ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿಗೆ ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಆರೋಪ: ಹಿರಿಯ ವೈದ್ಯಾಧಿಕಾರಿ ಅಮಾನತು
ಆಯುರ್ವೇದ, ಯುನಾನಿ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟರಮಣಯ್ಯ ವಿರುದ್ದ ಕೊಲೆ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿಬಂದ ಹಿನ್ನೆಲೆ ಅಮಾನತು ಮಾಡಿ ಆರೋಗ್ಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಆಯುರ್ವೇದ, ಯುನಾನಿ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟರಮಣಯ್ಯ (Dr. Venkataramanaiah) ವಿರುದ್ದ ಕೊಲೆ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿಬಂದ ಹಿನ್ನೆಲೆ ಅಮಾನತು ಮಾಡಿ ಆರೋಗ್ಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021 ರ ನಿಯಮ 3(1) (i) (ii) (iii) ಉಲ್ಲಂಘಿಸಿರುವುದರಿಂದ ಕರ್ನಾಟಕ ನಾಗರಿಕ ಸೇವಾ 1957ರ ನಿಯಮ 10(3) ಪ್ರಕಾರ ಅಧಿಕಾರವನ್ನು ಚಲಾಯಿಸಿ, ಡಾ. ವೆಂಕಟರಾಮಯ್ಯ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ.
ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿ ಎಸ್ ಶೈಲಜ ಎನ್ನುವವರು ಫೆಬ್ರವರಿ 6ರಂದು ಮಧ್ಯಾಹ್ನ ಸುಮಾರು 4.30 ವೇಳೆಯಲ್ಲಿ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಗಮಿಸಿದ ಡಾ. ವೆಂಕಟರಾಮಯ್ಯ ಕೊಲೆ ಬೆದರಿಕೆ ಹಾಕಿ ಬೈದು ಹೀಯಾಳಿಸಿ ಕರ್ತವ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎನ್ನಲಾಗುತ್ತಿದೆ. ಇಂತಹ ಬೆದರಿಕೆಗಳಿಂದ ಕೆಲಸ ಮಾಡಲು ತೊಂದರೆ ಆಗುತ್ತಿದೆ ಎಂದು ಎಸ್ ಶೈಲಜ ಅವರು ಫೆಬ್ರವರಿ 7ರಂದು ದೂರು ನೀಡಿದ್ದಾರೆ.
ಇದನ್ನೂ ಓದಿ: Dharwad News: ದೋಷಯುಕ್ತ ಮೊಬೈಲ್ ಸರಬರಾಜು: ಆಸಿಸ್ ಕಂಪನಿಗೆ ರೂ. 78 ಸಾವಿರ ದಂಡ
ಮುಖ್ಯ ಆಡಳಿತಾಧಿಕಾರಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ್ದಾರೆ. ಆದ್ದರಿಂದ, ಡಾ. ವೆಂಕಟರಾಮಯ್ಯ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳನ್ವಯ ಶಿಸ್ತು ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.
ಇದನ್ನೂ ಓದಿ: Bengaluru News: ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ಎಫ್ಐಆರ್ ದಾಖಲು
ಸರ್ಕಾರಿ ನೌಕರರಿಗೆ ಸಲ್ಲದ ರೀತಿಯಲ್ಲಿ ವರ್ತಿಸಿ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021 ರ ನಿಯಮ 3(1) (i) (ii) (iii) ಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಹಾಗಾಗಿ ಡಾ. ವೆಂಕಟರಾಮಯ್ಯ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತ್ತುಗೊಳಿಸಲು ತೀರ್ಮಾನಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.