ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಪ್ರಕರಣ ರದ್ದು ಕೋರಿ ಅರ್ಜಿ, ಕೋರ್ಟ್ ಹೇಳಿದ್ದೇನು?

| Updated By: ಗಂಗಾಧರ​ ಬ. ಸಾಬೋಜಿ

Updated on: Jan 06, 2025 | 9:23 PM

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಪತ್ನಿ ಮತ್ತು ಕುಟುಂಬದವರ ವಿರುದ್ಧದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಹೈಕೋರ್ಟ್, ಎಫ್ಐಆರ್​ನಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪಗಳಿವೆ ಎಂದು ಅಭಿಪ್ರಾಯಪಟ್ಟಿದೆ. ಅತುಲ್ ಸುಭಾಷ್ ಪತ್ನಿ ಮತ್ತು ಅವರ ಕುಟುಂಬದವರಿಗೆ ಇತ್ತೀಚೆಗೆ ಜಾಮೀನು ಸಿಕ್ಕಿದೆ.

ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಪ್ರಕರಣ ರದ್ದು ಕೋರಿ ಅರ್ಜಿ, ಕೋರ್ಟ್ ಹೇಳಿದ್ದೇನು?
ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಪ್ರಕರಣ ರದ್ದು ಕೋರಿ ಅರ್ಜಿ, ಕೋರ್ಟ್ ಹೇಳಿದ್ದೇನು?
Follow us on

ಬೆಂಗಳೂರು, ಜನವರಿ 06: ನಗರದ ಮಾರತಹಳ್ಳಿಯಲ್ಲಿ ನೇಣಿಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಟೆಕ್ಕಿ ವಿಚಾರ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳ ಅಂಗಳ ತಲುಪುವ ಮೂಲಕ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪ್ರಕರಣವನ್ನು ರದ್ದುಕೋರಿ ನಿಖಿತಾ,‌ ನಿಶಾ, ಅನುರಾಗ್, ಸುಶೀಲ್​ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.

ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅತುಲ್ ಸುಭಾಪ್​ ಪತ್ನಿ ಹಾಗೂ ಕುಟುಂಬದವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್, ಎಫ್ಐಆರ್​ನಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಅಂಶಗಳಿವೆ ಎಂದು ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ತನಿಖೆಯ ಸಂದರ್ಭದಲ್ಲಿ ಕಲೆಹಾಕಿದ ದಾಖಲೆಗಳನ್ನು 2 ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅಭಿಯೋಜಕರಿಗೆ ಹೈಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: ಅತುಲ್ ಸುಭಾಷ್‌ ಆತ್ಮಹತ್ಯೆ ಕೇಸ್​: ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು

ಬೆಂಗಳೂರಿನ 29ನೇ ಸಿಸಿಹೆಚ್‌ ನ್ಯಾಯಾಲಯ ಜನವರಿ 4ರಂದು ಬಂಧನಕೊಳ್ಳಗಾಗಿದ್ದ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾಗೆ ಜಾಮೀನು ನೀಡಿತ್ತು.

ಹೆಂಡತಿ ಮತ್ತು ಅವರ ಮನೆಯವ ಕಾಟಕ್ಕೆ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ 2024ರ ಡಿಸೆಂಬರ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 40 ಪುಟಗಳ ಡೆತ್‌ ನೋಟ್‌ ಮತ್ತು 6 ನಿಮಿಷ 50 ಸೆಕೆಂಡ್​ನ ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಪತ್ನಿ ನಿಕಿತಾ, ಅತ್ತೆ ನಿಶಾ ಮತ್ತು ಭಾವ ಅನುರಾಗ್ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಅತುಲ್ ಸುಭಾಷ್ ಪ್ರಕರಣ: ಆರೋಪಿ ಜಾಮೀನು ಪಡೆಯಲು ಮಗುವನ್ನು ಬಳಸಬಾರದು, ಟೆಕ್ಕಿ ಪರ ವಕೀಲ ಆಗ್ರಹ

ಅತುಲ್ ಬರೆದಿರುವ ಡೆತ್ ನೋಟ್ ಹಾಗೂ ಮಾಡಿಟ್ಟಿರುವ ವಿಡಿಯೋದಲ್ಲಿ ತನ್ನ ಮೇಲೆ ಹಾಕಿರುವ 9 ಕೇಸ್ ಗಳ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದ್ದರು. ತನ್ನ ಪತ್ನಿಯಿಂದ ಏನೇನೂ ಕಿರುಕುಳ ಆಗಿದೆ ಎಂಬುದನ್ನು ಸಹ ಹೇಳಿಕೊಂಡಿದ್ದರು. ಅದ್ರಲ್ಲೂ ಈ ಒಂಬತ್ತು ಕೇಸ್​​ಗಳು ಸಹ ನನ್ನ ಮೇಲೆ ಸುಳ್ಳು ಸುಳ್ಳು ಆರೋಪ ಮಾಡಿಯೇ ದಾಖಲಿಸಿದ್ದರು. ಆ ಕೇಸ್​ನಲ್ಲಿಯೇ ಈ ಎಲ್ಲಾ ಆರೋಪಗಳು ಇದ್ದಾವೆ ಎಂದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:22 pm, Mon, 6 January 25