ಬೆಂಗಳೂರು: ಡಿ.29ರಂದು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಮಸ್ಯೆ(Auto Drivers) ಉಂಟಾಗಲಿದೆ. ಏಕೆಂದರೆ ಆಟೋ ಚಾಲಕರು ಅಂದು ಬೆಂಗಳೂರಿನಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಡಿ.29ರಂದು ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಬಂದ್ ಆಗಿರಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ಸಾರಿಗೆ ಇಲಾಖೆ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.
ತಿಂಗಳ ಕೊನೇ ವಾರ ಅಂದರೆ ಡಿ. 29ರಂದು ಬೆಂಗಳೂರಿನಾದ್ಯಂತ ಆಟೋ ಸಂಚಾರವನ್ನು ಸ್ಥಗಿತಗೊಳಿಸಲು ಆಟೋ ಚಾಲಕರು ಮುಂದಾಗಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಆಟೋ ಚಾಲಕರು ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೆದ್ದಿದ್ದಾರೆ. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ನಿಂದ ಬೃಹತ್ ಆಟೋ ರ‍್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಆಟೋ ಮುಷ್ಕರಕ್ಕೆ ಈಗಾಗಲೇ 21 ಆಟೋ ಸಂಘಟನೆಗಳು ಸಾಥ್ ನೀಡಿವೆ. ರಾಜಧಾನಿಯ ಎರಡು ಲಕ್ಷದ ಹತ್ತು ಸಾವಿರ ಆಟೋ ಚಾಲಕರು ಈಗಾಗಲೇ ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಹೀಗಾಗಿ ಡಿ 21ರ ಗುರುವಾರದಂದು ರಾಜಧಾನಿಯಲ್ಲಿ ಸಂಪೂರ್ಣ ಆಟೋ ಸಂಚಾರ ಸ್ತಬ್ಧವಾಗಲಿದೆ.
ಇದನ್ನೂ ಓದಿ: E-Bike Taxis Karnataka: ಮೊದಲ ಬಾರಿಗೆ ಇ-ಬೈಕ್ ಟ್ಯಾಕ್ಸಿಗೆ ಪರವಾನಗಿಗೆ ನೀಡಿದ ಸಾರಿಗೆ ಪ್ರಾಧಿಕಾರ
ದಿನದಿಂದ ದಿನಕ್ಕೆ ರಾಜಧಾನಿಯಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗ್ತಿದೆ. ಇದರಿಂದ ಆಟೋ ಚಾಲಕರು ಬೀದಿಗೆ ಬೀಳ್ತಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅನುಮತಿ ಇಲ್ಲದಿದ್ರು ರಾಜಾರೋಷವಾಗಿ ಸಂಚರಿಸುತ್ತಿವೆ. ಆರ್ಟಿಒ ಅಧಿಕಾರಿಗಳು ಬೈಕ್ ಟ್ಯಾಕ್ಸಿಗಳನ್ನು ಮಟ್ಟ ಹಾಕುವಲ್ಲಿ ವಿಫಲವಾಗಿವೆ. ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರ ಎಲೆಕ್ಟ್ರಿಕ್ ಬೈಕ್ಗಳಿಗೆ ಅನುಮತಿ ನೀಡಿದೆ. ಮೊದಲ ಹಂತದಲ್ಲಿ 100 ಇ- ಬೈಕ್ಗಳನ್ನ ರಸ್ತೆಗಿಳಿಸಲು ನಿರ್ಧರಿಸಿರುವ ಬೌನ್ಸ್ ಕಂಪನಿ. ನಂತ್ರ ಹಂತ ಹಂತವಾಗಿ 1000 ಇ- ಬೈಕ್ಗಳನ್ನ ರಸ್ತೆಗಿಳಿಸಲು ನಿರ್ಧಾರ ಮಾಡಿದೆ. ಈ ಹಿಂದೆ ಕೂಡ ಬೌನ್ಸ್ ಕಂಪನಿ ಬೈಕ್ ಸೇವೆ ನೀಡುತ್ತಿತ್ತು. ಆದ್ರೆ ಕೊರೊನಾ ಸಮಯದಲ್ಲಿ ಬೈಕ್ ಸೇವೆಯನ್ನ ಸ್ಥಗಿತಗೊಳಿಸಿತ್ತು. ಈಗ ಮತ್ತೆ ಇ- ಬೈಕ್ ಸೇವೆ ನೀಡಲು ಅನುಮತಿ ಕೇಳಿ ಕಂಪನಿ ಅರ್ಜಿ ಸಲ್ಲಿಸಿದೆ.
ಆಟೋ ಚಾಲಕರ ಪ್ರಮುಖ ಬೇಡಿಕೆಗಳು