ಅತುಲ್ ಸುಭಾಷ್‌ ಆತ್ಮಹತ್ಯೆ ಕೇಸ್​: ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಆರೋಪಿಗಳಾದ ಅತುಲ್‌ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾಗೆ ಬೆಂಗಳೂರಿನ 29ನೇ ಸಿಸಿಹೆಚ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಅತುಲ್ ಸುಭಾಷ್‌ ಆತ್ಮಹತ್ಯೆ ಕೇಸ್​: ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು
ಅತುಲ್ ಸುಭಾಷ್‌ ಆತ್ಮಹತ್ಯೆ ಕೇಸ್​: ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on: Jan 04, 2025 | 7:16 PM

ಬೆಂಗಳೂರು, ಜನವರಿ 04: ಹೆಂಡತಿಯ ಕಾಟಕ್ಕೆ ಬೇಸತ್ತು ಸಾಫ್ಟ್‌ವೇರ್‌ ಇಂಜಿನಿಯರ್​ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ದೇಶಾದ್ಯಂತ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಬಂಧನಕೊಳ್ಳಗಾಗಿದ್ದ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾಗೆ ಜಾಮೀನು ಮಂಜೂರು ಮಾಡಿ ಬೆಂಗಳೂರಿನ 29ನೇ ಸಿಸಿಹೆಚ್‌ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ಹೆಂಡತಿಯ ಕಾಟಕ್ಕೆ ಬೇಸತ್ತಿದ್ದ ಅತುಲ್ ಸುಭಾಷ್, 40 ಪುಟಗಳ ಡೆತ್‌ ನೋಟ್‌ ಮತ್ತು 6 ನಿಮಿಷ 50 ಸೆಕೆಂಡ್‌ ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದರು. ಅತುಲ್, ತನ್ನ ಪತ್ನಿ ನಿಖಿತಾ ಸಿಂಘಾನಿಯಾ 9 ಕೇಸ್ ದಾಖಲಿಸಿದ್ದರು. ಕೊಲೆಗೆ ಯತ್ನ, ಅಸಹಜ ಲೈಂಗಿಕ ಕ್ರಿಯೆ, ಕಿರುಕುಳ ಕೊಡ್ತಿದ್ದ ಅಂತಾ ಕೇಸ್ ಹಾಕಿದ್ದರು. ಇದ್ರಿಂದ ಉತ್ತರ ಪ್ರದೇಶ ಕೋರ್ಟ್​ಗೆ ಅಲೆದಾಡಿ ಅಲೆದಾಡಿ ಅತುಲ್ ಹೈರಾಣಾಗಿ ಹೋಗಿದ್ದೆ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: ಅತುಲ್ ಸುಭಾಷ್ ಪ್ರಕರಣ: ಆರೋಪಿ ಜಾಮೀನು ಪಡೆಯಲು ಮಗುವನ್ನು ಬಳಸಬಾರದು, ಟೆಕ್ಕಿ ಪರ ವಕೀಲ ಆಗ್ರಹ

ಅತುಲ್ ಸಹೋದರ ವಿಕಾಸ್ ನೀಡಿದ ದೂರಿನ ಅನ್ವಯ ಅತುಲ್ ಪತ್ನಿ ನಿಖಿತಾ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಎಫ್​ಐಆರ್​ನಲ್ಲಿ, ಅತುಲ್ ಸುಭಾಷ್ ವಿರುದ್ಧ ಆರೋಪಿಗಳು ಸುಳ್ಳು ಕೇಸ್ ಹಾಕಿದ್ದರು. ಪ್ರಕರಣ ಇತ್ಯರ್ಥಕ್ಕಾಗಿ 3 ಕೋಟಿ ರೂ. ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದರು. ಅಷ್ಟೇ ಅಲ್ಲ ಮಗನ ಭೇಟಿಗೆ ಅವಕಾಶ ನೀಡಲು 30 ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರು ಅಂತಾ ಉಲ್ಲೇಖಿಸಲಾಗಿತ್ತು.

ಈ ಕೇಸ್‌ನ ತನಿಖೆ ಕೈಗೊಂಡಿದ್ದ ಬೆಂಗಳೂರಿನ ಮಾರತ್‌ಹಳ್ಳಿ ಪೊಲೀಸರು ಕೊನೆಗೂ ಆರೋಪಿಗಳ ಹೆಡೆಮುರಿ ಕಟ್ಟಿದ್ದರು. ಅತುಲ್‌ನ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದರೆ, ಪತ್ನಿ ನಿಖಿತಾ ಶಿಂಘಾನಿಯಾಳನ್ನು ಹರಿಯಾಣದ ಗುರುಗ್ರಾಮದಲ್ಲಿ ಲಾಕ್ ಮಾಡಿದ್ದರು.

ಇದನ್ನೂ ಓದಿ: ಅತುಲ್ ಸಂತ್ರಸ್ತ ಅಲ್ಲ, ನಾನೇ ನಿಜವಾದ ಸಂತ್ರಸ್ತೆ: ಪೊಲೀಸರ ಮುಂದೆ ಸ್ಫೋಟಕ ಅಂಶ ಬಿಚ್ಚಿಟ್ಟ ಪತ್ನಿ

ಮೊಬೈಲ್ ಸ್ವಿಚ್‌ ಆಫ್‌ ಮಾಡಿದ್ದ ಆರೋಪಿಗಳು ಸ್ನೇಹಿತರ ನೆರವು ಪಡೆದು ಪದೇಪದೆ ವಾಸ್ತವ್ಯ ಬದಲಿಸುತ್ತಿದ್ದರು. ಆದರೆ, ನೆರವಿಗಾಗಿ ಆಗಾಗ್ಗೆ ಸ್ನೇಹಿತರಿಗೆ ಕರೆ ಮಾಡುತ್ತಿದ್ದರು. ಈ ಸುಳಿವಿನ ಜಾಡು ಹಿಡಿದು ಹೊರಟ ಪೊಲೀಸರು ಮೊಬೈಲ್‌ ಟವರ್‌ ಲೊಕೇಷನ್‌ ಆಧರಿಸಿ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದರು. ಬಳಿಕ ಮೂವರನ್ನು ಬೆಂಗಳೂರಿಗೆ ಕರೆತಂದು ಕೋರ್ಟ್‌ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು. ನಂತರ ಮೂವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್