AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿಂದು ಸರಿಯಾದ ಸಮಯಕ್ಕೆ ಆಟೋ ಸಿಗಲ್ಲ, ಚಾಲಕರಿಂದ ವಿಧಾನಸೌಧಕ್ಕೆ ಮುತ್ತಿಗೆ ಕರೆ

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್​ನಿಂದ ಬೆಳಿಗ್ಗೆ 11ಕ್ಕೆ ಬೃಹತ್ ಆಟೋ ರ‍್ಯಾಲಿ ಮಾಡಿ ಎರಡು ಸಾವಿರ ಆಟೋಗಳ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ತಯಾರಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿಂದು ಸರಿಯಾದ ಸಮಯಕ್ಕೆ ಆಟೋ ಸಿಗಲ್ಲ, ಚಾಲಕರಿಂದ ವಿಧಾನಸೌಧಕ್ಕೆ ಮುತ್ತಿಗೆ ಕರೆ
ಪ್ರಾನಿಧಿಕ ಚಿತ್ರImage Credit source: Deccan Chronicle
Follow us
TV9 Web
| Updated By: ಆಯೇಷಾ ಬಾನು

Updated on:Dec 29, 2022 | 8:17 AM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಂದು ಸರಿಯಾದ ಸಮಯಕ್ಕೆ ಆಟೋ ಸಿಗೋದು ಡೌಟು. ಏಕೆಂದರೆ ಇಂದು ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೇಳಲಿದೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್​ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಆಟೋ ಚಾಲಕರು ಇಂದು ವಿಧಾನಸೌಧ ಮುತ್ತಿಗೆ ಹಾಕಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರ ತಯಾರಿ

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್​ನಿಂದ ಬೆಳಿಗ್ಗೆ 11ಕ್ಕೆ ಬೃಹತ್ ಆಟೋ ರ‍್ಯಾಲಿ ಮಾಡಿ ಎರಡು ಸಾವಿರ ಆಟೋಗಳ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ತಯಾರಿ ನಡೆಸಿದ್ದಾರೆ. ಈ ಪ್ರತಿಭಟನೆಗೆ 21 ಆಟೋ ಸಂಘಟನೆಗಳು ಈಗಾಗಲೇ ಸಾಥ್ ನೀಡಿವೆ. ರಾಜಧಾನಿಯ ಎರಡು ಲಕ್ಷದ ಹತ್ತು ಸಾವಿರ ಆಟೋ ಚಾಲಕರು ಈಗಾಗಲೇ ಬೆಂಬಲ ನೀಡಿದ್ದಾರೆ. ಇದರಿಂದ ಇಂದು ರಾಜಧಾನಿಯಲ್ಲಿ ಸರಿಯಾದ ಸಮಯಕ್ಕೆ ಆಟೋಗಳು ಸಿಗುವುದಿಲ್ಲ.

ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ

ದಿನದಿಂದ ದಿನಕ್ಕೆ ರಾಜಧಾನಿಯಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗ್ತಿದೆ. ಇದರಿಂದ ಆಟೋ ಚಾಲಕರು ಬೀದಿಗೆ ಬೀಳ್ತಿದ್ದಾರೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅನುಮತಿ ಇಲ್ಲದಿದ್ರು ರಾಜಾರೋಷವಾಗಿ ಸಂಚಾರ ಮಾಡುತ್ತಿವೆ. ಆರ್ಟಿಓ ಅಧಿಕಾರಿಗಳು ಬೈಕ್ ಟ್ಯಾಕ್ಸಿಗಳನ್ನು ಮಟ್ಟ ಹಾಕುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರ ಎಲೆಕ್ಟ್ರಿಕ್ ಬೈಕ್​ಗಳಿಗೆ ಅನುಮತಿ ನೀಡಿದೆ. ಮೊದಲ ಹಂತದಲ್ಲಿ 100 ಇ- ಬೈಕ್ ಗಳನ್ನ ರಸ್ತೆಗಿಳಿಸಲು ಬೌನ್ಸ್ ಕಂಪನಿ ನಿರ್ಧರಿಸಿದೆ. ನಂತ್ರ ಹಂತ ಹಂತವಾಗಿ 1000 ಇ- ಬೈಕ್ ಗಳನ್ನ ರಸ್ತೆಗಿಳಿಸಲು ನಿರ್ಧಾರ ಮಾಡಲಾಗಿದೆ. ಈ ಹಿಂದೆ ಕೂಡ ಬೌನ್ಸ್ ಕಂಪನಿ ಬೈಕ್ ಸೇವೆ ನೀಡುತ್ತಿತ್ತು. ಕೊರೊನಾ ಸಮಯದಲ್ಲಿ ಬೈಕ್ ಸೇವೆಯನ್ನ ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಇ- ಬೈಕ್ ಸೇವೆ ನೀಡಲು ಅನುಮತಿ ಕೇಳಿ ಬೌನ್ಸ್ ಕಂಪನಿ ಅರ್ಜಿ ಸಲ್ಲಿಸಿದೆ.

ಆಟೋ ಚಾಲಕರ ಪ್ರಮುಖ ಬೇಡಿಕೆಗಳು

1.ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಬೇಕು 2.ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ವಾಪಸ್ ಪಡೆಯಬೇಕು

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:17 am, Thu, 29 December 22