ದುರಂತದಲ್ಲಿ 13 ಜನ ಸಜೀವದಹನ: ಸ್ಥಳಕ್ಕೆ ಡಿಕೆ ಶಿವಕುಮಾರ್​ ಭೇಟಿ, ಪರಿಹಾರ ನೀಡುವಂತೆ ಬೊಮ್ಮಾಯಿ ಆಗ್ರಹ

ಅಕ್ಟೋಬರ್​​ 07 ರಂದು ಲಾರಿಯಿಂದ ಪಟಾಕಿ ಅನ್​ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ ಪಟಾಕಿ  ಅಂಗಡಿ ಹೊತ್ತಿ ಉರಿದಿದ್ದು, 13 ಜನರು ಸಜೀವದಹನವಾಗಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿತ್ತು.

ಅಗ್ನಿ ದುರಂತದಲ್ಲಿ ಕೋಟ್ಯಂತರ ಮೌಲ್ಯದ ಪಟಾಕಿ ಅಗ್ನಿಗಾಹುತಿಯಾಗುವುದರೊಂದಿಗೆ 1 ಕ್ಯಾಂಟ್ರೋ, 2 ಬೊಲೆರೋ, 7 ಬೈಕ್​ಗಳು ಸಹ ಬೆಂಕಿಗಾಹುತಿ ಆಗಿತ್ತು. ವಾಹನ ಸವಾರರಿಗೆ ಪಟಾಕಿ ಅಂಗಡಿ ದುರಂತ ಎಫೆಕ್ಟ್ ತಟ್ಟಿದ್ದು, ಅತ್ತಿಬೆಲೆ ಕಡೆ ತೆರಳುವ ಮಾರ್ಗದಲ್ಲಿ ಟ್ರಾಫಿಕ್​ ಜಾಮ್ ಉಂಟಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.