AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತುಲ್ ಸುಭಾಷ್ ಪ್ರಕರಣ: ಆರೋಪಿ ಜಾಮೀನು ಪಡೆಯಲು ಮಗುವನ್ನು ಬಳಸಬಾರದು, ಟೆಕ್ಕಿ ಪರ ವಕೀಲ ಆಗ್ರಹ

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನಿಕಿತಾ ಸಿಂಘಾನಿಯಾ ಜಾಮೀನು ಅರ್ಜಿಗೆ ವಕೀಲ ಆಕಾಶ್ ಜಿಂದಾಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಮಗುವನ್ನು ಜಾಮೀನು ಪಡೆಯಲು ಬಳಸಿಕೊಳ್ಳುವುದನ್ನು ತಡೆಯಬೇಕೆಂದು ಆಗ್ರಹಿಸಿದ್ದಾರೆ. ಅತುಲ್ ಆತ್ಮಹತ್ಯಾ ವೀಡಿಯೋದಲ್ಲಿಯೂ ಇದೇ ಅಂಶವನ್ನು ಉಲ್ಲೇಖಿಸಿದ್ದರು ಎಂದು ಅವರು ಪ್ರತಿಪಾದಿಸಿದ್ದಾರೆ. ನ್ಯಾಯಾಲಯ ಜನವರಿ 4ಕ್ಕೆ ಜಾಮೀನು ಅರ್ಜಿಯ ವಿಚಾರಣೆ ನಿಗದಿಪಡಿಸಿದೆ.

ಅತುಲ್ ಸುಭಾಷ್ ಪ್ರಕರಣ: ಆರೋಪಿ ಜಾಮೀನು ಪಡೆಯಲು ಮಗುವನ್ನು ಬಳಸಬಾರದು, ಟೆಕ್ಕಿ ಪರ ವಕೀಲ ಆಗ್ರಹ
ನಿಕಿತಾ ಸಿಂಘಾನಿಯಾ & ಅತುಲ್ ಸುಭಾಷ್
Ganapathi Sharma
|

Updated on:Dec 31, 2024 | 12:08 PM

Share

ಬೆಂಗಳೂರು, ಡಿಸೆಂಬರ್ 31: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತಿರುವ ನಿಕಿತಾ ಸಿಂಘಾನಿಯಾ ಜಾಮೀನು ಪಡೆಯಲು ದಾಳವಾಗಿ ತಮ್ಮ ಮಗುವನ್ನು ಬಳಸಿಕೊಳ್ಳಲು ಬಿಡಬಾರದು ಎಂದು ವಕೀಲ ಆಕಾಶ್ ಜಿಂದಾಲ್ ಹೇಳಿದ್ದಾರೆ. ಪ್ರಕರಣದ ವಿಚಾರಣೆ ಇಂದು ಬೆಂಗಳೂರಿನ ಕೋರ್ಟ್​​ನಲ್ಲಿ ಲಿಸ್ಟ್ ಆಗಿದ್ದು, ಈ ಬಗ್ಗೆ ಟೆಕ್ಕಿ ಅತುಲ್ ಸುಭಾಷ್ ಪರ ವಕೀಲ ಆಕಾಶ್ ಜಿಂದಾಲ್ ಪ್ರತಿಕ್ರಿಯಿಸಿದ್ದಾರೆ.

ನಿಕಿತಾ ಮತ್ತು ಅವರ ಕುಟುಂಬದ ಜಾಮೀನು ಅರ್ಜಿಯನ್ನು ಇಂದು ಲಿಸ್ಟ್ ಮಾಡಲಾಗಿದೆ. ಅತುಲ್ ತಮ್ಮ ಆತ್ಮಹತ್ಯೆ ವೀಡಿಯೊದಲ್ಲಿ, ಮಗುವನ್ನು ನ್ಯಾಯಾಂಗ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಸಾಧನವಾಗಿ ಬಳಸಬಾರದು ಎಂದು ಉಲ್ಲೇಖಿಸಿದ್ದಾರೆ. ಮತ್ತು ಈಗ ಅದನ್ನೇ ಮಾಡಲಾಗುತ್ತಿದೆ. ಅವರ ಪರ ವಕೀಲರು ಇಂದು ಆ ರೀತಿ ವಾದಿಸಿದ್ದಾರೆ. ನಾವು ಆಕೆಯನ್ನು ಕಸ್ಟಡಿಗೆ ನೀಡಬೇಕೆಂದು ಕೋರುತ್ತಿದ್ದೇವೆ ಎಂದು ಜಿಂದಾಲ್ ಹೇಳಿದ್ದಾರೆ.

‘ತಾಯಿ ಮತ್ತು ಇಡೀ ಕುಟುಂಬವನ್ನು ಬಂಧಿಸಿರುವ ಕಾರಣ, ಮಗುವನ್ನು ನೋಡಿಕೊಳ್ಳಲು ಯಾರೂ ಇಲ್ಲ. ತಲೆಮರೆಸಿಕೊಂಡಿರುವಾಗ ಆಕೆಯನ್ನು ಬಂಧಿಸಲಾಗಿತ್ತು ಮತ್ತು ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ಆಕೆ ಮತ್ತೆ ಮಗುವಿನೊಂದಿಗೆ ಪರಾರಿಯಾಗಲು ಪ್ರಯತ್ನಿಸಬಹುದು. ಆದ್ದರಿಂದ, ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿ ಮತ್ತು ಜಾಮೀನು ಪಡೆಯಲು ಮಗುವನ್ನು ಸಾಧನವಾಗಿ ತೆಗೆದುಕೊಳ್ಳಲು ಆಕೆಗೆ ಅವಕಾಶ ನೀಡಬಾರದು’ ಎಂದು ಜಿಂದಾಲ್ ಹೇಳಿದ್ದಾರೆ.

ಬೆಂಗಳೂರು ನ್ಯಾಯಾಲಯ ನಿಕಿತಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿ 4 ರಂದು ನಡೆಸಲಿದೆ. ಸೋಮವಾರದಂದು ಅರ್ಜಿ ಸಲ್ಲಿಕೆಯಾಗಿತ್ತು. ಪ್ರತಿವಾದಿಯು ಜಾಮೀನು ಏಕೆ ನೀಡಬೇಕು ಎಂದು ಪ್ರಶ್ನಿಸಿ ವಾದ ಮಂಡಿಸಿದ್ದರು.

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ

ವಿವಾಹ ವಿಚ್ಛೇದನಕ್ಕೆ 3 ಕೋಟಿ ರೂಪಾಯಿ ನೀಡುವಂತೆ ಒತ್ತಡ ಹೇರಿದ್ದರಿಂದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಡಿಸೆಂಬರ್ 9 ರಂದು, ಅವರು ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, 90 ನಿಮಿಷಗಳ ವೀಡಿಯೊ ರೆಕಾರ್ಡ್ ಮಾಡಿ ಇಟ್ಟಿದ್ದರು ಮತ್ತು 40 ಪುಟಗಳ ಡೆತ್​ ನೋಟ್ ಅನ್ನೂ ಬರೆದಿಟ್ಟಿದ್ದರು. ಅದರಲ್ಲಿ, ಪತ್ನಿ ಮತ್ತು ಅತ್ತೆಯರಿಂದ ಕಿರುಕುಳವಾದ ಬಗ್ಗೆ ವಿವರಿಸಿದ್ದರು.

ಇದನ್ನೂ ಓದಿ: ಅತುಲ್ ಸುಭಾಷ್ ಪ್ರಕರಣದ ಬಳಿಕ ಗುರುಗ್ರಾಮದ ವ್ಯಕ್ತಿಯಿಂದಲೂ ಪತ್ನಿ ವಿರುದ್ಧ ಮಾನಸಿಕ ಕಿರುಕುಳದ ಆರೋಪ

ಪ್ರಕರಣ ಸಂಬಂಧ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ಮತ್ತು ಸಹೋದರನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಿಕಾಸ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಿಎನ್‌ಎಸ್ ಸೆಕ್ಷನ್ 108 ಮತ್ತು 3 (5) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Tue, 31 December 24

ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್