AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆಯಿಂದ ನಷ್ಟ; ತಿಂಗಳಿಗೆ 10 ಸಾವಿರ ರೂ. ಪರಿಹಾರಕ್ಕೆ ಆಟೊ ಚಾಲಕರ ಆಗ್ರಹ

ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವ ಕುರಿತು ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಬೇಕು. ಈ ಮೂಲಕ ಆಟೋ ಚಾಲಕರ ಗುಂಪಿಗೆ ಸಹಾಯ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶಕ್ತಿ ಯೋಜನೆಯಿಂದ ನಷ್ಟ; ತಿಂಗಳಿಗೆ 10 ಸಾವಿರ ರೂ. ಪರಿಹಾರಕ್ಕೆ ಆಟೊ ಚಾಲಕರ ಆಗ್ರಹ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jul 13, 2023 | 7:30 PM

Share

ಬೆಂಗಳೂರು: ಮಹಿಳೆಯರಿಗೆ ಸರಕಾರಿ ಬಸ್​​​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆ (Shakti Scheme) ಜಾರಿಯಿಂದ ಆಗಿರುವ ನಷ್ಟವನ್ನು ಸರಿದೂಗಿಸಲು ಪ್ರತಿ ತಿಂಗಳಿಗೆ ತಲಾ 10 ಸಾವಿರ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರಿನ ಆಟೋ ರಿಕ್ಷಾ (Auto Rikshaw) ಚಾಲಕರು ಸರಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರು ಆಟೋ ಚಾಲಕರ ಸಂಘಗಳ ಒಕ್ಕೂಟವು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಲವಾರು ಆಟೋ ಮತ್ತು ಟ್ಯಾಕ್ಸಿ ಚಾಲಕರು ತಮಗೆ ಆಗುತ್ತಿರುವ ನಷ್ಟದ ಬಗ್ಗೆ ಸರಕಾರ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದ್ದಾರೆ.

ಈಗಾಗಲೇ ತಮ್ಮ ಆದಾಯವನ್ನು ಬೈಕ್ ಟ್ಯಾಕ್ಸಿಗಳು ಕಬಳಿಸುತ್ತಿದ್ದು, ಈಗ ಶಕ್ತಿ ಯೋಜನೆ ಜಾರಿಯಿಂದ ತಮ್ಮ ಜೀವನ ನಿರ್ವಹಣೆಯೇ ದುಸ್ತರವಾಗಿದೆ ಎಂದು ಆಟೋ ಚಾಲಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಮಸ್ಯೆಗಳಿಂದಾಗಿ ಅನೇಕ ಚಾಲಕರು ಮನೆ ಬಾಡಿಗೆ ಪಾವತಿಸಲು, ಸಾಲವನ್ನು ಮರುಪಾವತಿಸಲು ಮತ್ತು ತಮ್ಮ ಮಕ್ಕಳ ಶಾಲಾ ಶುಲ್ಕವನ್ನು ಪಾವತಿಸಲು ಹೆಣಗಾಡುತ್ತಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ಮಂಜುನಾಥ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: Bengaluru Mysuru Expressway: ವಿರುದ್ಧ ಲೇನ್​​ನಲ್ಲಿ ಬಂದ ಆಟೊ ರಿಕ್ಷಾ; ತಪ್ಪಿದ ದುರಂತ

ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವ ಕುರಿತು ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಬೇಕು. ಈ ಮೂಲಕ ಆಟೋ ಚಾಲಕರ ಗುಂಪಿಗೆ ಸಹಾಯ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಬೇಡಿಕೆಗಳಲ್ಲದೆ, ಅಸಂಘಟಿತ ವಾಣಿಜ್ಯ ಚಾಲಕರಿಗೆ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಮತ್ತು ಸರ್ಕಾರದ ವಿವಿಧ ಅಭಿವೃದ್ಧಿ ಮಂಡಳಿಗಳ ಮೂಲಕ 2 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿದರದ ಸಾಲವನ್ನು ಒದಗಿಸುವಂತೆ ಒಕ್ಕೂಟವು ಸರ್ಕಾರವನ್ನು ಒತ್ತಾಯಿಸಿದೆ ಎಂದು ವರದಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ