Ayushmati Clinic: ಮಹಿಳೆಯರಿಗಾಗಿ ಪ್ರತ್ಯೇಕ ‘ಆಯುಷ್ಮತಿ ಕ್ಲಿನಿಕ್‌ : ಆರೋಗ್ಯ ಸಚಿವ ಸುಧಾಕರ್‌ ಪ್ರಕಟ

| Updated By: ಸಾಧು ಶ್ರೀನಾಥ್​

Updated on: Dec 15, 2022 | 4:04 PM

ಹೊಸ ವರ್ಷಕ್ಕೆ ಮಹಿಳೆಯರಿಗೆ ನಮ್ಮ ಸರ್ಕಾರದ ಉಡುಗೊರೆಯಾಗಿ ಪ್ರಾರಂಭವಾಗಲಿದೆ 'ಆಯುಷ್ಮತಿ ಕ್ಲಿನಿಕ್'. ಇದು ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ನಮ್ಮ ಸರ್ಕಾರದ ಉಪಕ್ರಮ - ಆರೋಗ್ಯ ಸಚಿವ ಸುಧಾಕರ್‌ ಟ್ವೀಟ್

Ayushmati Clinic: ಮಹಿಳೆಯರಿಗಾಗಿ ಪ್ರತ್ಯೇಕ ‘ಆಯುಷ್ಮತಿ ಕ್ಲಿನಿಕ್‌ : ಆರೋಗ್ಯ ಸಚಿವ ಸುಧಾಕರ್‌ ಪ್ರಕಟ
ಮಹಿಳೆಯರಿಗಾಗಿ ಪ್ರತ್ಯೇಕ ‘ಆಯುಷ್ಮತಿ ಕ್ಲಿನಿಕ್‌
Follow us on

ರಾಜ್ಯದಲ್ಲಿ ನಮ್ಮ ಕ್ಲಿನಿಕ್‌ ಆರೋಗ್ಯ ವ್ಯವಸ್ಥೆ ಜಾರಿಗೊಳಿಸಿರುವ ಸಂದರ್ಭದಲ್ಲಿ ಮಹಿಳೆಯರಿಗಾಗಿ ‘ಆಯುಷ್ಮತಿ’ ಹೆಸರಿನಲ್ಲಿ ಪ್ರತ್ಯೇಕ ಕ್ಲಿನಿಕ್‌ (Ayushmati Clinic) ತೆರೆಯಲು ಸರ್ಕಾರ ನಿರ್ಧರಿಸಿದೆ. ಈ ಕ್ಲಿನಿಕ್‌ನಲ್ಲಿ ವೈದ್ಯರು, ನರ್ಸಿಂಗ್‌ ಸಿಬ್ಬಂದಿ ಸೇರಿ ಎಲ್ಲ ಸಿಬ್ಬಂದಿಯೂ ಮಹಿಳೆಯರೇ ಇರಲಿದ್ದಾರೆ. ಹೊಸ ವರ್ಷಕ್ಕೆ ಮಹಿಳೆಯರಿಗೆ (women) ಇದು ನಮ್ಮ ಸರ್ಕಾರದ ಉಡುಗೊರೆಯಾಗಿ ಪ್ರಾರಂಭವಾಗಲಿದೆ. ‘ಆಯುಷ್ಮತಿ ಕ್ಲಿನಿಕ್’ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ (health) ನಮ್ಮ ಸರ್ಕಾರದ ಉಪಕ್ರಮ ಎಂದು ಟ್ವೀಟ್​ ಮಾಡಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ( Dr K Sudhakar) ತಿಳಿಸಿದ್ದಾರೆ.

ನಮ್ಮ ಕ್ಲಿನಿಕ್‌ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಮಹಿಳೆಯರಿಗಾಗಿಯೇ ‘ಆಯುಷ್ಮತಿ’ ಹೆಸರಿನ ಪ್ರತ್ಯೇಕ ಕ್ಲಿನಿಕ್‌ ತೆರೆಯಲು ಸರ್ಕಾರ ನಿರ್ಧರಿಸಿದೆ. ಈ ಕ್ಲಿನಿಕ್‌ನಲ್ಲಿ ವೈದ್ಯರು, ನರ್ಸಿಂಗ್‌ ಸಿಬ್ಬಂದಿ ಸೇರಿ ಎಲ್ಲ ಸಿಬ್ಬಂದಿ ಮಹಿಳೆಯರೇ ಇರಲಿದ್ದಾರೆ. ತಾಯಂದಿರು ಮತ್ತು ಶಿಶು ಮರಣ ತಪ್ಪಿಸಲು ‘ಆಯುಷ್ಮತಿ’ ಹೆಚ್ಚು ಸಹಕಾರಿಯಾಗಲಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜನವರಿಯಲ್ಲಿ ಈ ಕ್ಲಿನಿಕ್‌ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಜನವರಿಯಲ್ಲಿ ಮೋದಿ ಕಾರ್ಡ್‌ ವಿತರಣೆ:

ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸೌಲಭ್ಯ ಕಲ್ಪಿಸಿದ್ದು, ಈವರೆಗೆ 1.20 ಕೋಟಿ ಆಯುಷ್ಮಾನ್‌ ಭಾರತ್‌ ನಗರ ಆರೋಗ್ಯ ಕಾರ್ಡ್‌ ಸಿದ್ಧಪಡಿಸಲಾಗಿದೆ. ಜನವರಿಯಲ್ಲಿ ಪ್ರಧಾನಿ ಮೋದಿ ಈ ಕಾರ್ಡ್‌ಗಳ ವಿತರಣೆಗೆ ಚಾಲನೆ ನೀಡಲಿದ್ದಾರೆ ಎಂದು ಸುಧಾಕರ್‌ ತಿಳಿಸಿದ್ದಾರೆ. ಆಯುಷ್ಮಾನ್‌ ಭಾರತ್‌ ಅಡಿ ಪ್ರತಿವರ್ಷ ಪ್ರತಿ ಬಡ ಕುಟುಂಬಕ್ಕೆ 5 ಲಕ್ಷದವರೆಗೆ ಆರೋಗ್ಯ ಚಿಕಿತ್ಸೆಗೆ ಸರ್ಕಾರದಿಂದ ವೆಚ್ಚ ಮಾಡಲಾಗುತ್ತಿದೆ. ಎಪಿಎಲ್‌ ಕಾರ್ಡ್‌ದಾರರಿಗೂ ಆರೋಗ್ಯ ಸೇವೆಯಲ್ಲಿ ಶೇ. 30ರಷ್ಟು ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುತ್ತಿದೆ. ಇಲ್ಲಿವರೆಗೆ ಆಯುಷ್ಮಾನ್‌ ಭಾರತ್‌ ಯೋಜನೆಯಡಿ 5 ಸಾವಿರ ಕೋಟಿ ವೆಚ್ಚ ಮಾಡಲಾಗಿದ್ದು, ಇದರಲ್ಲಿ ಶೇ. 70ರಷ್ಟು ಜನ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇದು ಸರ್ಕಾರಿ ಆಸ್ಪತ್ರೆ ಮೇಲೆ ಜನರ ವಿಶ್ವಾಸವನ್ನು ತೋರಿಸುತ್ತದೆ. ಜತೆಗೆ ಸರ್ಕಾರಿ ಆಸ್ಪತ್ರೆಗಳನ್ನು ಟೀಕಿಸುವವರಿಗೆ ಉತ್ತರವನ್ನೂ ನೀಡಿದಂತಾಗಿದೆ ಎಂದು ಅವರು ಸೂಕ್ಷ್ಮವಾಗಿ ಹೇಳಿದರು.

ಇದನ್ನೂ ಓದಿ:

ರೇಬೀಸ್ ಇನ್ನು ಅಧಿಸೂಚಿತ ಕಾಯಿಲೆ, ನಾಯಿ ಕಡಿತದ ರೇಬೀಸ್ ಕಾಯಿಲೆ 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ: ಆರೋಗ್ಯ ಸಚಿವ ಸುಧಾಕರ್

ಬಿಪಿ, ಶುಗರ್‌ ಕಾಯಿಲೆಗಳಿಗಾಗಿ ರಾಜ್ಯದಲ್ಲಿ ಶೇ. 60ರಷ್ಟು ಜನರ ತಪಾಸಣೆಯನ್ನು ಪ್ರತಿವರ್ಷ ಮಾಡಲಾಗುತ್ತಿದೆ. ಶೇ. 100ರಷ್ಟು ಜನರ ತಪಾಸಣೆ ನಡೆಸಬೇಕೆಂಬುದು ಸರ್ಕಾರದ ಗುರಿ. ಈ ನಿಟ್ಟಿನಲ್ಲಿ ಜನವರಿಯಿಂದ ಎನ್‌ಸಿಡಿ ಕ್ಲಿನಿಕ್‌ಗಳ ಮೂಲಕ ಬಿಪಿ, ಶುಗರ್‌ ಕುರಿತು ಹೆಚ್ಚು ತಪಾಸಣೆ ನಡೆಸಲು ಶಿಬಿರ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 30 ವರ್ಷ ದಾಟಿದ ಪ್ರತಿಯೊಬ್ಬರು ಪ್ರತಿವರ್ಷ ಒಂದು ಸಲ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಇದರಿಂದ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ