ಅತುಲ್ ಸುಭಾಷ್ ಕೇಸ್​: ಮಗುವನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂಕೋರ್ಟ್ ನಕಾರ

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ, ಅವರ ಮಗುವಿನ ಪಾಲನೆಯ ಹಕ್ಕಿನ ಬಗ್ಗೆ ಸುಪ್ರೀಂ ಕೋರ್ಟ್ ಪ್ರಮುಖ ತೀರ್ಪು ನೀಡಿದೆ. ಅತುಲ್‌ರ ತಾಯಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು ಮಗುವಿನ ಪಾಲನೆಯ ಹಕ್ಕನ್ನು ಅತುಲ್‌ರ ಪತ್ನಿ ನಿಕಿತಾ ಸಿಂಘಾನಿಯಾಗೆ ನೀಡಿದೆ. ನ್ಯಾಯಾಲಯವು ಮಗುವಿನ ಯೋಗಕ್ಷೇಮ ಮತ್ತು ಪಾಲನೆಯನ್ನು ಗಮನದಲ್ಲಿಟ್ಟುಕೊಂಡು ತೀರ್ಪು ನೀಡಿದೆ.

ಅತುಲ್ ಸುಭಾಷ್ ಕೇಸ್​: ಮಗುವನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂಕೋರ್ಟ್ ನಕಾರ
ಅತುಲ್ ಸುಭಾಷ್ ಕೇಸ್​: ಮಗುವನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂಕೋರ್ಟ್ ನಕಾರ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 20, 2025 | 9:18 PM

ಬೆಂಗಳೂರು, ಜನವರಿ 20: ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸುಭಾಷ್ ಮಗುವನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂಕೋರ್ಟ್ ನಕಾರವೆತ್ತಿದೆ. ಸುಭಾಷ್ ತಾಯಿ ಅಂಜು ದೇವಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿವಿ ನಾಗರತ್ನ ನೇತೃತ್ವದ ಪೀಠ ವಜಾಗೊಳಿಸಿದೆ. ಆ ಮೂಲಕ ಸುಭಾಷ್​​ ವಿಚ್ಚೇದಿತ ಪತ್ನಿ ನಿಕಿತಾ ಸಿಂಘಾನಿಯಾ ಮಗುವಿನ ಪಾಲನೆ ಮಾಡಲಿ ಎಂದು ಕೋರ್ಟ್ ಆದೇಶಿಸಿದೆ.

ಮೊಮ್ಮಗನನ್ನು ತನಗೆ ನೀಡುವಂತೆ ಸುಭಾಷ್ ತಾಯಿ ಕೋರಿದ್ದರು. ಜೊತೆಗೆ ಮಗು ಎಲ್ಲಿದೆ ಎಂಬುದನ್ನು ಸೊಸೆ ಬಹಿರಂಗಪಡಿಸುತ್ತಿಲ್ಲ ಎಂದು ಮಗುವಿನ ಅಜ್ಜಿ ಆರೋಪಿಸಿದ್ದರು. ವಿಚಾರಣೆ ಆರಂಭವಾಗುತ್ತಿದ್ದಂತೆ ಅರ್ಜಿದಾರರು ಹೆಚ್ಚು ವಿವರವಾದ ಅಫಿಡವಿಟ್ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದರು. ಆದರೆ ನ್ಯಾಯಮೂರ್ತಿ ನಾಗರತ್ನ ಅವರು ಅವರ ಮನವಿಯನ್ನು ತಳ್ಳಿಹಾಕಿದರು. ಇದು ಹೇಬಿಯಸ್ ಕಾರ್ಪಸ್  ಅರ್ಜಿ ಆಗಿದ್ದು ನಾವು ಮಗುವನ್ನು ನೋಡಲು ಬಯಸುತ್ತೇವೆ. ಮಗುವನ್ನು ಹಾಜರುಪಡಿಸುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಅತುಲ್​ ಸುಭಾಷ್​ ಆತ್ಮಹತ್ಯೆ: ಟೆಕ್ಕಿಯ ಪತ್ನಿ, ಅತ್ತೆ ಮತ್ತು ಭಾಮೈದ ಅರೆಸ್ಟ್​

ಹರಿಯಾಣದ ಬೋರ್ಡಿಂಗ್ ಶಾಲೆಯಲ್ಲಿ ಓದುತ್ತಿದ್ದಾನೆಂದು ಹೇಳಲಾಗುತ್ತಿದೆ. ಅಷ್ಟು ಚಿಕ್ಕ ವಯಸ್ಸಿನ ಮಕ್ಕಳನ್ನು ಬೋರ್ಡಿಂಗ್ ಶಾಲೆಗೆ ಕಳುಹಿಸಬಾರದು ಎಂದು ವಾದಿಸಿದ ಅಂಜು ದೇವಿ, ತನ್ನ ಮೊಮ್ಮಗನ ಪಾಲನೆ ತಮಗೆ ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು. ಸುಭಾಷ್ ಅವರ ಸಾವಿನಲ್ಲಿ ಸಿಂಘಾನಿಯಾ ಅವರ ಪಾತ್ರವಿದೆ ಎಂಬ ಆರೋಪಗಳನ್ನು ಅವರು ಉಲ್ಲೇಖಿಸಿದರು. ಆದಾಗ್ಯೂ, ಸಿಂಘಾನಿಯಾ ಇನ್ನೂ ತಪ್ಪಿತಸ್ಥರೆಂದು ಸಾಬೀತಾಗಿಲ್ಲ ಮತ್ತು ಪ್ರಕರಣವನ್ನು ಮಾಧ್ಯಮಗಳ ಪ್ರಸಾರದ ಆಧಾರದ ಮೇಲೆ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಬೆಂಗಳೂರಿನಲ್ಲಿ ಪತ್ನಿಯ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಅವರ ಸಾವು ರಾಷ್ಟ್ರಮಟ್ಟದಲ್ಲಿ ಸುದ್ದು ಮಾಡಿತ್ತು. ನನ್ನ ಸಾವಿಗೆ ಪತ್ನಿ, ಬಾಮೈದ, ಅತ್ತೆ, ಪತ್ನಿಯ ಚಿಕ್ಕಪ್ಪ ಕಾರಣ ಅಂತಾ ಹೇಳಿದ್ದ ಅತುಲ್ ಸುಮಾರು 40 ಪುಟಗಳ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.

ಇದನ್ನೂ ಓದಿ: Atul Subhash: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ, ಕ್ರಿಮಿನಲ್ ಲಾಯರ್ ವಿಕಾಸ್ ಹೇಳಿದ್ದೇನು?

ಅತುಲ್​ ವಿರುದ್ಧ ಕೂಡ ಆತನ ಪತ್ನಿ ನಿಖಿತಾ ಸಿಂಘಾನಿಯಾ 9 ಕೇಸ್ ದಾಖಲಿಸಿದ್ದರು. ಕೊಲೆಗೆ ಯತ್ನ, ಅಸಮರ್ಪಕ ಲೈಂಗಿಕ ಕ್ರಿಯೆ, ಕಿರುಕುಳ ಕೊಡುತ್ತಿದ್ದ ಅಂತಾ ಕೇಸ್ ದಾಖಲಿಸಿದ್ದರು. ಉತ್ತರ ಪ್ರದೇಶಕ್ಕೆ ಕೋರ್ಟ್​ಗೆ ಅಲೆದಾಡಿ ಅಲೆದಾಡಿ ಅತುಲ್ ಬೇಸತ್ತಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Published On - 7:37 pm, Mon, 20 January 25

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ