AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಯಾಮರಣ ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಪತ್ರ, ಕಾರಣ ಏನು?

ಆಟೋ ಚಾಲಕ ಹರ್ಷ ಎಂಬುವವರು ಪೊಲೀಸರ ಕೃತ್ಯಕ್ಕೆ ಬೇಸತ್ತು ಟ್ವಿಟರ್​ನಲ್ಲಿ ನಗರ ಪೊಲೀಸ್ ಆಯುಕ್ತರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ.

ದಯಾಮರಣ ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಪತ್ರ, ಕಾರಣ ಏನು?
ದಯಾಮರಣ ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಪತ್ರ
ಆಯೇಷಾ ಬಾನು
|

Updated on: May 25, 2023 | 11:06 AM

Share

ಬೆಂಗಳೂರು: ಆಟೋ ಚಾಲಕ ದಯಾಮರಣ(Euthanasia) ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ(Bengaluru Police Commissioner) ಪತ್ರ ಬರೆದಿರುವ ಘಟನೆ ಸಂಭವಿಸಿದೆ. ಪೊಲೀಸರು ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿ ಸೂಕ್ತವಾಗಿ ತನಿಖೆ ಮಾಡದೇ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು ಎಂಬುವುದಕ್ಕೆ ಸಾಕ್ಷಿ ಇದೆ. ನನ್ನ ಮೇಲಿನ ದೂರಿಗೆ ಮರು ತನಿಖೆ ಮಾಡಲು ಆದೇಶ ಮಾಡಿ, ಇಲ್ಲವಾದ್ರೆ ದಯಾಮರಣ ನೀಡುವಂತೆ ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಪತ್ರ ಬರೆದಿದ್ದಾರೆ.

ಆಟೋ ಚಾಲಕ ಹರ್ಷ ಎಂಬುವವರು ಪೊಲೀಸರ ಕೃತ್ಯಕ್ಕೆ ಬೇಸತ್ತು ಟ್ವಿಟರ್​ನಲ್ಲಿ ನಗರ ಪೊಲೀಸ್ ಆಯುಕ್ತರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಕಳೆದ ವರ್ಷ ಬಸವನಗುಡಿ ಮಹಿಳಾ ಠಾಣೆಯಲ್ಲಿ ಹರ್ಷ ಅವರ ಪತ್ನಿ ದೂರು ದಾಖಲಿಸಿದ್ದರು. ವರದಕ್ಷಿಣೆ ಕಿರುಕುಳ ಕೇಸ್​ನಡಿ ಹರ್ಷ ಹಾಗೂ ತಾಯಿಯ ವಿರುದ್ಧ ದೂರು ನೀಡಿದ್ದರು. ಮಹಿಳಾ ಠಾಣೆ ಇನ್ಸ್​ಪೆಕ್ಟರ್, ಸಿಬ್ಬಂದಿ ಸರಿಯಾಗಿ ತನಿಖೆ ಕೈಗೊಂಡಿಲ್ಲ. ಬಡ್ಡಿಗೆ ಸಾಲ ಪಡೆದು ಪೊಲೀಸ್ ಕಚೇರಿಗೆ ಅಲೆದಾಡ್ತಿದ್ದೇವೆ. ಸೂಕ್ತವಾಗಿ ತನಿಖೆ ಮಾಡದೇ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು ಎಂಬುವುದಕ್ಕೆ ಸಾಕ್ಷಿ ಇದೆ. ನನ್ನ ಮೇಲಿನ ದೂರಿಗೆ ಮರು ತನಿಖೆ ಮಾಡಲು ಆದೇಶ ಮಾಡಿ, ಇಲ್ಲದಿದ್ರೆ ದಯಾಮರಣ ನೀಡಿ ಎಂದು ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಹರ್ಷ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಯಾರೋ ಮಾಡಿದ ತಪ್ಪಿಗೆ ನಮಗ್ಯಾಕೆ ಶಿಕ್ಷೆ, ಆದೇಶ ಪತ್ರ ನೀಡಿ, ಇಲ್ಲ ದಯಾಮರಣಕ್ಕೆ ಅನುಮತಿ ಕೊಡಿ ಎಂದ KPSC ಅಭ್ಯರ್ಥಿಗಳು

ದಯಾ ಮರಣ ಎಂದರೇನು?

ಘೋರ ನೋವಿನಿಂದ ನರಳುತ್ತಿರುವ ವ್ಯಕ್ತಿಯ ಇಚ್ಛೆಯ ಅನುಸಾರ ನೀಡಲಾಗುವ ‘ಸಾವು’. ಅಂದರೆ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ಇನ್ನು ಸಹಿಸಿಕೊಳ್ಳುವುದು ಸಾಧ್ಯವೇ ಇಲ್ಲ ಎಂಬ ಸಂದರ್ಭದಲ್ಲಿ ತನಗೆ ಮರಣದ ದಯೆಯನ್ನು ನೀಡಿ ಎಂದು ಅರ್ಜಿ ಸಲ್ಲಿಸುತ್ತಾರೆ. ಕಾನೂನಿನ ಅಡಿಯಲ್ಲಿಯೇ ಅವರಿಗೆ ಸಾವನ್ನು ‘ಕರುಣಿಸಲಾಗುತ್ತದೆ’. ಆದರೆ, ಭಾರತ ಸಹಿತ ಹಲವು ದೇಶಗಳಲ್ಲಿ ಇದಕ್ಕೆ ಅವಕಾಶ ಇಲ್ಲ. ಇದಕ್ಕೆ ಯುಥೆನೇಸಿಯಾ ಎಂಬ ಗ್ರೀಕ್ ಪದವನ್ನು ಸಾಮಾನ್ಯವಾಗಿ ಬಳಸುತ್ತಾರೆ. ಇದರ ಅರ್ಥ ಒಳ್ಳೆಯ ಸಾವು ಎಂದು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ