ಬೆಂಗಳೂರು: ಆಟೋ ಪ್ರಯಾಣ ದರ ಏರಿಕೆಗೆ ಚಾಲಕರ ಸಂಘ ಒತ್ತಾಯ, ನಗರ ಜಿಲ್ಲಾಧಿಕಾರಿಗಳಿಗೆ ಚಾಲಕರಿಂದ ಪತ್ರ

Auto Meter Rate in Bangalore; ಪೆಟ್ರೋಲ್, ಡಿಸೇಲ್, ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಆಟೋ ಪ್ರಯಾಣ ಕೂಡ ಬೆಂಗಳೂರಿನಲ್ಲಿ ದುಬಾರಿಯಾಗುವ ಸಾಧ್ಯತೆ ಇದೆ. ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕರ ಸಂಘ ಆಗ್ರಹಿಸಿದ್ದು, ಬೆಂಗಳೂರು ಜಿಲ್ಲಾಧಿಕಾರಿಯವರನ್ನು ಆಗ್ರಹಿಸಿದೆ. ಆದರೆ, ಅಂತಿಮ ಮನಿರ್ಧಾರ ಇನ್ನಷ್ಟೇ ಪ್ರಕಟವಾಗಬೇಕಿದೆ.

ಬೆಂಗಳೂರು: ಆಟೋ ಪ್ರಯಾಣ ದರ ಏರಿಕೆಗೆ ಚಾಲಕರ ಸಂಘ ಒತ್ತಾಯ, ನಗರ ಜಿಲ್ಲಾಧಿಕಾರಿಗಳಿಗೆ ಚಾಲಕರಿಂದ ಪತ್ರ
ಆಟೋ ಪ್ರಯಾಣ ದರ ಏರಿಕೆಗೆ ಚಾಲಕರ ಸಂಘ ಒತ್ತಾಯ
Follow us
| Updated By: ಗಣಪತಿ ಶರ್ಮ

Updated on: Jun 26, 2024 | 7:37 AM

ಬೆಂಗಳೂರು, ಜೂನ್ 26: ಬೆಂಗಳೂರು ಆಟೋ ಮೀಟರ್‌ ದರ (Auto Meter Rate) ಹೆಚ್ಚಿಸುವಂತೆ ಬೆಂಗಳೂರು ಆಟೋ ಚಾಲಕರ ಸಂಘ (Auto Drivers Association)ಒತ್ತಾಯ ಮಾಡಿದೆ. ಆಟೋ ಚಾಲಕರ ಸಂಘ ಇತ್ತೀಚೆಗೆ ಬೆಂಗಳೂರು ನಗರ ಜಿಲ್ಲಾ ಉಪ ಆಯುಕ್ತರಿಗೆ ಪತ್ರ ಬರೆದು, ಬೆಂಗಳೂರಿನಲ್ಲಿ ಆಟೋ ರಿಕ್ಷಾ ದರವನ್ನು ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಪರಿಷ್ಕರಿಸಲು ಕೋರಿದೆ. ಬೆಂಗಳೂರು ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವ ಅಧಿಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಮಿಟಿಗೆ ಮಾತ್ರ ಅವಕಾಶ ಇರುವುದರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುತ್ತಿದೆ.

ಪ್ರತಿ ವರ್ಷ ದರಗಳನ್ನು ಪರಿಷ್ಕರಿಸಿದರೆ, ಆಟೋ ಚಾಲಕರು ಪ್ರಯಾಣಿಕರಿಗೆ ಸೇವೆ ನಿರಾಕರಿಸುವುದನ್ನು ತಪ್ಪಿಸಬಹುದು. ಅಲ್ಲದೆ, ಅಧಿಕ ಶುಲ್ಕ ವಿಧಿಸುವ ದೂರುಗಳನ್ನು ಕಡಿಮೆ ಮಾಡಬಹುದು ಎಂದು ಸಂಘ ಪತ್ರದಲ್ಲಿ ತಿಳಿಸಿದೆ. ಮೂರು ವರ್ಷಗಳಿಂದ ಪ್ರಯಾಣ ದರ ಏರಿಕೆಯಾಗದ ಕಾರಣ ಕನಿಷ್ಠ ಆಟೋ ದರವನ್ನು ಕೂಡ ಹೆಚ್ಚಿಸುವಂತೆ ಸಂಘ ಒತ್ತಾಯಿಸಿದೆ. ಈ ಬಗ್ಗೆ ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಇಂಧನ ಮತ್ತು ಬಿಡಿಭಾಗಗಳ ಬೆಲೆಗಳು ಮತ್ತು ಹಣದುಬ್ಬರದಿಂದ ಸಮಸ್ಯೆ ಎದುರಾಗಿದೆ ಎಂದು ಪತ್ರ ಬರೆಯಲಾಗಿದೆ. ಬೆಂಗಳೂರು ನಗರದಲ್ಲಿ ಆಟೋದರ ಪರಿಷ್ಕರಣೆಯನ್ನು 2021ರ ಡಿಸೆಂಬರ್ 20ರಂದು ಮಾಡಲಾಗಿದೆ. ನಂತರ ಪರಿಷ್ಕರಣೆ ಮಾಡಿಲ್ಲ. ನಗರದಲ್ಲಿ ಆರಂಭದ 2 ಕಿ.ಮೀ.ಗೆ 30 ರೂ. ನಂತರ ಪ್ರತಿ ಹೆಚ್ಚುವರಿ ಕಿ.ಮೀ. 15 ರೂ ದರ ನಿಗದಿಯಾಗಿದೆ. ಈ ದರ 3 ವರ್ಷಗಳ ಹಿಂದೆ ಪರಿಷ್ಕರಿಸಲಾಗಿತ್ತು. ಈಗ ಮತ್ತೆ 5 ರಿಂದ 10 ರುಪಾಯಿ ಪರಿಷ್ಕರಿಸಲು ಮನವಿ ಮಾಡಲಾಗಿದೆ. ಸದ್ಯ ಬೆಂಗಳೂರು ನಗರದಲ್ಲಿ ಕನಿಷ್ಠ 30 ರುಪಾಯಿ ಇದ್ದು, ಅದನ್ನು 40 ರುಪಾಯಿ ‌ಮಾಡಬೇಕೆಂದು ಮನವಿ ಮಾಡಲಾಗಿದೆ.

ಈ ಬಗ್ಗೆ ಮಾತಾನಾಡಿದ ಕೆಲವು ಮಂದಿ ಪ್ರಯಾಣಿಕರು, ಉಳಿದ ಎಲ್ಲಾ ದರ ಹೆಚ್ಚಳವಾದರೆ ಆಟೋ ಚಾಲಕರು ಕೂಡ ದರ ಏರಿಕೆ ಮಾಡಲೇಬೇಕಷ್ಟೆ ಎಂದಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿವೆ ತೆರಿಗೆ ಕಟ್ಟದ 7 ಲಕ್ಷ ಆಸ್ತಿಗಳು; ಇ-ಖಾತಾ ಮೂಲಕ ಬಾಕಿ ತೆರಿಗೆ ವಸೂಲಿಗೆ ಪ್ಲಾನ್

ಒಟ್ಟಿನಲ್ಲಿ ಪೆಟ್ರೋಲ್, ಡಿಸೇಲ್, ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಬೆಂಗಳೂರು ಆಟೋ ದರ ಏರಿಕೆಯ ಬರೆಯೂ ಶ್ರೀಸಾಮಾನ್ಯನಿಗೆ ತಟ್ಟುವ ಸಾಧ್ಯತೆ ಇದೆ. ಆದರೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!