ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಯವತಿ ಮೇಲೆ ರೇಗಾಡಿದ ಆಟೋ ಚಾಲಕ, ಅಶ್ಲೀಲ ಪದಗಳಿಂದ ನಿಂದನೆ

ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ(auto driver) ಕೋಪಗೊಂಡು ಯುವತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2ರಂದು ನಡೆದಿದೆ. ಚಾಲಕ ನಿಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷಿತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಯವತಿ ಮೇಲೆ ರೇಗಾಡಿದ ಆಟೋ ಚಾಲಕ, ಅಶ್ಲೀಲ ಪದಗಳಿಂದ ನಿಂದನೆ
ಯುವತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆಟೋ ಚಾಲಕ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 05, 2024 | 5:26 PM

ಬೆಂಗಳೂರು, ಸೆ.05: ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ(auto driver) ಕೋಪಗೊಂಡು ಯುವತಿಯನ್ನ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಕೇಳಿಬಂದಿದೆ. ಈ ಘಟನೆ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2ರಂದು ನಡೆದಿದೆ. ಯುವತಿ ಹಾಗೂ ಆಕೆಯ ಸ್ನೇಹಿತ ಇಬ್ಬರೂ ಓಲಾ ಆಟೋವನ್ನು ಬುಕ್ ಮಾಡಿದ್ದರು. ಸಕಾಲಕ್ಕೆ ಆಟೋ ಬಾರದ ಹಿನ್ನೆಲೆ ಮತ್ತೊಂದು ಆಟೋವನ್ನು ಬುಕ್ ಮಾಡಿದ್ದಳು. ಬಳಿಕ ಮುಂಚಿತವಾಗಿ ಬಂದ ಆಟೋವನ್ನು ಹತ್ತಿ, ಈ ಹಿಂದೆ ಬುಕ್ ಮಾಡಿದ್ದ ಆಟೋವನ್ನು ರದ್ದು ಮಾಡಿದ್ದಳು.

ಆಟೋ ಚಾಲಕನ ಕರೆಯಿಸಿ ವಿಚಾರಣೆ

ಇದನ್ನು ಗಮನಿಸದ ಆಟೋ ಚಾಲಕ ಯುವತಿಯನ್ನ ಹಿಂಬಾಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆ. ಇನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋವನ್ನು ಮಾಡಿಕೊಂಡಿದ್ದ ಯುವತಿ, ಸಾಮಾಜಿಕ ಜಾಲತಾಣ ‘ಎಕ್ಸ್​’ನಲ್ಲಿ ಹಂಚಿಕೊಂಡು ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದಾಳೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪರಿಶೀಲಿಸಿದ ಪೊಲೀಸರು, ಆಟೋ ಚಾಲಕ ಮುತ್ತುರಾಜ್ ಎಂಬಾತನನ್ನ ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಯುವತಿಗೂ ಪೊಲೀಸರು ನೊಟೀಸ್ ನೀಡಿ ವಿಚಾರಣೆಗೆ ಬರಲು ಸೂಚಿಸಿದ್ದಾರೆ.

ಇದನ್ನೂ ಓದಿ:ರಾಮೇಶ್ವರಂ ಕೆಫೆ ಬಾಂಬರ್ ಬಳ್ಳಾರಿಯಲ್ಲಿ ಓಡಾಟ: ಆಟೋ ಚಾಲಕ ವಶಕ್ಕೆ, ತೀವ್ರಗೊಂಡ ತನಿಖೆ

ಸೂಕ್ತ ಕ್ರಮ ಕೈಗೊಳ್ಳುತ್ತೇವೆ- ಎಡಿಜಿಪಿ ಅಲೋಕ್ ಕುಮಾರ್

ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷಿತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ‘ ಆಟೋ ಚಾಲಕನೊಬ್ಬ ಯುವತಿಯನ್ನ ಅವಾಚ್ಯವಾಗಿ ನಿಂದಿಸಿರುವುದನ್ನು ಒಪ್ಪುವಂತದಲ್ಲ. ಇಂತಹ ಕೆಲ ಆಟೋ ಚಾಲಕರು ಎಲ್ಲರಿಗೂ ಕೆಟ್ಟ ಹೆಸರು ತರುತ್ತಾರೆ. ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Thu, 5 September 24

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ