Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಕಾಲಕ್ಕೆ ಎರಡು ಆ್ಯಪ್​ಗಳ ಮೂಲಕ ಬಾಡಿಗೆ ಮನವಿ ಸ್ವೀಕರಿಸಿದ ಆಟೋ ಚಾಲಕ; ಟ್ವಿಟರ್​​ನಲ್ಲಿ ಸ್ವಾರಸ್ಯಕರ ಚರ್ಚೆ

Peak Bengaluru and public transport; ಸಾರ್ವಜನಿಕ ಸಾರಿಗೆಯಲ್ಲಿನ ಸಮಸ್ಯೆಗಳಿಗೆ ಹೆಸರುವಾಸಿಯಾದ ಬೆಂಗಳೂರಿನಲ್ಲಿ ಕೆಲವೊಂದು ಆಟೋ ಚಾಲಕರು ಒಂದಕ್ಕಿಂತ ಹೆಚ್ಚಿನ ಆ್ಯಪ್​ಗಳ ಮೂಲಕ ಸೇವೆ ಒದಗಿಸುತ್ತಾರೆ. ಆದರೆ, ಆಟೋರಿಕ್ಷಾ ಚಾಲಕನು ಎರಡು ವಿಭಿನ್ನ ಪ್ಲಾಟ್‌ಫಾರ್ಮ್‌ಗಳಲ್ಲಿ ಏಕಕಾಲಕ್ಕೆ ರೈಡ್​ ಮನವಿ ಸ್ವೀಕರಿಸಿರುವುದು ನೆಟ್ಟಿಗರ ಸ್ವಾರಸ್ಯಕರ ಚರ್ಚೆಗೆ ನಾಂದಿ ಹಾಡಿದೆ.

ಏಕಕಾಲಕ್ಕೆ ಎರಡು ಆ್ಯಪ್​ಗಳ ಮೂಲಕ ಬಾಡಿಗೆ ಮನವಿ ಸ್ವೀಕರಿಸಿದ ಆಟೋ ಚಾಲಕ; ಟ್ವಿಟರ್​​ನಲ್ಲಿ ಸ್ವಾರಸ್ಯಕರ ಚರ್ಚೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Aug 08, 2023 | 6:24 PM

ಬೆಂಗಳೂರು: ಬೆಂಗಳೂರಿನ ಆಟೋರಿಕ್ಷಾ (Auto Rikshaw) ಚಾಲಕರೊಬ್ಬರು ಎರಡು ವಿಭಿನ್ನ ಅಗ್ರಿಗೇಟರ್ ಆ್ಯಪ್​​ಗಳಲ್ಲಿ ಏಕಕಾಲದಲ್ಲಿ ಬಾಡಿಗೆಯ ಬೇಡಿಕೆಯನ್ನು ಸ್ವೀಕರಿಸಿರುವ ಬಗ್ಗೆ ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್​​ನಲ್ಲಿ (Twitter) ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದು, ಸ್ವಾರಸ್ಯಕರ ಚರ್ಚೆಗೆ ನಾಂದಿಹಾಡಿದೆ. Harsh.fig ಎಂಬ ಟ್ವಿಟರ್​​ ಹ್ಯಾಂಡಲ್​ನಿಂದ ಸಂದೇಶ ಪೋಸ್ಟ್ ಮಾಡಲಾಗಿದ್ದು, ‘ಪೀಕ್ ಬೆಂಗಳೂರಿನ ಕ್ಷಣ’ ಎಂದು ಅವರು ಉಲ್ಲೇಖಿಸಿದ್ದಾರೆ.

2 ವಿಭಿನ್ನ ಸ್ಥಳಗಳು, 2 ವಿಭಿನ್ನ ಅಪ್ಲಿಕೇಶನ್‌ಗಳು, 2 ವಿಭಿನ್ನ ಫೋನ್‌ಗಳು, ಒಂದೇ ಆಟೋ ಒಬ್ಬನೇ ಚಾಲಕ @peakbengaluru? ಎಂದು ಬಳಕೆದಾರರು ಪೋಸ್ಟ್ ಮಾಡಿದ್ದಾರೆ.

ದಶರತ್ ಎಂಬ ಒಬ್ಬನೇ ಚಾಲಕನ ಹೆಸರು ತೋರಿಸುವ ಎರಡು ವಿಭಿನ್ನ ಆ್ಯಪ್​ಗಳ ಸ್ಕ್ರೀನ್‌ಶಾಟ್ ಅನ್ನು ಸಹ ಅವರು ಹಂಚಿಕೊಂಡಿದ್ದಾರೆ.

‘ದಶರತ್‌ ನೀಡ್ ಎ ರೈಸ್’ ಎಂದು ಮತ್ತೊಂದು ಪೋಸ್ಟ್​​ನಲ್ಲಿ ಅವರು ಉಲ್ಲೇಖಿಸಿದ್ದಾರೆ.

Harsh.fig ಟ್ವೀಟ್​​ಗೆ ಪ್ರತಿಕ್ರಿಯಿಸಿದ ಮಾಳವಿಕಾ ಸಿಂಗ್ ಎಂಬವರು, ಇದು ಬಹಳ ಆಸಕ್ತಿದಾಯಕವಾಗಿದೆ. ಸಮಯದ ಸವಾಲನ್ನೂ ಮೀರಿರುವುದು ಇದು ಎಂದು ಉಲ್ಲೇಖಿಸಿದ್ದಾರೆ.

ಸಾರ್ವಜನಿಕ ಸಾರಿಗೆಯಲ್ಲಿನ ಸಮಸ್ಯೆಗಳಿಗೆ ಹೆಸರುವಾಸಿಯಾದ ಬೆಂಗಳೂರಿನಲ್ಲಿ ಆಟೋರಿಕ್ಷಾ ಚಾಲಕನು ಎರಡು ವಿಭಿನ್ನ ಪ್ಲಾಟ್‌ಫಾರ್ಮ್‌ಗಳಲ್ಲಿ ಏಕಕಾಲಕ್ಕೆ ರೈಡ್​ ಮನವಿ ಸ್ವೀಕರಿಸಿರುವುದು ನೆಟ್ಟಿಗರ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಬೆಂಗಳೂರು: ಪತಿಯ ಬಣ್ಣ ಕಪ್ಪೆಂದು ಅವಹೇಳನ ಮಾಡಿದ ಪತ್ನಿಗೆ ವಿಚ್ಛೇದನ ದಯಪಾಲಿಸಿದ ಹೈಕೋರ್ಟ್!

ಸದಾ ಸಂಚಾರ ದಟ್ಟಣೆಯಿಂದ ಕೂಡಿರುವ ಬೆಂಗಳೂರಿನಲ್ಲಿ ಹಲವಾರು ಆ್ಯಪ್ ಆಧಾರಿತ ಆಟೋ, ಟ್ಯಾಕ್ಸಿಗಳು ಕಾರ್ಯನಿರ್ವಹಿಸುತ್ತಿವೆ. ಕೆಲವೊಂದು ಆಟೋ ಚಾಲಕರು ಒಂದಕ್ಕಿಂತ ಹೆಚ್ಚಿನ ಆ್ಯಪ್​ಗಳ ಮೂಲಕ ಸೇವೆ ಒದಗಿಸುತ್ತಾರೆ. ಇದೀಗ ಒಬ್ಬರೇ ಚಾಲಕ ಎರಡು ವಿಭಿನ್ನ ಆ್ಯಪ್​ಗಳ ಮೂಲಕ ಏಕಕಾಲದಲ್ಲಿ ರೈಡ್​ಗೆ ಮನವಿ ಸ್ವೀಕರಿಸಿದ ಅಪರೂಪದ ವಿದ್ಯಮಾನ ಸಾಮಾಜಿಕ ಜಾಲತಾಣಗಳಲ್ಲಿ ಸ್ವಾರಸ್ಯಕರ ಚರ್ಚೆಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು