ಅತ್ತಿಬೆಲೆ ದುರಂತ ನಮಗೊಂದು ಪಾಠ: ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್

ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಆ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಮಾಡಲಾಗುವುದು ಎಂದಿದ್ದಾರೆ.

ಅತ್ತಿಬೆಲೆ ದುರಂತ ನಮಗೊಂದು ಪಾಠ: ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್
ಗೃಹಸಚಿವ ಜಿ.ಪರಮೇಶ್ವರ್
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on:Oct 18, 2023 | 3:30 PM

ಆನೇಕಲ್, ಅಕ್ಟೋಬರ್​​​​ 18: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwara) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಮಾಡಲಾಗುವುದು. ಬೆಂಗಳೂರಿನಲ್ಲಿ ಹೆಚ್ಚು ಜನ ವಾಸ ಹಿನ್ನೆಲೆ, ಜೊತೆಗೆ ಇತ್ತೀಚೆಗೆ ಪಟಾಕಿ ಅವಘಡಗಳಲ್ಲಿ ಅಮಾಯಕರು ಮೃತಪಟ್ಟಿದ್ದಾರೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ಪಟಾಕಿ ಬ್ಯಾನ್​ಗೆ ಚಿಂತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆ ಮಾಲೀಕ 2017 ರಿಂದ 2022 ವರೆಗೆ ನೂತನ ಪರವಾನಗಿ ನವೀಕರಣ ನಡುವೆ ಫೇಕ್ ಲೈಸೆನ್ಸ್ ಸೃಷ್ಟಿ ಮಾಡಲಾಗಿದೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. ಆದರೆ 50 ಟನ್​ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು ಮಾಡಲಾಗಿತ್ತು.

ಇದನ್ನೂ ಓದಿ: ಪಬ್ ಬೆಂಕಿ ದುರಂತ, ಬೆಂಗಳೂರು; ಸುತ್ತಮುತ್ತ ಶಾಲಾ ಕಾಲೇಜುಗಳಿದ್ದರೂ ಪಬ್ ನಡೆಸಲು ಅನುಮತಿ ನೀಡಲಾಗಿದೆ: ಪ್ರತ್ಯಕ್ಷದರ್ಶಿ

ಅಕ್ರಮ ದಸ್ತಾನು ಪರಿಶೀಲನೆ ವೇಳೆ ತಹಶಿಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್, ಪೈರ್ ಮತ್ತು ಟ್ರಾನ್ಸ್‌ಪೋರ್ಟ್‌ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಗಡಿಯಲ್ಲಿ ಆರ್ಟಿಓ ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಿಲ್ಲ. ಹಾಗಾಗಿ ತಹಶಿಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ್​ ಭೇಟಿ

ಅತ್ತಿಬೆಲೆ ಪಟಾಕಿ ಗೋಡೌನ್​ನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಗೃಹ ಇಲಾಖೆ ಸಚಿವ ಪರಮೇಶ್ವರ್​ ಇಂದು ಭೇಟಿ ಮಾಡಿದ್ದು, ಘಟನೆ ಅಗ್ನಿಶಾಮಕ ಡಿಐಜಿ ಪಂತ್, ಐಜಿಪಿ ರವಿಕಾಂತೇಗೌಡರಿಂದ ಮಾಹಿತಿ ಪಡೆದುಕೊಂಡಿದ್ದಾರೆ.​ ಮಳಿಗೆ ಮಾಲೀಕನ ಬಗ್ಗೆ ಡಿಸಿಯಿಂದ ಮಾಹಿತಿ ಪಡೆದಿದ್ದು,​ ನಕಲಿ ಲೈಸೆನ್ಸ್ ಸೃಷ್ಟಿಸಿದ್ದರು ಎಂದು ಡಿಸಿ ದಯಾನಂದ್​ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಫೋರಂ ಮಾಲ್ ಬಳಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು 4ನೇ ಮಹಡಿಯಿಂದ ಜಿಗಿದ ವ್ಯಕ್ತಿ

ದುರಂತದಲ್ಲಿ ಹದಿನಾಲ್ಕು ಮಂದಿ ಸಜೀವ ದಹನಗೊಂಡಿದ್ದರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ನಾಲ್ವರ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದರು. ಸೆಂಟ್ ಜಾನ್ಸ್ ಆಸ್ಪತ್ರೆಗೆ ಮೂವರು ಗಾಯಾಳುಗಳನ್ನ ರವಾನಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಗೆ ಓರ್ವ ಗಾಯಾಳುವನ್ನ ರವಾನೆ ಮಾಡಲಾಗಿತ್ತು.

  • ಕಳೆದ 11ನೇ ದಿನಾಂಕದಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕಾರ್ಮಿಕ ದಿನೇಶ್ ಸಾವನ್ನಪ್ಪಿದ್ದ.
  • ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ವೆಂಕಟೇಶ್ ಕಳೆದ ಅ.12ರಂದು ಮೃತ ಪಟ್ಟಿದ್ದ.
  • ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಗಾಯಾಳು ಕಾರ್ಮಿಕ ರಾಜೇಶ್​ ಸಾವು.
  • ಪಟಾಕಿ ಅಂಗಡಿ ಮಾಲೀಕ ನವೀನ್​​ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:08 pm, Wed, 18 October 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್